KPSC ಹಗರಣ | ತಪ್ಪಿತಸ್ಥರೆಲ್ಲರಿಗೂ ಕಠಿಣ ಶಿಕ್ಷೆ ಆಗುತ್ತದೆ : ಸಚಿವ ಈಶ್ವರ ಖಂಡ್ರೆ

Date:

ಕೆಪಿಎಸ್‌ಸಿ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಬಂಧಿತನಾಗಿರುವ ಬಸವರಾಜ ಕನ್ನಾಳೆ ಭಾಲ್ಕಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತನಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧವೇ ಸ್ಪರ್ಧಿಸುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

- Advertisement -

ಕೆಲವು ತಿಂಗಳ ಹಿಂದೆ ಬೆಂಗಳೂರಿನ ನನ್ನ ಕಚೇರಿಯಲ್ಲಿ ಭೇಟಿಯಾಗಲು ಬಂದಿದ್ದ ಕನ್ನಾಳೆ, ತನಗೆ ಬಿಜೆಪಿ ರಾಜ್ಯ ನಾಯಕರ ಶಿಫಾರಸಿನಿಂದ ರಾಜ್ಯಪಾಲರು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನನ್ನಾಗಿ ಮಾಡಿದ್ದು, ಆಶೀರ್ವಾದ ಮಾಡಿ ಎಂದು ಹೇಳಿ ನನಗೆ ಶಾಲು ಹೊದಿಸಿ ಸಿಹಿ ನೀಡಿದ, ನಾನು ಸಿಹಿ ತಿನ್ನೋದಿಲ್ಲ ಎಂದು ಹೇಳಿ ಅವನಿಗೇ ತಿನ್ನಿಸಿದೆ ಎಂದು ವೈರಲ್ ಆಗಿರುವ ಚಿತ್ರದ ಬಗ್ಗೆ ಈಶ್ವರ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ನನ್ನ ಕಚೇರಿಯಿಂದ ಹೊರಡುವಾಗ ಬಸವರಾಜ ಕನ್ನಾಳೆ ಸರ್, ನಾನು ನಿಮ್ಮ ವಿರುದ್ಧವೇ ಭಾಲ್ಕಿಯಿಂದ ಸ್ಪರ್ಧಿಸುತ್ತೇನೆ ಎಂದಿದ್ದ. ನಾನು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶ ಇದೆ. ನಿನ್ನ ಪ್ರಯತ್ನ ನೀನು ಮಾಡು ಎಂದಿದ್ದೆ ಎಂದೂ ತಿಳಿಸಿದ್ದಾರೆ.

ನಮ್ಮ ಕ್ಷೇತ್ರದ ಒಬ್ಬ ವ್ಯಕ್ತಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನಾಗಿದ್ದೇನೆ ಎಂದು ತಿಳಿಸಲು ಬಂದಾಗ ಅವರ ಜೊತೆಯಲ್ಲಿ ಸೌಜನ್ಯದಿಂದ ಮಾತನಾಡುವುದು ಒಬ್ಬ ಜನಪ್ರತಿನಿಧಿಯ ಕರ್ತವ್ಯ. ಈ ಬಗ್ಗೆ ಸ್ಪಷ್ಟ ಮಾಹಿತಿ ಇದ್ದರೂ ಕೇಂದ್ರದ ಮಾಜಿ ಸಚಿವ ಹಾಗೂ ಪರಾಜಿತ ಸಂಸದರು ರಾಜಕೀಯ ದುರುದ್ದೇಶದಿಂದ ಇಂತಹ ಇಲ್ಲ ಸಲ್ಲದ ಆರೋಪ ಮಾಡಿ, ಫೋಟೋ ಬಿಡುಗಡೆ ಮಾಡಿದ್ದಾರೆ ಎಂದು ಪರೋಕ್ಷವಾಗಿ ಭಗವಂತ ಖೂಬಾ ವಿರುದ್ಧ ಕಿಡಿಕಾರಿದರು.

ಇಂದು ಜೆಡಿಎಸ್ ಪಕ್ಷದವರು ಈ ಫೋಟೋ ಹಾಕಿ ಅಪಪ್ರಚಾರ ಮಾಡಿದ್ದಾರೆ. ಜನರಿಗೆ ಸುಳ್ಳನ್ನೇ ನಿಜ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯ ಚಿಹ್ನೆ ಇರುವ ಶಲ್ಯ ಹೊದ್ದು, ಬಿಜೆಪಿ ನಾಯಕರ ಜೊತೆ ಮುಂದಿನ ಸಾಲಿನಲ್ಲಿ ಕುಳಿತು ಫೋಟೋಗೆ ಫೋಸ್ ನೀಡಿರುವ ಹಾಗೂ ಹಲವು ಬಿಜೆಪಿ ನಾಯಕರೇ ಸಿಹಿ ತನಿಸಿರುವ ಫೋಟೋಗಳೂ ಸಾಮಾಜಿಕ ತಾಣದಲ್ಲಿವೆ ಈ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನವರು ಮಾತನಾಡಲಿ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಕೇಂದ್ರದ ಮಾಜಿ ಸಚಿವ ಪರಾಜಿತ ಸಂಸದ ಬಸವರಾಜ ಕನ್ನಾಳ ಜೊತೆ ಅತ್ಯಂತ ಆಪ್ತತೆ ಹೊಂದಿರುವುದು ಇಡೀ ಬೀದರ್ ಗೆ ತಿಳಿದ ವಿಚಾರವಾಗಿದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು, ತಾವು ಮಾಡಿದ ಪಾಪವನ್ನು ಮತ್ತೊಬ್ಬರ ಹೆಗಗಲಿಗೆ ಕಟ್ಟುವ ಪ್ರಯತ್ನ ಅತ್ಯಂತ ನೀಚತನದ್ದಾಗಿದ್ದು, ಇದನ್ನು ಖಂಡಿಸುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ.

ಕೋತಿ ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತು ಎನ್ನುವಂತೆ ಕೆಲವರು ವರ್ತಿಸುತ್ತಿದ್ದಾರೆ. ಇವರೂ ಕನ್ನಾಳೆ ಜೊತೆಗೆ ಈ ಅಕ್ರಮ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಶಂಕೆ ಮೂಡುತ್ತಿದೆ. ಈ ಬಗ್ಗೆ ಪಾರದರ್ಶಕ ಹಾಗೂ ಸಮಗ್ರ ತನಿಖೆ ಆಗಬೇಕು. ಯಾರು ಎಷ್ಟೇ ದೊಡ್ಡವರಾಗಿದ್ದರೂ, ಪ್ರತಿಭಾವಂತ ಅಭ್ಯರ್ಥಿಗಳಿಗೆ ವಂಚನೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು. ಆ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದು ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ : ಈ ದಿನ ಸಂಪಾದಕೀಯ | GDP ಶೇ.7.8; ಅಸಲಿ ಅಭಿವೃದ್ಧಿ ಯಾರ ಪಾಲಿಗೆ?

ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವವರ ನಿಕಟವರ್ತಿಗಳ ಬಗ್ಗೆ ಸಮಗ್ರ ತನಿಖೆ ಆದರೆ, ಮಾಜಿ ಸಂಸದರ ನಿಜ ಬಣ್ಣವೂ ಬಯಲಾಗುವ ಸಾಧ್ಯತೆ ಇದೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೋಟ್ ಚೋರಿ’ಗೆ ಪ್ರಧಾನಿ ಮೋದಿ, ಅಮಿತ್ ಶಾ, ಸಿಸಿಇ ಸೂಕ್ತ ಬೆಲೆ ತೆರಲಿದ್ದಾರೆ: ಗೋವಾದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ವ್ಯವಸ್ಥಿತವಾದ ದಾಳಿ ನಡೆಯುತ್ತಿದ್ದು, ಮತಗಳ ಕಳವು...

ಗ್ವಾಲಿಯರ್ ಭೀಕರ ಅಪಘಾತ: ಎಸ್‌ಪಿ, 8 ಪೋಲಿಸ್ ಸಿಬ್ಬಂದಿ ಅಮಾನತು; ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಶೀತ್ಲಾ ಮಾತಾ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಸಮೂಹದ ಮೇಲೆ...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ...