ಕಮಲನಗರ ಪಟ್ಟಣದಲ್ಲಿ ಯಾವುದೇ ಅರ್ಹ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿರುವ ಎರಡು ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಬುಧವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗಣೇಶ ಮೇಡಿಕಲ್‌ನಲ್ಲಿ ಕ್ಲಿನಿಕ್ ನಡೆಸುತ್ತಿರುವ ಗೌತಮ ಸಮದರ ಹಾಗೂ ಸಾಯಿಲಕ್ಷ್ಮಿ ಆಯುರ್ವೇದ ಆಸ್ಪತ್ರೆಯ ಸುಜಲಕುಮಾರ ಸೇನ್ ಅವರ ನಕಲಿ ಕ್ಲಿನಿಕ್‌ಗಳ ಮೇಲೆ ಅಧಿಕಾರಿಗಳ ತಂಡ ಇಂದು (ಮೇ 13) ದಾಳಿ ನಡೆಸಿತು.
2023ರಲ್ಲಿ ಗೌತಮ ಸಮದರ ಹಾಗೂ ಸುಜಲಕುಮಾರ ಸೇನ್ ಇವರ ಕ್ಲಿನಿಕ್‌ಗಳನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರದಲ್ಲಿ ಮಂಡಿಸಿದಾಗ ಜಿಲ್ಲಾಧಿಕಾರಿಗಳು ತಲಾ 25,000 ದಂಡ ವಿಧಿಸಿ ಆದೇಶಿಸಿದರು. ಆದರೆ, ಈ ನಕಲಿ ವೈದ್ಯರು ಮತ್ತೆ ವೃತ್ತಿಯಲ್ಲಿ ತೊಡಗಿಸಿಕೊಂಡು ಕ್ಲಿನಿಕ್ ನಡೆಸುತ್ತಿರುವುದರಿಂದ ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಕಮಲನಗರ ತಹಸೀಲ್ದಾರ್ ಅಮಿತ ಕುಲಕರ್ಣಿ, ಜಿಲ್ಲಾ ಕೆಪಿಎಂಇ ನೋಡಲ್ ಅಧಿಕಾರಿ ಡಾ.ದಿಲೀಪ ಡೋಂಗ್ರೆ, ಔರಾದ್ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಅನೀಲಕುಮಾರ, ಕೆಪಿಎಂಇ ವಿಷಯ ನಿರ್ವಾಹಕ ಮಹೇಶ್ವರ ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಒಳಗೊಂಡ ತಂಡ ದಾಳಿ ನಡೆಸಿ ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ.
ಇದನ್ನೂ ಓದಿ : ನೀಟ್ ಪರೀಕ್ಷೆ ರದ್ದು : ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರ ವಾಗ್ದಾಳಿ




