ಮೋಳಕೇರಾ ಸ್ಪೋಟ ಪ್ರಕರಣ : ಘಟನಾ ಸ್ಥಳಕ್ಕೆ ಸಚಿವದ್ವಯರ ಭೇಟಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

Date:

ಬೀದರ್ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಶನಿವಾರ (ಜ.31) ರಂದು ಬೆಳಿಗ್ಗೆ ನಡೆದ ಅನುಮಾನಾಸ್ಪದ ವಸ್ತು ಸ್ಫೋಟದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

- Advertisement -

ಭಾನುವಾರ ಮೋಳಕೇರಾ ಗ್ರಾಮದಲ್ಲಿ ನಡೆದ ನಿಗೂಢ ಸ್ಫೋಟದ ಸ್ಥಳ ವೀಕ್ಷಿಸಿ, ಅಧಿಕಾರಿಗಳಿಂದ ಘಟನೆಯ ವಿವರವಾದ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವರು ʼಮೇಲ್ನೋಟಕ್ಕೆ ಮನೆಯ ಮುಂಭಾಗದಲ್ಲಿ ರಾಸಾಯನಿಕ ಮಿಶ್ರಿತ ವಸ್ತುಗಳನ್ನು ಶೇಖರಣೆ ಮಾಡಿರುವುದರಿಂದ ಈ ಸ್ಫೋಟ ಸಂಭವಿಸಿರುವ ಸಾಧ್ಯತೆ ಇರುವುದಾಗಿ ಶಂಕಿಸಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼಈ ಘಟನೆ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ. ಯಾರು ಕೆಮಿಕಲ್‌ ತಂದಿದ್ದಾರೆ, ಅವರ ವಿರುದ್ಧ ಎಫ್‌ಐಆರ್ ಸಹ ಆಗಿದೆ. ಸಂಪೂರ್ಣ ತನಿಖಾ ವರದಿ ಬಂದ ತಕ್ಷಣ ವರದಿ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದಲ್ಲಿ ಯಾರೇ ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆʼ ಎಚ್ಚರಿಸಿದರು.

ʼಮೋಳಕೇರಾ ಗ್ರಾಮದಲ್ಲಿ ಮೋಳಿಗೆ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿದಂತೆ 6 ಜನರು ಗಂಭೀರವಾಗಿ ಗಾಯಗೊಂಡಿರುವುದು ಅತ್ಯಂತ ದುಃಖಕರ ಸಂಗತಿ. ಬೀದರ್‌ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಈಗಾಗಲೇ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದೇನೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆʼ ಎಂದು ಹೇಳಿದರು.

WhatsApp Image 2026 02 01 at 12.49.44 PM

ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಇಂತಹ ದುರ್ಘಟನೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಎಲ್ಲ ರೀತಿಯ ಘಟನೆಯ ಸೂಕ್ತ ತನಿಖೆ ನಡೆಸಲು ಸಿದ್ಧವಾಗಿದ್ದು, ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು. ಗ್ರಾಮಸ್ಥರೆಲ್ಲರೂ ಆತಂಕ ಪಡದೆ ಧೈರ್ಯವಾಗಿ ಇರಬೇಕುʼ ಎಂದು ತಿಳಿಸಿದರು.

ಗ್ರಾಮದ ಸುತ್ತಲೂ ಕೆಮಿಕಲ್‌ ತ್ಯಾಜ್ಯ ತಂದು ಹೊಲ-ಗದ್ದೆಗಳಲ್ಲಿ ಎಸೆಯಲಾಗುತ್ತಿದೆ. ಇದರಿಂದ ಮಣ್ಣು, ಗಾಳಿ, ನೀರು ಕಲುಷಿತಗೊಂಡಿದ್ದು, ಜನರಿಗೆ ಕುಡಿಯಲು ಯೋಗ್ಯವಾದ ನೀರು ಲಭ್ಯವಾಗದಂತಹ ಪರಿಸ್ಥಿತಿ ಉದ್ಭವಿಸಿದೆʼ ಎಂದು ಗ್ರಾಮಸ್ಥರು ಸಚಿವರ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವ ಖಂಡ್ರೆ ಅವರು, ʼಬೆಂಗಳೂರಿನ ಪರಿಸರ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ತಂಡವನ್ನು ಗ್ರಾಮಕ್ಕೆ ಕರೆಸಿ ಉನ್ನತ ತನಿಖೆ ನಡೆಸಲಾಗುವುದು. ತನಿಖಾ ವರದಿ ಬಂದ ಬಳಿಕ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದುʼ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಇದನ್ನೂ ಓದಿ : ಬೀದರ್ | ಆಕಸ್ಮಿಕ ಸ್ಫೋಟ ಪ್ರಕರಣ : ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಸಚಿವ ಖಂಡ್ರೆ

ಈ ಸಂದರ್ಭದಲ್ಲಿ‌ ಪೌರಾಡಳಿತ ಸಚಿವ ರಹೀಂ ಖಾನ್‌, ಹುಮನಾಬಾದ್ ಶಾಸಕ ಸಿದ್ದಲಿಂಗಪ್ಪ ಪಾಟೀಲ್‌, ಮಾಜಿ ಸಚಿವ ರಾಜಶೇಖರ್‌ ಪಾಟೀಲ್‌, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ, ಹುಮನಾಬಾದ್ ತಹಸೀಲ್ದಾರ್ ಅಜುಂ ತಬ್‌ಸುಮ್ ಸೇರಿದಂತೆ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...