ಬೀದರ್‌ |ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಸಿಎಂಗೆ ಮನವಿ

Date:

ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಳ್ಳಿಖೇಡ (ಬಿ) ಸಮೀಪದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಪುನಶ್ಚೇತನಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ವಿಶೇಷ ಮನವಿ ಸಲ್ಲಿಸಲಾಯಿತು.

- Advertisement -

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಹುಮನಾಬಾದ್‌ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್‌ ನೇತ್ರತ್ವದಲ್ಲಿ ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರನ್ನು ಭೇಟಿಯಾದ ನಿಯೋಗವು ಕಾರ್ಖಾನೆಯನ್ನು ಶೀಘ್ರವಾಗಿ ಪುನರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ...

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ವಿಶೇಷ ಸಭೆ ಕರೆಯಬೇಕು, ಪ್ರಸ್ತುತ ನಡೆಯುತ್ತಿರುವ ಹರಾಜು ಪ್ರಕ್ರಿಯೆಯನ್ನು ತಡೆಹಿಡಿಯಬೇಕು ಹಾಗೂ LROT ಆಧಾರದ ಮೇಲೆ ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡುವ ಮೂಲಕ ಕಾರ್ಖಾನೆ ಪುನಶ್ಚೇತನಗೊಳಿಸಬೇಕು. ಕಾರ್ಖಾನೆಯ ಮೇಲಿರುವ ವಿವಿಧ ಬ್ಯಾಂಕ್‌ಗಳ ಸಾಲದ ಬಡ್ಡಿ ಮೊತ್ತವನ್ನು ಸಂಪೂರ್ಣ ಮನ್ನಾ ಮಾಡುವ ಮೂಲಕ ಪುನಶ್ಚೇತನ ಪ್ರಕ್ರಿಯೆಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

WhatsApp Image 2026 09 23 at 12.41.06 PM
ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಮನವಿ ಸಲ್ಲಿಸಿದರು

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರು, ಶೀಘ್ರದಲ್ಲೇ ವಿಶೇಷ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಬೀದರ್‌ | ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 48,678 ಪ್ರಕರಣಗಳ ಇತ್ಯರ್ಥ, ಒಂದಾದ ಐದು ಜೋಡಿ

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಔರಾದ್ ಶಾಸಕ ಪ್ರಭು ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ ತಾಲೂಕು ʼಬರʼ ಘೋಷಣೆ : ಸ್ವಾಗತಾರ್ಹ

ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಕಮಲನಗರ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಇನ್ಸ್‌ಪೆಕ್ಟರ್‌ಗೆ ಜಾತಿ ನಿಂದನೆ: ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ವಿರುದ್ಧ ಜಾತಿ ನಿಂದನೆ ಮಾಡಿದ...

ಸೌಜನ್ಯ ಪ್ರಕರಣ: ಮರುತನಿಖೆ ಆದೇಶಕ್ಕೆ ‘ಕೊಂದವರು ಯಾರು?’ ಆಂದೋಲನ ಸ್ವಾಗತ, ದಕ್ಷ ಎಸ್‌ಐಟಿ ರಚನೆಗೆ ಆಗ್ರಹ

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು...