ಬೀದರ್‌ | ಕರ್ತವ್ಯ ಲೋಪ, ದುರ್ನಡತೆ : ಒಂದೇ ದಿನ ಇಬ್ಬರು ಪಿಡಿಒ ಸಸ್ಪೆಂಡ್

Date:

ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಜಿಲ್ಲೆಯ ಇಬ್ಬರು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ.

- Advertisement -

ಹುಮನಾಬಾದ್ ತಾಲೂಕಿನ ಸಿತಾಳಗೇರಾ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಬೀರಪ್ಪಾ ಹಾಗೂ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯಿತಿ ಪಿಡಿಒ ಅಬ್ದುಲ್ ರಜಾಕ್ ಅಮಾನತುಗೊಂಡವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಸಿತಾಳಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಂಬೂರ ಗ್ರಾಮದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಕುಡಿಯುವ ನೀರಿನ ಮೂಲಗಳ ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ್ದು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರಿಗೆ ಬಾಕಿ ಇರುವ ಗೌರವಧನ ಪಾವತಿಗೆ ಸಂಬಂಧಿಸಿದಂತೆ ಪಂಚಾಯಿತಿ ಖಾತೆಯಲ್ಲಿ ಹಣ ಇಲ್ಲದಿದ್ದರೂ ಚೆಕ್‌ ನೀಡಿ ಕರ್ತವ್ಯದಲ್ಲಿ ಲೋಪ ಎಸಗಿದಕ್ಕೆ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಿ, ಸದರಿ ನೋಟಿಸ್‌ಗೆ ಪಿಡಿಒ ಸಮಜಾಯಿಸಿ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಲಾಗಿತ್ತು. ಪಿಡಿಒ ಮೇಲಿನ ಆರೋಪಗಳು ಸಾಬೀತಾಗಿರುವುದಾಗಿ ದೃಢಪಟ್ಟಿರುವುದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮುಡಬಿ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ಬಿಡುಗಡೆಯಾದ ಅನುದಾನದ ವೆಚ್ಚಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸುವಲ್ಲಿ ವಿಫಲರಾಗಿರುವುದು ಹಾಗೂ ಸಂಬಂಧಿಸಿದ ಹಣಕಾಸು ವ್ಯವಹಾರಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಆರೋಪದ ಹಿನ್ನೆಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯತ್‌ ಪಿಡಿಒ ಅಬ್ದುಲ್ ರಜಾಕ್ ಅವರನ್ನು ಅಮಾನತುಗೊಳಿಸಲಾಗಿದೆ.

ಮುಡಬಿ ಗ್ರಾಮ ಪಂಚಾಯಿತಿಯಲ್ಲಿ ಸುಮಾರು ₹34.04 ಲಕ್ಷ ಮೊತ್ತದ ಎಫ್‌ಟಿಒ (ಎಫ್‌ಟಿಒ)ಗಳನ್ನು ಸೃಷ್ಟಿಸಲಾಗಿದ್ದರೂ, ಅವುಗಳ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಖಜಾನೆಗೆ ಸಲ್ಲಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ತನಿಖೆಯಲ್ಲಿ ಕಂಡುಬಂದಿದೆ.

ಈ ಕುರಿತು ಬಸವಕಲ್ಯಾಣ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರು ಹಲವು ಬಾರಿ ಸೂಚನೆ ನೀಡಿದ್ದರೂ ಕ್ರಮ ಕೈಗೊಳ್ಳದಿರುವುದು ಗಮನಕ್ಕೆ ಬಂದಿದೆ. ಇದಲ್ಲದೆ, ಗ್ರಾಮ ಪಂಚಾಯಿತಿಯ ದೈನಂದಿನ ಕಾರ್ಯಗಳಲ್ಲಿ ಹಾಜರಿರದಿರುವುದು, ಸಾರ್ವಜನಿಕರಿಂದ ದೂರುಗಳು ಬಂದಿರುವುದು ಹಾಗೂ ಮೇಲಾಧಿಕಾರಿಗಳ ನೋಟಿಸ್‌ಗೆ ಸಮರ್ಪಕ ಉತ್ತರ ನೀಡದಿರುವುದು ಸಹ ಆರೋಪಗಳಲ್ಲಿ ಸೇರಿವೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.‌

ಇದನ್ನೂ ಓದಿ : ಜುಲೈ 3ಕ್ಕೆ ಬೆಂಗಳೂರಿನಲ್ಲಿ ದಲಿತ ಜನಾಗೃಹ ಸಮಾವೇಶ

ಕರ್ನಾಟಕ ನಾಗರಿಕ ಸೇವೆ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ-10(1)(ಡಿ) ಅಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಇಬ್ಬರು ಪಿಡಿಒಗಳಾದ ರಮೇಶ ಬೀರಪ್ಪಾ ಹಾಗೂ ಅಬ್ದುಲ್ ರಜಾಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ತೊರೆಯುವಂತಿಲ್ಲ. ಕೆಸಿಎಸ್‌ಆರ್ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...