ಹುಮನಾಬಾದ್‌ | ಸೋನಂ ವಾಂಗ್ಚೂಕ್ ಬಂಧನ ಖಂಡಿಸಿ ಡಿವೈಎಫ್‌ಐ, ಎಸ್‌ಎಫ್‌ಐ ಪ್ರತಿಭಟನೆ

Date:

ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ನಿರ್ವಹಣೆಯ ವೈಫಲ್ಯಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಸೋನಂ ವಾಂಗ್ಚೂಕ್ ಅವರನ್ನು ಬೆಂಬಲಿಸಿ ಹುಮನಾಬಾದ್‌ನಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಹಾಗೂ ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿಗಳಿಂದ ಪ್ರತಿಭಟನೆ ನಡೆಯಿತು.

- Advertisement -

ಅಂಬೇಡ್ಕರ್‌ ವೃತ್ತದಲ್ಲಿ ಮಳೆಯಲ್ಲಿಯೇ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹುಮನಾಬಾದ್ ತಹಶೀಲ್ದಾರ್‌ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಮುಖಂಡರು ಮಾತನಾಡಿ, “ಪರೀಕ್ಷಾ ಅಕ್ರಮಗಳ ಕುರಿತು ಸಂಪೂರ್ಣ ಹೊಣೆಗಾರಿಕೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ಆಡಳಿತಾತ್ಮಕ ವೈಫಲ್ಯಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿದ್ದು, ಇದರಿಂದ ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2026 07 20 at 9.48.24 PM

ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಸೇರಿದಂತೆ ಪ್ರತಿಭಟನಾಕಾರರ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸಂಘಟನೆಗಳು, ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಬೇಕು. ಪರೀಕ್ಷಾ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪರೀಕ್ಷಾ ಅಕ್ರಮಗಳಿಂದ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಸೂಕ್ತ ಪರಿಹಾರ, ಸಮಾಲೋಚನೆ ಮತ್ತು ಅಗತ್ಯ ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಸ್ವತಂತ್ರ ರಾಷ್ಟ್ರೀಯ ಪರೀಕ್ಷಾ ಮೇಲ್ವಿಚಾರಣಾ ವ್ಯವಸ್ಥೆ ಸ್ಥಾಪಿಸಬೇಕು ಮತ್ತು ವಿದ್ಯಾರ್ಥಿಗಳ ದೂರುಗಳಿಗೆ ಕಾಲಮಿತಿಯೊಳಗೆ ಸ್ಪಂದಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಸರ್ಕಾರವು ಮಾನವೀಯ ದೃಷ್ಟಿಕೋನದಿಂದ ತಕ್ಷಣ ಮಧ್ಯಪ್ರವೇಶಿಸಿ ಪ್ರತಿಭಟನಾಕಾರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಸೋನಂ ವಾಂಗ್ಚೂಕ್‌ ಸತ್ಯಾಗ್ರಹಕ್ಕೆ ಬೆಂಬಲ: ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಜಿಲ್ಲಾ ಸಂಚಾಲಕ ಶಶಿಕಾಂತ ಡಾಂಗೆ, ಎಸ್‌ಎಫ್‌ಐ ಜಿಲ್ಲಾ ಸಮಿತಿಯ ಸಹ ಸಂಚಾಲಕ ಸೈಯದ್ ಮೇರಾಜೋದ್ದೀನ್, ಭೀಮ್‌ ಆರ್ಮಿ ತಾಲೂಕಾಧ್ಯಕ್ಷ ಅನೀಲ ದೊಡ್ಡಿ ಸೇರಿದಂತೆ ಪ್ರಮುಖರಾದ ಪ್ರಭು ಸಂತೋಷಕರ್‌, ಗೌತಮ್‌ ಡಾಕುಳಗಿ,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ...

ದೆಹಲಿ ಏರ್‌ಪೋರ್ಟ್‌ನಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ 3 ಗಂಟೆ ವಶಕ್ಕೆ, 50 ಸಾವಿರ ರೂ.ದಂಡ!

ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ...

SBI ಮೇಲೆ ಸೈಬರ್ ದಾಳಿ: ಸಾವಿರಾರು ಗ್ರಾಹಕರ ಸೂಕ್ಷ್ಮ ವಿವರ ಡಾರ್ಕ್ ವೆಬ್‌ನಲ್ಲಿ ಬಹಿರಂಗ!

ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮೇಲೆ ಸೈಬರ್ ದಾಳಿ ನಡೆದಿದ್ದು, ಸುಮಾರು...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...