ಕಲ್ಯಾಣ ಕರ್ನಾಟಕಕ್ಕೆ 2 ಡಿಸಿಎಂ ಸ್ಥಾನ ನೀಡಲಿ : ವಿನಯಕುಮಾರ ಮಾಳಗೆ ಆಗ್ರಹ

Date:

ಕರ್ನಾಟಕದಲ್ಲಿ ನಾಲ್ಕು ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳನ್ನು ಸೃಷ್ಟಿಸಿದರೆ, ಅವುಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 2 ಡಿಸಿಎಂ ಸ್ಥಾನಗಳನ್ನು ಮೀಸಲಿಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವಿನಯಕುಮಾರ ಮಾಳಗೆ ಒತ್ತಾಯಿಸಿದ್ದಾರೆ.

- Advertisement -

2023ರ ವಿಧಾನಸಭಾ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಭಾಗದಿಂದ ದೊರೆತಿರುವ ಅಪಾರ ಜನಬೆಂಬಲವನ್ನು ಗಮನದಲ್ಲಿಟ್ಟುಕೊಂಡು ಈ ಭಾಗಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ 41 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 26 ಕ್ಷೇತ್ರಗಳಲ್ಲಿ‌ ಕಾಂಗ್ರೆಸ್ ಗೆಲುವು ಸಾಧಿಸಿ ಶೇ.63ರಷ್ಟು ಯಶಸ್ಸು ದಾಖಲಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಈ ಭಾಗ ನಿರ್ಣಾಯಕ ಪಾತ್ರ ವಹಿಸಿತ್ತು. ಅಲ್ಲದೇ 2024ರ ಲೋಕಸಭಾ ಚುನಾವಣೆಯಲ್ಲಿ ಬೀದರ, ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಸೇರಿ ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಶೇ.100ರಷ್ಟು ಸಾಧನೆಗೈದಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಶೇ.42.88ರಷ್ಟು ಮತಗಳನ್ನು ಪಡೆದು 135 ಸ್ಥಾನಗಳನ್ನು ಗೆದ್ದಿದ್ದರೂ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಮತ ಪ್ರಮಾಣ ಮತ್ತು ಸ್ಥಾನಗಳ ಸಾಧನೆ ರಾಜ್ಯದ ಸರಾಸರಿಗಿಂತ ಹೆಚ್ಚಿನ ಮಟ್ಟದಲ್ಲಿದ್ದು, ಈ ಭಾಗ ಕಾಂಗ್ರೆಸ್‌ನ ಪ್ರಮುಖ ರಾಜಕೀಯ ಶಕ್ತಿಕೇಂದ್ರವಾಗಿ ಹೊರಹೊಮ್ಮಿದೆ. ರಾಜಕೀಯ ಪ್ರತಿನಿಧಿತ್ವ ಹಾಗೂ ಪ್ರಾದೇಶಿಕ ಸಮತೋಲನ ನಿವಾರಣೆ ದೃಷ್ಟಿಯಿಂದ ಸಚಿವ ಸಂಪುಟದಲ್ಲಿ ಮೂರನೇ ಒಂದರಷ್ಟು ಸಚಿವ ಸ್ಥಾನಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಬೇಕು. ನಾಲ್ಕು ಡಿಸಿಎಂ ಸ್ಥಾನ ಸೃಜಿಸಿದರೆ, ಅವುಗಳಲ್ಲಿ ʼಕಲ್ಯಾಣʼಕ್ಕೆ ಎರಡು ಸ್ಥಾನಗಳನ್ನು ಈ ಭಾಗಕ್ಕೆ ಮೀಸಲಿಡುವುದು ನ್ಯಾಯಸಮ್ಮತ ಕ್ರಮ” ಎಂದು ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದವರಾದ ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಐಟಿ-ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರುಗಳನ್ನು ಡಿಸಿಎಂ ಹುದ್ದೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಈಶ್ವರ ಖಂಡ್ರೆ ಅವರು ದೀರ್ಘಕಾಲದ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ವಿವಿಧ ಸಮುದಾಯಗಳನ್ನು ಒಗ್ಗೂಡಿಸುವ ನಾಯಕತ್ವದ ಮೂಲಕ ರಾಜ್ಯ ರಾಜಕಾರಣದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದಾರೆ. ಅದೇ ರೀತಿ ಪ್ರಿಯಾಂಕ್ ಖರ್ಗೆ ಅವರು ಯುವ ನಾಯಕತ್ವ, ಆಡಳಿತಾತ್ಮಕ ಅನುಭವ ಹಾಗೂ ಅಭಿವೃದ್ಧಿ ಪರ ಚಿಂತನೆಗಳ ಮೂಲಕ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಈಶ್ವರ ಖಂಡ್ರೆಯವರಿಗೆ ಡಿಸಿಎಂ ಸ್ಥಾನ ನೀಡಿ : ಮಠಾಧೀಶರ ಒತ್ತಾಯ

ಈ ಇಬ್ಬರು ನಾಯಕರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಕೇವಲ ವ್ಯಕ್ತಿಗಳಿಗೆ ಗೌರವ ನೀಡಿದಂತಾಗುವುದಿಲ್ಲ. ಬದಲಾಗಿ ದಶಕಗಳಿಂದ ಅಭಿವೃದ್ಧಿ ಮತ್ತು ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹೋರಾಟ ನಡೆಸುತ್ತಿರುವ ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ನಿರಂತರ ಬೆಂಬಲ ನೀಡುತ್ತಿರುವ ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಮಯ ಈಗ ಬಂದಿದೆ ಎಂದು ವಿನಯಕುಮಾರ ಮಾಳಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...