ಔರಾದ-ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಶಾಸಕ ಪ್ರಭು ಚವ್ಹಾಣ ಆಗ್ರಹ

Date:

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಎರಡೂ ತಾಲ್ಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕೆಂದು ಔರಾದ್‌ ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಕಂದಾಯ ಸಚಿವ ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿರುವ ಅವರು, “ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಬಿತ್ತನೆಯಾದ ಬಹುತೇಕ ಎಲ್ಲ ಬೆಳೆಗಳು ಸೊರಗಿ ನಿಂತಿವೆ. ಬೆಳೆಗಳ ಇಳುವರಿ ಸಿಗುವ ಲಕ್ಷಣಗಳು ಕಾಣುತ್ತಿಲ್ಲ” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಜೂನ್ ತಿಂಗಳಲ್ಲಿ ತಡವಾಗಿ ಬಿತ್ತನೆ ನಡೆಸಿದ್ದ ರೈತರು ನಂತರ ಸುರಿದ ಅಲ್ಪ ಪ್ರಮಾಣದ ಮಳೆಯನ್ನು ನಂಬಿ ಸೋಯಾಬೀನ್, ಉದ್ದು, ಹೆಸರು, ಜೋಳ, ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ಆದರೆ ಕಳೆದೊಂದು ತಿಂಗಳಿನಿಂದ ಸಮರ್ಪಕ ಮಳೆಯಾಗದ ಕಾರಣ ಬಹುತೇಕ ಎಲ್ಲ ಬೆಳೆಗಳು ಒಣಗಿ ಸೊರಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಹೇಳಿದ್ದಾರೆ.

ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆ ಸಂಪೂರ್ಣ ಕುಂಠಿತಗೊಂಡಿದ್ದು, ಅನೇಕ ರೈತರು ಮರುಬಿತ್ತನೆ ಮಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈಗಾಗಲೇ ಸಾಲ ಮಾಡಿ ಕೃಷಿ ನಡೆಸಿರುವ ರೈತರಿಗೆ ಇದು ಮತ್ತಷ್ಟು ಆರ್ಥಿಕ ಹೊರೆ ಉಂಟುಮಾಡಿದ್ದು, ಸರ್ಕಾರ ತಕ್ಷಣ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್ | ಸೋನಂ ವಾಂಗ್ಚೂಕ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಡಿವಿಪಿ ಧರಣಿ

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಜೊತೆಗೆ ಬೆಳೆ ಹಾನಿ ಪರಿಹಾರ, ಬೆಳೆ ವಿಮೆ ಸೌಲಭ್ಯ, ಮರುಬಿತ್ತನೆಗೆ ವಿಶೇಷ ಪ್ಯಾಕೇಜ್, ಕೃಷಿ ಇನ್‌ಪುಟ್ ಸಹಾಯಧನ  ಸೇರಿದಂತೆ ಸರ್ಕಾರದಿಂದ ದೊರೆಯುವ ಎಲ್ಲಾ ರೀತಿಯ ನೆರವುಗಳನ್ನು ತುರ್ತಾಗಿ ಜಾರಿಗೊಳಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಶಾಸಕ ಚವ್ಹಾಣ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...