ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಜಾರಿಗೊಳಿಸಲು ಸಂಸದ ಸಾಗರ ಖಂಡ್ರೆ ಒತ್ತಾಯ

Date:

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತೀವ್ರವಾಗಿ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಜಾರಿಗೊಳಿಸಬೇಕೆಂದು ಸಂಸದ ಸಾಗರ ಖಂಡ್ರೆ ಮನವಿ ಮಾಡಿದರು.

- Advertisement -

ಲೋಕಸಭೆ ಅಧಿವೇಶನದಲ್ಲಿ ಮಂಗಳವಾರ ಮಾತನಾಡಿದ ಅವರು, ʼಬೇಸಿಗೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಕೊರತೆ ಹೆಚ್ಚುತ್ತಿದ್ದು, ಜನರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಜಲ್ ಜೀವನ ಮಿಷನ್ (ಜೆಜೆಎಂ) ಯೋಜನೆಗೆ ಕೋಟ್ಯಂತರ ಅನುದಾನ ವೆಚ್ಚ ಮಾಡಿದ್ದರೂ ಅನೇಕ ಗ್ರಾಮಗಳಲ್ಲಿ ನಿರೀಕ್ಷಿತ ಫಲಿತಾಂಶ ದೊರಕಿಲ್ಲʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಯೋಜನೆ ಸಮರ್ಪಕವಾಗಿ ಜಾರಿಯಾಗದ ಪ್ರಮುಖ ಕಾರಣವೆಂದರೆ ಹಲವು ಕಡೆಗಳಲ್ಲಿ ಶಾಶ್ವತ ನೀರಿನ ಮೂಲಗಳನ್ನು ಗುರುತಿಸದಿರುವುದಾಗಿದೆ. ಈ ಹಿನ್ನೆಲೆ ಬಸವ ಸಾಗರ ಜಲಾಶಯ (ನಾರಾಯಣಪುರ ಅಣೆಕಟ್ಟು)ವನ್ನು ಪ್ರಮುಖ ನೀರಿನ ಮೂಲವಾಗಿ ಬಳಸುವ ಪ್ರಸ್ತಾವನೆ ಅತ್ಯಂತ ಮಹತ್ವದ್ದಾಗಿದೆ” ಎಂದು ವಿವರಿಸಿದರು.

ಕಲಬುರಗಿ ಹಾಗೂ ಬೀದರ ಜಿಲ್ಲೆಗಳ ಅನೇಕ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ (MVS) ಯೋಜನೆಯ ಅಂದಾಜು ವೆಚ್ಚ ₹7,200 ಕೋಟಿ ಆಗಿದ್ದು, ಇದು ಬರಪೀಡಿತ ಪ್ರದೇಶಗಳಿಗೆ ಜೀವನಾಡಿಯಾಗಲಿದೆ. ಈ ಯೋಜನೆಗೆ ತ್ವರಿತವಾಗಿ ಅನುಮೋದನೆ ನೀಡಿ ಜಾರಿಗೆ ತರಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಕಲಬುರಗಿ | ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾದರೆ ಬೀದರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಔರಾದ್ (203), ಬಸವಕಲ್ಯಾಣ (112), ಭಾಲ್ಕಿ (31), ಬೀದರ (35), ಚಿಟಗುಪ್ಪ (16), ಹುಲಸೂರು (26), ಹುಮನಾಬಾದ್ (62), ಕಮಲನಗರ (87), ಚಿಂಚೊಳಿ (170), ಕಾಳಗಿ (20) ಹಾಗೂ ಆಳಂದ (144) ತಾಲೂಕಿನ ಒಟ್ಟು 906 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಪ್ರಯೋಜನ ಪಡೆಯಲಿವೆ. ಈ ಯೋಜನೆ ಶೀಘ್ರ ಅನುಮೋದನೆಗೊಂಡು ಜಾರಿಗೆ ಬರಬೇಕೆಂದು ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...