ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ, ಮೃತ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಭರವಸೆ

Date:

ನೆರೆಯ ತೆಲಂಗಾಣದ ಜಹೀರಾಬಾದ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಬುಧವಾರ ಬೆಳಿಗ್ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

- Advertisement -

ಆಟೋ ಹಾಗೂ ಟ್ಯಾಂಕರ್‌ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೀದರ್ ತಾಲೂಕಿನ ರಾಜಗೀರಾ ಗ್ರಾಮದ ಆರು ಮಂದಿ ಮೃತಪಟ್ಟಿರುವುದು, ಕೆಲವರು ಗಾಯಗೊಂಡಿರುವ ಘಟನೆ ಅತ್ಯಂತ ನೋವು ಹಾಗೂ ಆಘಾತವನ್ನುಂಟು ಮಾಡಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಒಬ್ಬ ಗಾಯಾಳು ಹೈದರಾಬಾದ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ ಗಾಯಾಳುಗಳು ಬ್ರಿಮ್ಸ್‌ನಲ್ಲಿ ದಾಖಲಾಗಿದ್ದಾರೆ, ಎಲ್ಲರಿಗೂ ಅಗತ್ಯವಿರುವ ಎಲ್ಲ ರೀತಿಯ ಉತ್ತಮ ಚಿಕಿತ್ಸೆ ಹಾಗೂ ಸೂಕ್ತ ವೈದ್ಯಕೀಯ ಆರೈಕೆ ಒದಗಿಸುವಂತೆ ವೈದ್ಯರು, ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಅಪಘಾತದ ಸುದ್ದಿ ತಿಳಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ವಿವರ ನೀಡಿದ್ದೇನೆ. ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಂದು ಕುಟುಂಬಕ್ಕೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪ್ರತಿಯೊಂದು ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಹೇಳಿದ್ದೇನೆ, ಅದಕ್ಕೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಸಂಕಷ್ಟದಲ್ಲಿರುವ ಮೃತರ ಕುಟುಂಬಗಳ ಪರ ನಾನು ಹಾಗೂ ನಮ್ಮ ಸರ್ಕಾರ ಅವರ ಜೊತೆ ಇರಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇದನ್ನೂ ಓದಿ : ಭೀಕರ ಅಪಘಾತ | ತೆಲಂಗಾಣಕ್ಕೆ ಕೂಲಿ ಕೆಲಸಕ್ಕೆ ತೆರಳಿದ ಆರು ಜನ ಕಾರ್ಮಿಕರ ಸಾವು

ಈ ಸಂದರ್ಭದಲ್ಲಿ ಬ್ರಿಮ್ಸ್‌ ನಿರ್ದೇಶಕರಾದ ಡಾ. ಶಾಂತಲಾಕೌಜಲಗಿ ಸೇರಿದಂತೆ ವೈದ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...