ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ನಾನು ಒಮ್ಮೆಯೂ ನೋಡಿಲ್ಲ : ಸಾಗರ್‌ ಖಂಡ್ರೆ

Date:

ಭಗವಂತ ಖುಬಾ ಅವರು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಕ್ಷೇತ್ರದ ಅನೇಕ ಗ್ರಾಮ ಪಂಚಾಯತ್‌ಗಳಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ ವೇಳೆ ಖುಬಾ ಅವರನ್ನು ಖುದ್ದಾಗಿ ಎಷ್ಟು ಸಲ ನೋಡಿದ್ದೀರಾ ಎಂದು ಪ್ರಶ್ನಿಸಿದಾಗ, ಅವರು ನಮ್ಮೂರಿಗೆ ಬಂದಿಲ್ಲ, ಅವರನ್ನು ನೋಡಿಲ್ಲ ಎಂದು ಹೇಳಿದ್ದಾರೆ. ನಿಜವಾಗಿಯೂ ನಾನು ಯಾವತ್ತೂ ಖೂಬಾ ಅವರನ್ನು ಖುದ್ದಾಗಿ ನೋಡಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಹೇಳಿದರು.

ಬೀದರ್‌ನಲ್ಲಿ ಬುಧವಾರ ಬೃಹತ್‌ ರೋಡ್‌ ಶೋ ಮೂಲಕ ನಾಮಪತ್ರ ಸಲ್ಲಿಸಿದ ಬಳಿಕ ನಗರದ ಗಣೇಶ ಮೈದಾನದಲ್ಲಿ ನಡೆಸ ಬೃಹತ್‌ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ, “ಎರಡು ಸಲ ಬೇರೆಯವರ ಹೆಸರಿನಲ್ಲಿ ಗೆದ್ದು ಬಂದಿದ್ದೇನೆ. ಈ ಬಾರಿಯೂ ಅದೇ ನಾಮಬಲದಿಂದ ಗೆದ್ದು ಬರುವೆ, ಜನರಿಗೆ ಭೇಟಿಯಾಗುವ ಅವಶ್ಯಕತೆಯಿಲ್ಲ. ಕೆಲಸ ಮಾಡುವ ಅವಶ್ಯಕತೆಯಿಲ್ಲ ಎಂದು ಖೂಬಾ ಭಾವಿಸಿದ್ದಾರೆ” ಎಂದರು.

“ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಯಡಿ ಜಿಲ್ಲೆಯ ರೈತರು 15 ಕೋಟಿ ರೂ. ಪ್ರೀಮಿಯಂ ಹಣ ಕಟ್ಟಿದ್ದಾರೆ. ಆದರೆ ಬೆಳೆ ಹಾನಿಯಾದ ರೈತರಿಗೆ 80 ಲಕ್ಷ ಹಣ ಮಾತ್ರ ಬಂದಿದೆ. ಇನ್ನುಳಿದ ಹಣ ಎಲ್ಲಿ ಹೋಗಿದೆ? ನನ್ನ ಪ್ರಶ್ನೆಗೆ ಕೇಂದ್ರ ಸಚಿವ ಭಗವಂತ ಖೂಬಾ ಅವರು ಉತ್ತರಿಸಲಿ” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಬಹಿರಂಗ ಪ್ರಚಾರ ಸಭೆಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

“ಜಿಲ್ಲೆಯ ಯುವಕರಿಗೆ ಉದ್ಯೋಗವಿಲ್ಲ. ಈ ಬಾರಿ ನನ್ನನ್ನು ಸಂಸದನ್ನಾಗಿ ಆಯ್ಕೆ ಮಾಡಿದರೆ ಜಿಲ್ಲೆಗೆ ಐಟಿ ಕಂಪನಿ, ಕಾರ್ಖಾನೆ ಸ್ಥಾಪಿಸಿ ನಿರುದ್ಯೋಗ ಯುವಕರಿಗೆ ಕೆಲಸ ಕೊಡಿಸುವೆ. ರೈತರ ಅನುಕೂಲಕ್ಕಾಗಿ ನಿರಂತರ ವಿದ್ಯುತ್‌ ಪೂರೈಕೆ ಸೋಲಾರ್‌ ಪಾರ್ಕ್‌ ನಿರ್ಮಿಸುವೆ. ದಿನದ 24 ಗಂಟೆಯೂ ಜನರ ಸೇವೆಗಾಗಿ ಸಿದ್ಧನಿದ್ದೇನೆ. ಬಹುಶಃ ನಾನು ಗೆದ್ದರೆ ದೇಶದ ಅತ್ಯಂತ ಕಿರಿಯ ಸಂಸದ ಎಂಬ ಖ್ಯಾತಿ ಪಾತ್ರನಾಗುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!

“ನನಗೆ ಚಿಕ್ಕ ವಯಸ್ಸು, ಅನುಭವ ಕಡಿಮೆ ಇದೆ ಎಂದು ವಿರೋಧಿಗಳು ಹೇಳುತಿದ್ದಾರೆ. ಆದರೆ ಜನ ಸೇವೆಗೆ ಅನುಭವಕ್ಕಿಂತ ಇಚ್ಚಾಶಕ್ತಿ ಮುಖ್ಯ ಎಂಬುದು ನನ್ನ ಅಭಿಪ್ರಾಯ, ಅನುಭವ ಎಷ್ಟೇ ಇದ್ದರೂ ಇಚ್ಚಾಶಕ್ತಿ ಇಲ್ಲದಿದ್ದರೆ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಖೂಬಾ ಅವರನ್ನು ಚರ್ಚೆಗೆ ಆಹ್ವಾನಿಸಿದ್ದೆ, ಅವರು ನನ್ನ ಚಾಲೆಂಜ್‌ ಸ್ವೀಕರಿಸಲಿಲ್ಲ. ಚುನಾವಣೆ ಮುಗಿಯುವವರೆಗೆ ಖೂಬಾ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳುವೆ, ಅವುಗಳಿಗೆ ಉತ್ತರಿಸಬೇಕು” ಎಂದು ಸವಾಲು ಹಾಕಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ಲೋಕಸಭಾ ಚುನಾವಣೆ | 6ನೇ ಹಂತದಲ್ಲಿ ಶೇ.59ರಷ್ಟು ಮತದಾನ: ಚುನಾವಣಾ ಆಯೋಗ

ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ 6ನೇ ಹಂತದ ಮತದಾನ ಪ್ರಕ್ರಿಯೆ...

ಪಶ್ಚಿಮ ಬಂಗಾಳ | ಬಿಜೆಪಿ ಅಭ್ಯರ್ಥಿಯನ್ನು ಕಲ್ಲೆಸೆದು ಓಡಿಸಿದ ಆಕ್ರೋಶಿತ ಜನರ ಗುಂಪು; ವಿಡಿಯೋ ವೈರಲ್

ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನದ ವೇಳೆ ಪಶ್ಚಿಮಬಂಗಾಳದಲ್ಲಿ ಆಕ್ರೋಶಿತ ಜನರ...

ಮೋದಿ ಸುಳ್ಳುಗಳು | ಯಾರನ್ನೂ ವಿಶೇಷ ಪ್ರಜೆಗಳೆಂದು ಒಪ್ಪಿಕೊಳ್ಳದೆ, ಎಲ್ಲರನ್ನೂ ಸಮಾನಾಗಿ ಕಾಣುತ್ತಾರೆಯೇ ಮೋದಿ?

ಪಂಜಾಬ್‌ನ ಜಲಂಧರ್‌ನಲ್ಲಿ ನಡೆದ ಮೆಗಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಮಾತನಾಡಿ, "ಜನರು...