ಸ್ನೇಹಿತರೊಂದಿಗೆ ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಈಜು ಬಾರದೇ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.
ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಘಟನೆ ನಡೆದಿದೆ.
ಬಳತ (ಬಿ) ಗ್ರಾಮದ ಯುವರಾಜ ಅನೀಲ ಚಿದ್ರೆ (28) ನೀರಿನಲ್ಲಿ ಮುಳುಗಿ ನಾಪತ್ತೆಯಾದ ಯುವಕ ಎಂದು ಸ್ಥಳೀಯರು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 9 ಗಂಟೆಗೆ ಸುಮಾರಿಗೆ ಮೂವರು ಸ್ನೇಹಿತರೊಂದಿಗೆ ಮಾಂಜ್ರಾ ನದಿಯಲ್ಲಿ ಈಜಲು ತೆರಳಿದ್ದರು. ಯುವರಾಜನಿಗೆ ಈಜು ಬಾರದ ಹಿನ್ನೆಲೆ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ, ಈಜು ತಜ್ಞರು ಹಾಗೂ ಗ್ರಾಮಸ್ಥರ ತಂಡ ಬೋಟ್ ಮುಖಾಂತರ ಕಾರ್ಯಚರಣೆ ಕೈಕೊಂಡಿದ್ದಾರೆ. ನೀರಿನಲ್ಲಿ ಮುಳುಗಿದ ಯುವರಾಜ್ ಇನ್ನೂ ಪತ್ತೆಯಾಗಿಲ್ಲ
ಘಟನಾ ಸ್ಥಳದಲ್ಲಿ ನೂರಾರು ಜನರು ಕುತೂಹಲದಿಂದ ಜಮಾಯಿಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ : ಬೀದರ್ | ಪ್ರತಿಭಾ ಪುರಸ್ಕಾರ : ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನ
ಠಾಣಾ ಕುಶನೂರ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಕಮಲನಗರ ಸಿಪಿಪಿ, ಠಾಣಾ ಕುಶನೂರ್ ಪಿಎಸ್ಐ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.




