2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ವಿಷ್ಣು ಸೂರ್ಯಕಾಂತ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ಬೀದರ್ ಹೊರವಲಯದ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಚಕ್ರ ಎಸೆತ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಪ್ರಥಮ ಸ್ಥಾನ ಗಳಿಸಿರುವ ವಿಷ್ಣು, ಶಾಲೆಗೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ ಹಿರೇಮಠ, ಶಾಲೆಯ ಪ್ರಾಂಶುಪಾಲ ರಾಜೇಂದ್ರ ನಿಟ್ಟೂರೆ, ದೈಹಿಕ ಶಿಕ್ಷಣ ಶಿಕ್ಷಕ ಶಿವಶರಣಪ್ಪ ಚಾಂಡೆಶ್ವರ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದು, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ವಿಷ್ಣು ಉತ್ತಮ ಪ್ರದರ್ಶನ ನೀಡಿ ಮತ್ತಷ್ಟು ಸಾಧನೆ ಮಾಡಲೆಂದು ಹಾರೈಸಿದ್ದಾರೆ.
ಇದನ್ನೂ ಓದಿ : ಔರಾದ್ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ




