ಕಮಲನಗರ | ಮಾಂಜ್ರಾ ನದಿಯಲ್ಲಿ ಮುಳುಗಿ ಯುವಕ ಸಾವು

Date:

ಕಮಲನಗರ ತಾಲೂಕಿನ ಹುಲಸೂರು (ಕೆ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸೋಮವಾರ ಮಧ್ಯಾಹ್ನ ಕೈಕಾಲು ತೊಳೆಯಲು ಹೋಗಿ ನೀರಿನಲ್ಲಿ ಜಾರಿಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಗಳವಾರ ಪತ್ತೆಯಾಗಿದೆ.

- Advertisement -

ಮಹಾರಾಷ್ಟ್ರದ ಉದಗೀರ ತಾಲೂಕಿನ ಹಳ್ಳಿ ಗ್ರಾಮದ ನಿವಾಸಿ ಉಮೇಶ ಅನಿಲ ಪೋಕ್ಲೆ(27) ಮೃತ ಯುವಕ. ಸೋಮವಾರ ಮಧ್ಯಾಹ್ನ ಕೆಲಸ ಮುಗಿಸಿಕೊಂಡು ಮಾಂಜ್ರಾ ನದಿ ದಡದಲ್ಲಿ ಕೈಕಾಲು ತೊಳೆಯಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಇಲಾಖೆ, ಈಜು ತಜ್ಞರು ಹಾಗೂ ಗ್ರಾಮಸ್ಥರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಸೋಮವಾರ ಸಂಜೆವರೆಗೂ ಹುಡುಕಾಟ ನಡೆಸಿದರೂ ಯುವಕನ ಸುಳಿವು ಸಿಗಲಿಲ್ಲ. ಮಂಗಳವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರೆಸಿದರು, ನದಿಯ ತಳದಲ್ಲಿ ಸಿಲುಕಿಕೊಂಡಿದ್ದ ಯುವಕನ ಮೃತದೇಹವನ್ನು ಬೆಳಿಗ್ಗೆ 11:30 ಗಂಟೆಗೆ ಪತ್ತೆಯಾಗಿದೆ.

ಮೃತದೇಹವನ್ನು ಕಮಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮೃತನ ತಾಯಿ ಬೇಬಿ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಔರಾದ್‌ | ಗಡಿಭಾಗದಲ್ಲಿ ಕನ್ನಡತನ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ : ಪ್ರಕಾಶ ದೇಶಮುಖ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...