ಕಮಲನಗರ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ರೈತರ ಆಗ್ರಹ

Date:

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಮಲನಗರ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕಿನ ಎಲ್ಲ ಗ್ರಾಮಗಳಲ್ಲೂ ತಕ್ಷಣ ಮರು ಸಮೀಕ್ಷೆ ನಡೆಸಿ ಕಮಲನಗರ ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

- Advertisement -

ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಕಮಲನಗರ ತಾಲೂಕು ಘಟಕದ ಅಧ್ಯಕ್ಷ ಪ್ರವೀಣ್ ಕುಲಕರ್ಣಿ ನೇತೃತ್ವದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಕಮಲನಗರ ತಹಶೀಲ್ದಾರ್ ಅಮಿತ್ ಕುಲಕರ್ಣಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ರಾಜ್ಯ ಸರ್ಕಾರ 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಹಾಗೂ ವಿವಿಧ ವೈಜ್ಞಾನಿಕ ಮಾನದಂಡಗಳನ್ನು ಆಧರಿಸಿ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಜಿಲ್ಲೆಯ ಬೀದರ್, ಬಸವಕಲ್ಯಾಣ, ಹುಮನಾಬಾದ್ ಹಾಗೂ ಚಿಟಗುಪ್ಪ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದ್ದು, ಕಮಲನಗರ ತಾಲೂಕನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಿಳಿಸಿದರು.

ಕಮಲನಗರ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ತೇವಾಂಶದ ಕೊರತೆ, ಕೃಷಿ ಚಟುವಟಿಕೆಗಳ ಹಿನ್ನಡೆ ಹಾಗೂ ನೀರಿನ ಸಮಸ್ಯೆಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಗ್ರಾಮ ಮಟ್ಟದಲ್ಲಿ ವಾಸ್ತವಿಕ ಪರಿಸ್ಥಿತಿಯನ್ನು ಪರಿಶೀಲಿಸಿದರೆ ಬರದ ಪರಿಣಾಮ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಹೇಳಿದರು.

ಕೇವಲ ತಾಲೂಕುವಾರು ಮಳೆಯ ಅಂಕಿ-ಅಂಶಗಳನ್ನು ಆಧರಿಸಿ ಬರಪೀಡಿತ ತಾಲೂಕುಗಳ ಆಯ್ಕೆ ಮಾಡದೆ, ಗ್ರಾಮವಾರು ಮಳೆ ಪ್ರಮಾಣ, ಬಿತ್ತನೆ ಪ್ರಮಾಣ, ಬೆಳೆಗಳ ಪ್ರಸ್ತುತ ಸ್ಥಿತಿ, ಮಣ್ಣಿನ ತೇವಾಂಶ, ಅಂತರ್ಜಲ ಮಟ್ಟ, ಕೆರೆ-ಕಟ್ಟೆಗಳಲ್ಲಿನ ನೀರಿನ ಲಭ್ಯತೆ ಹಾಗೂ ಬೆಳೆ ಹಾನಿಯ ವಾಸ್ತವಿಕ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಕಮಲನಗರ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ತಕ್ಷಣ ಮರು ಸಮೀಕ್ಷೆ ನಡೆಸಿ, ಗ್ರಾಮವಾರು ಮಳೆ ಕೊರತೆ ಹಾಗೂ ಬೆಳೆಗಳ ಸ್ಥಿತಿಯ ವರದಿ ಸಿದ್ಧಪಡಿಸಬೇಕು. ಕೃಷಿ, ಕಂದಾಯ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಜಂಟಿ ಸ್ಥಳ ಪರಿಶೀಲನೆ ನಡೆಸಿ, ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ನಂತರ ಕಮಲನಗರ ತಾಲೂಕನ್ನು ಪರಿಷ್ಕೃತ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

WhatsApp Image 2026 08 29 at 3.48.01 PM 2

ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಸರ್ಕಾರ ತಕ್ಷಣ ಬರ ಪರಿಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಬೆಳೆ ಹಾನಿಯ ನಿಖರ ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಈ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ ತಾಲೂಕಿನ ರೈತರನ್ನು ಒಗ್ಗೂಡಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ ಮಹಾನಗರ ಪಾಲಿಕೆ ಆಯುಕ್ತ ಮುಕುಲ್‌ ಜೈನ್‌ ವರ್ಗಾವಣೆ

ಈ ಸಂದರ್ಭದಲ್ಲಿ ಉತ್ತಮರಾವ್ ಮಾನೆ, ಸುರೇಶ್ ಬಾಪೂರಾವ್, ಕೈಲಾಸ ಪಾಟೀಲ್, ಕಲ್ಲಪ್ಪ ಭೀಮರಾವ್, ಪ್ರಶಾಂತ್ ಖಾನಾಪುರೆ, ಅಮೂಲ್ಯ ಚನ್ನಬಸಪ್ಪ ಹಿರೇಮಠ ಸೇರಿದಂತೆ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...