ಕಮಲನಗರ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

Date:

ಮಳೆ ಕೊರತೆಯಿಂದ ಕಮಲನಗರ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಈ ಸಂಬಂಧ ಕಮಲನಗರ ಪಟ್ಟಣದ ಚನ್ನಬಸವ ಪಟ್ಟದ್ದೇವರು ಗ್ರಂಥಾಲಯದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಬೀದರ್-ಉದಗೀರ್ ರಾಷ್ಟ್ರೀಯ ಹೆದ್ದಾರಿ-50 ತಡೆದು ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಬಳಿಕ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್ ಅವರಿಗೆ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ ಮಾತನಾಡಿ, “ಕಮಲನಗರ ತಾಲ್ಲೂಕಿನ ರೈತರು ನಿರಂತರವಾಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಸಕ್ತ ವರ್ಷವೂ ಮಳೆ ಕೊರತೆಯಿಂದ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿದ್ದು, ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳಿಗೂ ಮಳೆ ಅಭಾವದಿಂದ ಹಾನಿಯಾಗಿದೆ” ಎಂದು ತಿಳಿಸಿದರು.

WhatsApp Image 2026 08 11 at 3.49.52 PM

“ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಕಳೆದ ವರ್ಷದ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಬಾಕಿ ಇರುವ ಬೆಳೆ ವಿಮೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಪ್ರವೀಣ ಕುಲಕರ್ಣಿ ಮಾತನಾಡಿ, “ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಸಂಕಷ್ಟಕ್ಕೀಡಾಗಿರುವ ಕಮಲನಗರ ತಾಲ್ಲೂಕಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳಿಂದ ಬರಬೇಕಿರುವ ಬಾಕಿ ಕಬ್ಬಿನ ಬಿಲ್‌ಗಳನ್ನು ಕೂಡಲೇ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದು, ಬರುವ ಹಂಗಾಮಿನಲ್ಲಿ ಸರ್ಕಾರ ಪುನಃ ಆರಂಭಿಸಬೇಕು. ಅನಾವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

IMG 20260811 WA0028

ರೈತರ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಸಿದೆ.

ಇದನ್ನೂ ಓದಿ : ಬೀದರ್‌ | ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪ್ರಮುಖರಾದ ಸಿದ್ರಾಮಪ್ಪ ಆಣದೂರೆ, ದಯಾನಂದ ಸ್ವಾಮಿ, ಪ್ರಕಾಶ ಬಾವಗೆ, ವೈಜಿನಾಥ ವಡ್ಡೆ , ವಿಠಲರಾವ ಪಾಟೀಲ, ಶಂಕರೆಪ್ಪ ಪಾರಾ, ಶೋಭಾವತಿ, ಸುಭಾಷ ರಗಟೆ, ನಾಗಯ್ಯ ಸ್ವಾಮಿ ಸೇರಿದಂತೆ ಅನೇಕ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...