ಬೀದರ್‌ | ಈಜಲು ಹೋದ ಯುವಕ ನೀರುಪಾಲು : ಸಿಗದ ಸುಳಿವು, ಮುಂದುವರೆದ ಶೋಧಕಾರ್ಯ

Date:

ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನ ಪತ್ತೆಗಾಗಿ ಎರಡನೇ ದಿನವೂ ಶೋಧಕಾರ್ಯ ಮುಂದುವರೆಯಿತು. ಶೋಧ ನಡೆಸುತ್ತಿದ್ದರೂ ಇಲ್ಲಿಯವರೆಗೆ ಯುವಕ ಪತ್ತೆಯಾಗಿಲ್ಲ.

- Advertisement -

ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಯುವಕನ ಪತ್ತೆಗಾಗಿ ನಿನ್ನೆ ಬೆಳಗ್ಗೆಯಿಂದ ಕಾರ್ಯಾಚರಣೆ ಮುಂದುವರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಭಾನುವಾರ (ಇಂದು) ಬೆಳಗ್ಗೆ ಕಲಬುರಗಿಯಿಂದ ಎಸ್‌ಡಿಆರ್‌ಎಫ್ ತಂಡ ಆಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದರೂ ಯುವಕನ ಸುಳಿವು ಸಿಗುತ್ತಿಲ್ಲ ಎಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.

WhatsApp Image 2026 05 10 at 4.43.39 PM 1
ಅಧಿಕಾರಿಗಳು ಘಟನಾ ಸ್ಥಳದಲ್ಲಿಯೇ ಠಿಕಾಣಿ ಹೂಡಿ ಶೋಧಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ.

ಬಳತ (ಬಿ) ಗ್ರಾಮದ ಯುವರಾಜ ಅನೀಲ ಚಿದ್ರೆ (28) ನಿನ್ನೆ (ಶನಿವಾರ) ಬೆಳಗ್ಗೆ 9ಗಂಟೆ ಸುಮಾರಿಗೆ ಮೂವರು ಸ್ನೇಹಿತರೊಂದಿಗೆ ಈಜಲು ತೆರಳಿದ ವೇಳೆ ಈಜು ಬಾರದೆ ಮುಳುಗಿ ನಾಪತ್ತೆಯಾಗಿದ್ದರು.

ತಂದೆ-ತಾಯಿಗೆ ಏಕೈಕ ಪುತ್ರನಾದ ಯುವರಾಜ ಬಿಕಾಂ ಪದವಿ ಪೂರೈಸಿ ವರ್ಕ್‌ ಫ್ರಮ್‌ ಹೋಮ್‌ ಕೆಲಸ ಮಾಡುತ್ತಿದ್ದರು. ಮನೆಗೆ ಆಸರೆಯಾಗಿದ್ದ ಪುತ್ರ ನೀರುಪಾಲಾದ ಘಟನೆಯಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ನಿನ್ನೆಯಿಂದ ಇಡೀ ಗ್ರಾಮದಲ್ಲಿ ಮೌನದ ವಾತಾವರಣ ಆವರಿಸಿದೆ.

ಘಟನಾ ಸ್ಥಳದಲ್ಲಿ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ, ಈಜು ತಜ್ಞರು ಹಾಗೂ ಗ್ರಾಮಸ್ಥರ ತಂಡ ಬೋಟ್ ಮುಖಾಂತರ ಕಾರ್ಯಚರಣೆ ಕೈಕೊಂಡಿದ್ದಾರೆ. ಯುವಕನ ಪತ್ತೆಗಾಗಿ ನಿನ್ನೆ ಸಂಜೆವರೆಗೂ ಶೋಧ ಕಾರ್ಯಾಚರಣೆ ನಡೆಸಿದ್ದರು. ಯುವಕ ಪತ್ತೆಯಾಗದ ಹಿನ್ನೆಲೆ ಸ್ಥಗಿತಗೊಳಿಸಿ ಇಂದು ಮುಂದುವರೆಯುತ್ತಿದೆ.

1005138959
ಮಾಂಜ್ರಾ ನದಿಯಲ್ಲಿ ನಾಪತ್ತೆಯಾದ ಯುವರಾಜ ಚಿದ್ರೆ

ಠಾಣಾ ಕುಶನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು‌, ಘಟನಾ ಸ್ಥಳಕ್ಕೆ ಬೀದರ್‌ ಸಹಾಯಕ ಆಯುಕ್ತ ಮಹಮ್ಮಸ್‌ ಶಕೀಲ್‌, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಮಲನಗರ ತಹಸೀಲ್ದಾರ್‌ ಅಮೀತ್‌ ಕುಲಕರ್ಣಿ, ಕಮಲನಗರ ಸಿಪಿಪಿ ಶ್ರೀಕಾಂತ ಅಲ್ಲಾಪುರೆ, ಠಾಣಾ ಕುಶನೂರ್ ಪಿಎಸ್ಐ ಸೇರಿದಂತೆ ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಿ ಕಾರ್ಯಾಚರಣೆಗೆ ಸಹಕಾರ ನೀಡುತ್ತಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಗ್ಯಾಸ್ ಸಿಲಿಂಡರ್ ದುಬಾರಿ; ಬಿಕ್ಕಟ್ಟಿನತ್ತ ಜನಸಾಮಾನ್ಯರ ಬದುಕು

“ಮಾಂಜ್ರಾ ನದಿಯಲ್ಲಿ ಮುಳುಗಿ ಯುವಕ ನಾಪತ್ತೆಯಾದ ಘಟನೆ ಬಳಿಕ ಅಗ್ನಿಶಾಮಕ, ಎಸ್‌ಡಿಆರ್‌ಎಫ್‌ ತಂಡ ನಿರಂತರ ಶೋಧಕಾರ್ಯದಲ್ಲಿ ತೊಡಗಿದೆ. ಇಲ್ಲಿಯವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಯುವಕನ ಪತ್ತೆಗಾಗಿ ಶೋಧಕಾರ್ಯ ಮುಂದುವರೆಯುತ್ತದೆ” ಎಂದು ತಹಸೀಲ್ದಾರ್‌ ಅಮೀತ್‌ ಕುಲಕರ್ಣಿ ʼಈದಿನʼಕ್ಕೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...