ಬೀದರ್‌ | ಹುಮನಾಬಾದ್‌ ಸರ್ಕಾರಿ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಲು ಎಸ್‌ಡಿಪಿಐ ಆಗ್ರಹ

Date:

ಹುಮನಾಬಾದ್‌ ಸರಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕಲ್ಪಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಆಸ್ಪತ್ರೆಯೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದೆ.

- Advertisement -

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಶೇಖ್‌ ಮಕ್ಸೂದ್‌ ಮಾತನಾಡಿ, ʼತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಪ್ರತಿದಿನ ಸುಮಾರು 600 ರಿಂದ 800 ಹೊರ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಅಗತ್ಯ ಮೂಲ ಸೌಲಭ್ಯಗಳ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದಾರೆ. ಆಂಬುಲೆನ್ಸ್ ಸೇವೆ ಸಮಯಕ್ಕೆ ಸರಿಯಾಗಿ ಲಭ್ಯವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ನಿರ್ಲಕ್ಷ ವಹಿಸಲಾಗುತ್ತಿದೆ. ಔಷಧಿಗಳ ಕೊರತೆಯಿಂದ ಬಡ ರೋಗಿಗಳು ಹೊರಗಿನ ಮೆಡಿಕಲ್ ಅಂಗಡಿಗಳಲ್ಲಿ ಹಣ ನೀಡಿ ಔಷಧಿ ಖರೀದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆʼ ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ʼವೈದ್ಯರು ಆಸ್ಪತ್ರೆಗೆ ಬಾರದೆ ತಮ್ಮ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ವೆಂಟಿಲೇಟರ್, ತೀವ್ರ ನಿಘಾ ಘಟಕ (ಐಸಿಯು) ಇದ್ದರೂ ಸಮರ್ಪಕವಾಗಿ ಬಳಸುತ್ತಿಲ್ಲ. ಅಪಘಾತ ಹಾಗೂ ಹೃದಯಾಘಾತ ಪ್ರಕರಣಗಳಿಗೆ ತುರ್ತು ಚಿಕಿತ್ಸೆ ನೀಡದೆ ಜಿಲ್ಲಾ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗುತ್ತಿದೆʼ ಎಂದು ಆರೋಪಿಸಿದ್ದಾರೆ.

ಆಸ್ಪತ್ರೆಯ ಅವ್ಯವಸ್ಥೆಯಿಂದಾಗಿ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಸಹಿಸಲಾಗುವುದಿಲ್ಲ. ಕೂಡಲೇ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಲ ಮೂಲ ಸೌಕರ್ಯ ಒದಗಿಸಿ, ಸಮರ್ಪಕ ಸೇವೆ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಸ್ಪತ್ರೆಯ ಮುಂದೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಪದಾಧಿಕಾರಿಗಳು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ವಿಜಯ್ ಅನಿರೀಕ್ಷಿತ ಗೆಲುವು- ದ್ರಾವಿಡ ದನಿ ಉಡುಗಿದ ದ್ಯೋತಕವೇ?

ಈ ಸಂಧರ್ಭದಲ್ಲಿ ಪ್ರಮುಖರಾದ ತೌಹೀದ್ ಹಾಗೂ ಸೈಯದ್ ಇರ್ಫಾನ್ ಉಲ್ಲಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...