ರಾಜ್ಯ ಸರ್ಕಾರದ ಅರಣ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ.
ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಕಡತಗಳು ಪರಿಶೀಲನೆ ನಡೆಸಿದ್ದಾರೆ.
ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಟಿ ಅಧಿಕಾರಿಗಳು ಬ್ಯಾಂಕ್ನ ಅಕೌಂಟ್ಸ್ಗಳನ್ನು ಪರಿಶೀನಲನೆ ಮಾಡುತ್ತಿದ್ದಾರೆ. ಬ್ಯಾಂಕ್ ಸಿಬ್ಬಂದಿಯ ಮೊಬೈಲ್ಗಳನ್ನು ಸ್ವಿಚ್ಆಫ್ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಟ್ಯಾಟೂ
ಕಳೆದ ಅಕ್ಟೋಬರ್ ತಿಂಗಳಲ್ಲಿ ನಡೆದ ಬ್ಯಾಂಕ್ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಸಹೋದರ ಅಮರ್ ಖಂಡ್ರೆ ಅವರು ಗೆಲುವು ಸಾಧಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಈಗ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಚುನಾವಣಾ ಕಣದಲ್ಲಿದ್ದಾರೆ. ಈ ಹೊತ್ತಲ್ಲಿ ಬ್ಯಾಂಕ್ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತವೇ ಎಂಬ ಕುರಿತು ಚರ್ಚೆ ಕೇಳಿ ಬರುತ್ತಿದೆ.