ಲೈನ್ ಮೆನ್‌ಗಳ ಕೊರತೆ | ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್‌ಗಳ ನೇಮಕ: ಸಚಿವ ಕೆ ಜೆ ಜಾರ್ಜ್‌

Date:

Advertisements

ರಾಜ್ಯದಲ್ಲಿ ಲೈನ್ ಮೆನ್‌ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್‌ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು.

ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಲೈನ್ ಮೆನ್ ಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ 3 ಸಾವಿರ ಲೈನ್ ಮನ್ ಗಳ ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು” ಎಂದರು.

“ಟ್ರಾನ್ಸ್ ಫಾರ್ಮರ್‌ಗಳ ರಿಪೇರಿ, ಅದರಲ್ಲೂ ಮುಖ್ಯವಾಗಿ ರೈತರಿಗೆ ವಿದ್ಯುತ್ ಪೂರೈಸುವ ಟ್ರಾನ್ಸ್ ಫಾರ್ಮರ್ ಗಳ ದುರಸ್ತಿ ಅಥವಾ ಬದಲಾವಣೆಗೆ ತುರ್ತು ಕ್ರಮ ಕೈಗೊಳ್ಳಬೇಕು. ವಿದ್ಯುತ್ ತಂತಿ, ಕಂಬಗಳ ದುರಸ್ತಿ ಸೇರಿದಂತೆ ವಿದ್ಯುತ್ ಪೂರೈಕೆಯಲ್ಲಿ ಆಗುವ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಬಗೆಹರಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

Advertisements

“ಕಳೆದ ವರ್ಷ ಬರಗಾಲವಿದ್ದರೂ ಬೇಸಿಗೆಯಲ್ಲಿ ಕೂಡ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದ್ದು, ಈ ಬಾರಿಯೂ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಇಲಾಖೆಯು ಸನ್ನದ್ಧವಾಗಿದೆ. ವಿದ್ಯುತ್ ಸಂಬಂಧಿಸಿದಂತೆ ಕೆಲ ತಾಂತ್ರಿಕ ದೋಷಗಳು ಆಗಾಗ್ಗೆ ಕಂಡುಬರುತ್ತಿರುವುದರಿಂದ ಕೆಲವೊಮ್ಮೆ ಸಮಸ್ಯೆಗಳ ನಿವಾರಣೆಗೆ ಸಮಯ ಬೇಕಾಗುತ್ತದೆ. ಆದರೆ, ಈ ಎಲ್ಲಾ ಕಾರ್ಯವನ್ನು ಕಾಲಮಿತಿಯಲ್ಲಿ ಮುಗಿಸಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

“ರಾಜ್ಯದಲ್ಲಿ ಸದ್ಯ ದಿನಕ್ಕೆ 16 ರಿಂದ 17 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆಯಿದೆ. ಈ ವರ್ಷ ಯಾವುದೇ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಬೇಸಿಗೆಯಲ್ಲಿ ಬೇಡಿಕೆ ಹೆಚ್ಚಾದರೆ ವಿದ್ಯುತ್ ಖರೀದಿಗೂ ಸಿದ್ಧವಾಗಿದ್ದೇವೆ. ರಾಜ್ಯದಲ್ಲಿ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಕುರಿತು ಈ ಹಿಂದೆ ಸಲ್ಲಿಸಿದ್ದ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಲಾಗುವುದು.ಅದಾದ ಬಳಿಕ ಹೊಸದಾಗಿ ಅಕ್ರಮ-ಸಕ್ರಮಕ್ಕೆ ಸಲ್ಲಿಸಿದ್ದ ಅರ್ಜಿಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಬೀದರ್ ಜಿಲ್ಲೆಯಲ್ಲಿ ಒಟ್ಟು 1,480 ಹೊಸ ಅರ್ಜಿಗಳು ಅಕ್ರಮ-ಸಕ್ರಮ ಯೋಜನೆಯಲ್ಲಿ ಸಲ್ಲಿಕೆಯಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುುದು” ಎಂದರು.

ಮೂರು ದಿನದಲ್ಲಿ ಪರಿಹಾರ ತಲುಪಿಸಿ

ಬೀದರ್ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿ, ಜಿಲ್ಲೆಯಲ್ಲಿ ವಿದ್ಯುತ್ ಅವಘಡದಲ್ಲಿ ಮರಣ ಹೊಂದಿದ 9 ಜನರ ಕುಟುಂಬಕ್ಕೆ ಈವರೆಗೂ ಪರಿಹಾರ ನೀಡಿದ ಬಗ್ಗೆ ಇಂಧನ ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, ಮಂದಿನ 3 ದಿನದೊಳಗಾಗಿ ಪರಿಹಾರ ತಲುಪಿಸುವಂತೆ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X