ಹುಮನಾಬಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ

Date:

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯ ಶಿಕ್ಷಣದಷ್ಟೇ ಸಾಂಸ್ಕೃತಿಕ ಚಟುವಟಿಕೆಗಳೂ ಮಹತ್ವದ್ದಾಗಿವೆ. ಕೇವಲ ಅಂಕ ಗಳಿಸುವ ವಿದ್ಯಾರ್ಥಿಗಳನ್ನು ರೂಪಿಸುವುದಕ್ಕಿಂತ ಉತ್ತಮ ವ್ಯಕ್ತಿತ್ವ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿ ಹೊಂದಿರುವ ಪ್ರಜ್ಞಾವಂತ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ನಿಜವಾದ ಉದ್ದೇಶವಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಗಂಗಶೆಟ್ಟಿ ಹೇಳಿದರು.

- Advertisement -

ಹುಮನಾಬಾದ್‌ ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದ ಬಸವತೀರ್ಥ ಪದವಿ ಪೂರ್ವ ಕಾಲೇಜು ವತಿಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಒಕ್ಕಲಿಗ ರಾಜಕಾರಣದ ಅಸ್ಮಿತೆ: ಪಾರಂಪರಿಕ ಪ್ರಾಬಲ್ಯ ಮತ್ತು ಹೊಸ...

ರಾಜ್ಯದ ಒಕ್ಕಲಿಗ ರಾಜಕಾರಣವು ಇಂದು ಒಂದು ಮಹತ್ವದ ತಿರುವಿನಲ್ಲಿದೆ. ಒಂದು ಕಡೆ ದಶಕಗಳ ಅನುಭವ, ಭಾವನಾತ್ಮಕ ಬಾಂಧವ್ಯ ಮತ್ತು ಪಾರಂಪರಿಕ ಮತಬ್ಯಾಂಕ್ ಹೊಂದಿರುವ ದೇವೇಗೌಡರ ಕುಟುಂಬವಿದ್ದರೆ, ಇನ್ನೊಂದು ಕಡೆ ಆಕ್ರಮಣಕಾರಿ ರಾಜಕೀಯ ತಂತ್ರಗಾರಿಕೆ,...

ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಈ ಹಂತದಲ್ಲಿ ಪಠ್ಯ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಭಾಗವಹಿಸಲು ಅವಕಾಶ ಕಲ್ಪಿಸಬೇಕು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಹೊರತರುವುದರ ಜೊತೆಗೆ ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದರು.

ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದು, ಹೊಸ ಅನುಭವ ಪಡೆಯುವುದು ಹಾಗೂ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಕಾರ್ಯಾಧ್ಯಕ್ಷ ಕೇಶವರಾವ ತಳಗಟ್ಟೇಕರ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಓಂಪ್ರಕಾಶ ದಡ್ಡೆ, ಮನ್ಮಥ ಡೋಳೆ, ಶಿವರಾಜ ಬಿರಾದಾರ, ಶಿವರಾಜ ನಾಯಕ, ಭಗವಾನ ಬಿರಾದಾರ, ಮಾಣಿಕ ರೆಡ್ಡಿ, ಸೂರ್ಯಕಾಂತ ಐನಾಪುರ ಹಾಗೂ ಮಸ್ತಾನ್ ಪಟೇಲ್ ಸೇರಿದಂತೆ ಸೋಮಯ್ಯ ಸ್ವಾಮಿ ಹಿರೇಮಠ, ಗುಂಡಯ್ಯ ಎಸ್. ತೀರ್ಥ ಸೇರಿದಂತೆ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಪೋಷಣ ಅಭಿಯಾನ ಯೋಜನೆಯಡಿ 2 ಹುದ್ದೆಗಳಿಗೆ ಅರ್ಜಿ ಆಹ್ವಾನ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ.25ರಿಂದ ಬೆಂಗಳೂರಿನಲ್ಲಿ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಹೋರಾಟ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುತ್ತಿರುವ ಅಕ್ಷರ ದಾಸೋಹ ನೌಕರರ...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ ಪ್ರಕೃತಿನ ಮರ್ತಾನ’; ಆಧುನಿಕ ತಲೆಮಾರಿನ ಕಂಬಳಿಯ ಕತೆ

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು...

ಕಾವೇರಿ ಅರ್ಜಿ ವಜಾ |’ವಕೀಲರಿಗೆ ವ್ಯರ್ಥ ಮಾಡಲು ಸಾಕಷ್ಟು ಹಣವಿದೆ’; ತಮಿಳುನಾಡಿಗೆ ಸುಪ್ರೀಂ ತರಾಟೆ! 

ದಶಕಗಳ ಹಳೆಯ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು...

ಗುಜರಾತ್ | ಖಾಸಗಿ ವಾಹನಗಳ ಮೇಲೆ ಜಾತಿ ಸೂಚಕ ಬರಹ, ಚಿಹ್ನೆಗಳಿಗೆ ನಿಷೇಧ!

ಸಾರ್ವಜನಿಕ ರಸ್ತೆಗಳಲ್ಲಿ ವಾಹನಗಳ ಮೂಲಕ ಜಾತಿ ಅಸ್ಮಿತೆಯನ್ನು ಪ್ರದರ್ಶಿಸುವ ಮತ್ತು ಸಾಮಾಜಿಕ...