ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನ ಹಾಗೂ ಪರಿಸರ ದಿನದ ಅಂಗವಾಗಿ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಸಸಿ ಮತ್ತು ಮರ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಮುಖಂಡರಾದ ಚಂದ್ರಶೇಖರ ಎನ್.ಪಟವಾರಿ ಮಾತನಾಡಿ, “ನಾಲ್ವಡಿ ಕೃಷ್ಣರಾಜ ಒಡೆಯರು ರಾಜ್ಯದ ಬಹುಜನ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದು, ಸುಸ್ಥಿರ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ ಮಹಾನ್ ನಾಯಕರು” ಎಂದು ಹೇಳಿದರು.
“ಪರಿಸರ ಸಂರಕ್ಷಣೆಯಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮರ-ಗಿಡಗಳನ್ನು ನೆಡುವುದರಿಂದ ಪರಿಸರದಲ್ಲಿ ಶುದ್ಧ ಹಾಗೂ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ. ಮಹಾಪುರುಷರ ಆದರ್ಶಗಳನ್ನು ಸ್ಮರಿಸಿ ಅವರ ಜನ್ಮದಿನಗಳನ್ನು ಆಚರಿಸುವುದರಿಂದ ಸಮಾಜದಲ್ಲಿ ಜಾಗೃತಿ ಮತ್ತು ಸದ್ಭಾವನೆ ಬೆಳೆಯುತ್ತದೆ” ಎಂದು ತಿಳಿಸಿದರು.
“ಪರಿಸರ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ವಿಶೇಷವಾಗಿ ಯುವಜನರು ಬಹುಜನ ಮಹಾಪುರುಷರ ಆದರ್ಶಗಳನ್ನು ಅನುಸರಿಸಿ ಪರಿಸರ ಸಂರಕ್ಷಣೆ ಹಾಗೂ ಸಮಾಜದಲ್ಲಿ ಶುದ್ಧವಾದ ವಾತಾವರಣ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಕರೆ ನೀಡಿದರು.
ಇದನ್ನೂ ಓದಿ : ಬೀದರ್ | ಮರಕ್ಕೆ ಮಹಾರಾಷ್ಟ್ರ ಸಾರಿಗೆ ಬಸ್ ಡಿಕ್ಕಿ : ಹಲವರಿಗೆ ಗಾಯ, ಬ್ರಿಮ್ಸ್‌ಗೆ ದಾಖಲು
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.




