ಹುಮನಾಬಾದ್‌ | ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ, ಪರದಾಡಿದ ಗರ್ಭಿಣಿಯರು!

Date:

ಹುಮನಾಬಾದ್‌ ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದ ಕಾರಣ ಚಿಕಿತ್ಸೆ ಪಡೆಯಲು ಬಂದಿದ್ದ ಇಬ್ಬರು ಗರ್ಭಿಣಿಯರು ಪರದಾಡಿದ ಘಟನೆ ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ ನಡೆದಿದೆ.

- Advertisement -

ತಾಲೂಕಿನ ಸಿಂಧನಕೇರಾ ಹಾಗೂ ಹುಡುಗಿ ಗ್ರಾಮದ ಇಬ್ಬರು ಗರ್ಭಿಣಿಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಾಗ ಸ್ತ್ರೀರೋಗ ತಜ್ಞ ವೈದ್ಯರು ಸೇರಿದಂತೆ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕಿದ್ದ ವೈದ್ಯರು ಸ್ಥಳದಲ್ಲಿರಲಿಲ್ಲ. ಈ ವೇಳೆ ನರ್ಸ್‌ಗಳು ಗರ್ಭಿಣಿಯರಿಗೆ ಚಿಕಿತ್ಸೆ ನೀಡಲು ಮುಂದಾದರು ಎಂದು ಸಾಮಾಜಿಕ ಕಾರ್ಯಕರ್ತ ಯುವರಾಜ ಐಹೋಳಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಆಸ್ಪತ್ರೆಯಲ್ಲಿ ಈ ರೀತಿಯ ಅವ್ಯವಸ್ಥೆ ಏಕೆ ಉಂಟಾಗಿದೆ ಎಂದು ರೋಗಿಗಳ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ವಿಜಯಸಾಗರ್ ಮಲಶೆಟ್ಟಿ ಎಂಬುವರನ್ನು ಪ್ರಶ್ನಿಸಿದಾಗ, “ಕಳೆದ ಎರಡು ತಿಂಗಳಿಂದ ಸ್ಕ್ಯಾನಿಂಗ್ ಸೇವೆ ಸ್ಥಗಿತಗೊಂಡಿದ್ದು, ಸ್ಕ್ಯಾನಿಂಗ್ ನಿರ್ವಹಿಸುವ ಸಿಬ್ಬಂದಿ ರಜೆಯಲ್ಲಿದ್ದಾರೆ. ಹೀಗಾಗಿ ಬೇರೆ ಆಸ್ಪತ್ರೆಗೆ ತೆರಳಿ” ಎಂದು ಸೂಚಿಸಿದರು” ಎಂದು ಹೇಳಿದ್ದಾರೆ.

ರಾತ್ರಿ ವೇಳೆ ಒಬ್ಬರು ಹೆರಿಗೆಗಾಗಿ ಹಾಗೂ ಮತ್ತೊಬ್ಬರು ಗರ್ಭಿಣಿ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದರು. ಆ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರಲಿಲ್ಲ. ಖುದ್ದು ವೈದ್ಯರಿಗೆ ಕರೆ ಮಾಡಿದ ಬಳಿಕ ಅವರು ಆಸ್ಪತ್ರೆಗೆ ಬಂದು ಒಬ್ಬ ಗರ್ಭಿಣಿಗೆ ಚಿಕಿತ್ಸೆ ನೀಡಿದರು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿ ಕೆಲ ಹೊತ್ತು ಕಾಯಿಸಿದ ಬಳಿಕ, ಇಲ್ಲಿ ಸೂಕ್ತ ವ್ಯವಸ್ಥೆ ಇಲ್ಲ ಎಂದು ಬೇರೆ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದರು. ನಂತರ ಆಕೆಯನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹಣ ಪಾವತಿಸಿ ಸಿಸೇರಿಯನ್ ಹೆರಿಗೆ ಮಾಡಿಸಬೇಕಾದ ಅನಿವಾರ್ಯತೆ ಉಂಟಾಯಿತು” ಎಂದು ಯುವರಾಜ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಮನಾಬಾದ್ ಸರ್ಕಾರಿ ಆಸ್ಪತ್ರೆಗೆ ಹೊರರೋಗಿಗಳು ಹಾಗೂ ತುರ್ತು ಚಿಕಿತ್ಸೆಗಾಗಿ ಬರುವವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ಹಲವು ತಿಂಗಳಿಂದ ಕೇಳಿಬರುತ್ತಿವೆ. ವಿಶೇಷವಾಗಿ ಹೆರಿಗೆಗಾಗಿ ಬರುವ ಗರ್ಭಿಣಿಯರಿಗೆ ರಾತ್ರಿ ವೇಳೆ ಅಗತ್ಯ ವೈದ್ಯಕೀಯ ಸೇವೆ ದೊರೆಯುತ್ತಿಲ್ಲ. ಕೆಲ ವೈದ್ಯರು ರಾತ್ರಿ ಪಾಳಿಯ ಕರ್ತವ್ಯಕ್ಕೆ ಗೈರಾಗುತ್ತಾರೆ” ಎಂದು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿನ ರಕ್ತ ಪರೀಕ್ಷೆ, ಕಫ ಪರೀಕ್ಷೆ, ಟೈಫಾಯ್ಡ್, ಮಲೇರಿಯಾ ಸೇರಿದಂತೆ ವಿವಿಧ ಪ್ರಯೋಗಾಲಯ ಪರೀಕ್ಷೆಗಳಿಗೆ ಸಂಬಂಧಿಸಿದ ಯಂತ್ರೋಪಕರಣಗಳು ಕೆಟ್ಟುಹೋಗಿವೆ ಅಥವಾ ಸೇವೆ ಸಮರ್ಪಕವಾಗಿ ಲಭ್ಯವಿಲ್ಲ. ಸ್ಕ್ಯಾನಿಂಗ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಬಾಣಂತಿಯರಿಗೆ ಅಗತ್ಯವಿರುವ ಬಿಸಿ ನೀರಿನ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಎಂದು ತಿಳಿಸಿದ್ದಾರೆ.

WhatsApp Image 2026 09 30 at 1.54.16 PM
ಆಸ್ಪತ್ರೆ ಅವ್ಯವಸ್ಥೆ ಕುರಿತು ವೈದ್ಯರೊಂದಿಗೆ ರೋಗಿಗಳ ಕುಟುಂಬಸ್ಥರು ವಿಚಾರಿಸಿದರು.

ಸರ್ಕಾರಿ ಆಸ್ಪತ್ರೆಗಳು ಬಡವರು, ಕಾರ್ಮಿಕರು ಹಾಗೂ ಗ್ರಾಮೀಣ ಜನರಿಗೆ ತುರ್ತು ಸಂದರ್ಭದಲ್ಲಿ ಪ್ರಮುಖ ಆಶ್ರಯವಾಗಿವೆ. ಆದರೆ ವೈದ್ಯರು, ಪರೀಕ್ಷಾ ಸೌಲಭ್ಯಗಳು ಹಾಗೂ ಮೂಲಸೌಕರ್ಯಗಳು ಸಮರ್ಪಕವಾಗಿ ಲಭ್ಯವಾಗದೆ ಇರುವುದರಿಂದ ಬಡ ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳತ್ತ ತೆರಳಿ ಹೆಚ್ಚಿನ ಹಣ ವ್ಯಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾಳೆ ಪ್ರತಿಭಟನೆ

ಹುಮನಾಬಾದ್‌ ತಾಲೂಕು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಖಂಡಿಸಿ ನಾಳೆ (ಅ.1) ಬೆಳಗ್ಗೆ 10 ಗಂಟೆಗೆ ಆಸ್ಪತ್ರೆ ಎದುರುಗಡೆ ವಿವಿಧ ಜನಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಯುವರಾಜ ಐಹೋಳಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಆಸ್ಪತ್ರೆಯಲ್ಲಿ 24×7 ತುರ್ತು ವೈದ್ಯಕೀಯ ಸೇವೆ ಖಚಿತಪಡಿಸುವುದು, ಅಗತ್ಯ ವೈದ್ಯರು ಕರ್ತವ್ಯದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವುದು, ಸ್ಕ್ಯಾನಿಂಗ್ ಸೇವೆ ಪುನರಾರಂಭಿಸುವುದು, ಕೆಟ್ಟುಹೋಗಿರುವ ಪ್ರಯೋಗಾಲಯದ ಯಂತ್ರೋಪಕರಣಗಳನ್ನು ದುರಸ್ತಿಪಡಿಸುವುದು ಹಾಗೂ ಬಾಣಂತಿಯರಿಗೆ ಬಿಸಿ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ತಕ್ಷಣ ಕಲ್ಪಿಸಲು ಆಗ್ರಹಿಸಲಾಗುವುದು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿಮಾತು | ಟ್ರೋಲ್ ಮಾಡುವುದರಿಂದ ವಾಸ್ತವ ಬದಲಾಗದು!

“ಅತ್ಯಾಚಾರಕ್ಕೊಳಗಾದ ಮಹಿಳೆ ಬದುಕಿ ಉಳಿದರೆ, ಅವಳ ಗೌರವ ಕಡಿಮೆ ಆಗುತ್ತದೆಯೇ ?...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ...

ಮಾಯಾವತೀಜಿ, ಯುಪಿ ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸೋಣ: ಸಂಸದ ಚಂದ್ರಶೇಖರ್ ಆಜಾದ್

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ (BSP)...

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು...