ಹುಮನಾಬಾದ್‌ | ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಧರಣಿ

Date:

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದ ಸಮೀಪ ಸ್ಥಾಪಿಸಿರುವ ತ್ಯಾಜ್ಯ ವಿಲೇವಾರಿ ಘಟಕವನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಬುಧವಾರ ಹುಮನಾಬಾದ್ ನಗರಸಭೆ ಕಚೇರಿ ಎದುರು ಗ್ರಾಮಸ್ಥರು ಧರಣಿ ನಡೆಸಿದರು.

- Advertisement -

ಹುಮನಾಬಾದ್ ನಗರದ ತ್ಯಾಜ್ಯವನ್ನು ಸಿಂಧನಕೇರಾ ಗ್ರಾಮದ ಸಮೀಪ ಸುರಿಯುತ್ತಿರುವುದರಿಂದ ಗ್ರಾಮಸ್ಥರು ತೀವ್ರ ದುರ್ವಾಸನೆ, ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೊಳೆತ ತ್ಯಾಜ್ಯ ಮತ್ತು ಸತ್ತ ಪ್ರಾಣಿಗಳಿಂದಾಗಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ಜನಜೀವನಕ್ಕೆ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಗ್ರಾಮದ ಜನವಸತಿ ಪ್ರದೇಶದಿಂದ ಕೇವಲ 100 ರಿಂದ 200 ಮೀಟರ್ ಅಂತರದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕವನ್ನು ತಕ್ಷಣ ಸ್ಥಳಾಂತರಿಸಬೇಕು. ಸಿಂಧನಕೇರಾ ಗ್ರಾಮದಲ್ಲಿ ತ್ಯಾಜ್ಯ ಸುರಿಯುವುದನ್ನು ಕೂಡಲೇ ನಿಲ್ಲಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ, ಪರವಾನಗಿ ಹಾಗೂ ಕಾನೂನುಬದ್ಧ ದಾಖಲೆಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು. ತ್ಯಾಜ್ಯದಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯದ ಕುರಿತು ಸಮಗ್ರ ತನಿಖೆ ನಡೆಸಿ, ನೀರು ಮತ್ತು ಗಾಳಿಯ ಗುಣಮಟ್ಟವನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಪರೀಕ್ಷಿಸಬೇಕು ಎಂದು ಆಗ್ರಹಿಸಿದರು.

WhatsApp Image 2026 11 04 at 5.13.57 PM 1

ತ್ಯಾಜ್ಯ ವಿಲೇವಾರಿ ಘಟಕದ ಸಮರ್ಪಕ ನಿರ್ವಹಣೆ, ಕೊಳೆತ ತ್ಯಾಜ್ಯ ಹಾಗೂ ಸತ್ತ ಪ್ರಾಣಿಗಳ ವೈಜ್ಞಾನಿಕ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಆರೋಗ್ಯ ಇಲಾಖೆ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳಿಂದ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ, ಸಾಂಕ್ರಾಮಿಕ ರೋಗಗಳ ಕುರಿತು ಸಮೀಕ್ಷೆ ನಡೆಸಬೇಕು. ಈ ಹಿಂದೆ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಲ್ಲಿಸಲಾದ ದೂರುಗಳು ಹಾಗೂ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ, ಗ್ರಾಮಸ್ಥರಿಗೆ ಲಿಖಿತ ವರದಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂಬಂಧ ಬೀದರ್ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಸವಕಲ್ಯಾಣ ಸಹಾಯಕ ಆಯುಕ್ತ ಪ್ರಕಾಶ ಕುದರಿ ಅವರಿಗೆ ಸಲ್ಲಿಸಲಾಯಿತು.

ತಮ್ಮ ಬೇಡಿಕೆಗಳನ್ನು ಏಳು ದಿನಗಳೊಳಗೆ ಈಡೇರಿಸಬೇಕು. ಇಲ್ಲದಿದ್ದರೆ ಎಂಟನೇ ದಿನ ಹುಮನಾಬಾದ್ ನಗರಸಭೆ ಕಚೇರಿ ಎದುರು ತ್ಯಾಜ್ಯವನ್ನು ತಂದು ಸುರಿಯಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಭೀಮರೆಡ್ಡಿ ಸಿಂಧನಕೇರಾ, ಯುವರಾಜ ಐಹೊಳ್ಳಿ, ಫಿರ್ದೋಶ್‌ ಪಟೇಲ್‌, ಅನಿಲ್ ದೊಡ್ಡಿ, ಗುರುಪಾಟೀಲ, ಶೇಕ್ ಮಕ್ಸೂದ್, ವಿಜಯಕುಮಾರ್, ಮಂಜುನಾಥ್, ಗಣಪತಿ ಅಷ್ಟುರೆ, ಶಂಕರ್ ಶೀಲವಂತ, ಮುಕೇಶ್ ಪಾಂಡೆ, ಪ್ರವೀಣ್ ಹೊಂಬಾಳೆ, ಶಿವಲಿಂಗ, ಮೈನೋದ್ದೀನ್, ಅಮನ್, ಅಮರ್ ಸಿಂಧನಕೇರಾ, ನವೀನ್, ರವಿಕಾಂತ್, ವಿಜಯಕುಮಾರ್ ಕಾಡವಾದಿ, ಸಂತೋಷ್, ವಿಶ್ವನಾಥ್ ಪಾಟೀಲ್ ಸೇರಿದಂತೆ ಸಿಂಧನಕೇರಾ ಗ್ರಾಮಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ₹7 ಕೋಟಿ ವೆಚ್ಚದ ಬಿಟಿ ರಸ್ತೆ ಕಾಮಗಾರಿಗೆ ಶಾಸಕ ರಹೀಂ ಖಾನ್ ಚಾಲನೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬೃಹತ್ ಪ್ರತಿಭಟನೆ

ಹಾಲಿನ ದರ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ...

ಗ್ಯಾನೇಶ್ ಕುಮಾರ್ ವಿರುದ್ಧ ಲಂಚ ಆರೋಪ: ಕೇರಳ ಸರ್ಕಾರದಿಂದ ತನಿಖೆಗೆ ಆದೇಶ!

ಕೇರಳದ ಲೋಕೋಪಯೋಗಿ ಇಲಾಖೆ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ಗುತ್ತಿಗೆದಾರರಿಂದ ಕೋಟಿಗಟ್ಟಲೆ ಲಂಚಕ್ಕೆ...

ರಾಮ-ಕೃಷ್ಣ ಹೋಲಿಕೆ ವಿವಾದ: ಬಾಗೇಶ್ವರ ಬಾಬಾ ವಿರುದ್ಧ ಯಾದವ ಸಮುದಾಯ ಆಕ್ರೋಶ!

ಧರ್ಮದ ಅಖಂಡತೆಯನ್ನು ಎತ್ತಿಹಿಡಿಯಬೇಕಾದ ಸಾರ್ವಜನಿಕ ವೇದಿಕೆಗಳೇ ಇತ್ತೀಚೆಗೆ ಧಾರ್ಮಿಕ ಒಡಕು ಮತ್ತು...

ಪತ್ರಿಕಾ ಸ್ವಾತಂತ್ರ್ಯ ಭಕ್ಷಕರು: ಜಾಗತಿಕ ಕಪ್ಪುಪಟ್ಟಿಗೆ ಅದಾನಿ, ಓಪ್‌ಇಂಡಿಯಾ, ಟ್ರಂಪ್ ಸೇರ್ಪಡೆ!

ಪ್ರಪಂಚದಾದ್ಯಂತ ಮಾಧ್ಯಮಗಳ ಧ್ವನಿಯನ್ನು ಅಡಗಿಸಲು ಮತ್ತು ಪತ್ರಕರ್ತರನ್ನು ವ್ಯವಸ್ಥಿತವಾಗಿ ಗುರಿಯಾಗಿಸಲು ಮುಂದಾಗಿರುವ...