ಬೀದರ್ ನಗರದ ರಸ್ತೆ, ಬೀದಿ ಹಾಗೂ ವೃತ್ತಗಳಿಗೆ ಶರಣ-ಸೂಫಿ-ಸಂತರ ಹೆಸರಿಡಿ

Date:

ಬೀದರ್ ನಗರದ ವಿವಿಧ ರಸ್ತೆಗಳು, ಬೀದಿಗಳು ಹಾಗೂ ವೃತ್ತಗಳಿಗೆ 12ನೇ ಶತಮಾನದ ಶರಣರು ಮತ್ತು ಸೂಫಿ ಸಂತರ ಹೆಸರುಗಳನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಸಂಘದ ಜಿಲ್ಲಾ ಘಟಕ ಮನವಿ ಮಾಡಿದೆ.

- Advertisement -

ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಬೀದರ ಜಿಲ್ಲೆ ತನ್ನ ವೈವಿಧ್ಯಮಯ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಹಾಗೂ ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದೆ. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚನ್ನಬಸವಣ್ಣ, ಸಿದ್ಧರಾಮರು ಸೇರಿದಂತೆ ಹನ್ನೆರಡನೇ ಶತಮಾನದ ಶರಣರು ಸಮಾನತೆ, ಕಾಯಕ, ದಾಸೋಹ, ಮಾನವೀಯತೆ ಹಾಗೂ ಜಾತಿ–ಮತ ಭೇದಗಳ ನಿರ್ಮೂಲನೆಯ ಸಂದೇಶವನ್ನು ಸಾರಿದ್ದಾರೆ” ಎಂದರು.

ಬೀದರ ನೆಲವು ಶತಮಾನಗಳಿಂದ ಸೂಫಿ ಸಂತರ ಮಾನವೀಯತೆ, ಪ್ರೀತಿ, ಸಹಬಾಳ್ವೆ ಹಾಗೂ ಸೌಹಾರ್ದದ ಸಂದೇಶಕ್ಕೆ ಸಾಕ್ಷಿಯಾಗಿದೆ. ಶರಣರ ವಚನ ಪರಂಪರೆ ಮತ್ತು ಸೂಫಿ ಸಂತರ ಮಾನವೀಯ ಸಂದೇಶಗಳು ಸಮಾಜದಲ್ಲಿ ಶಾಂತಿ, ಸಹೋದರತ್ವ ಹಾಗೂ ಸಾಮರಸ್ಯವನ್ನು ಬೆಳೆಸುವ ಮಹತ್ವದ ಪರಂಪರೆಗಳಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಶರಣ ಸೂಫಿ ಸಂತರ ಸ್ಮರಣೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಸಾಮಾಜಿಕ ಹೊಣೆಗಾರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬೀದರ ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಹಾಗೂ ಇನ್ನೂ ಹೆಸರು ನಿಗದಿಯಾಗದ ಪ್ರಮುಖ ರಸ್ತೆಗಳು, ಬೀದಿಗಳು ಮತ್ತು ವೃತ್ತಗಳಿಗೆ ಹನ್ನೆರಡನೇ ಶತಮಾನದ ಶರಣರು ಹಾಗೂ ಬೀದರದ ಸೂಫಿ ಸಂತರ ಹೆಸರಿಡಬೇಕೆಂದು ಒತ್ತಾಯಿಸಿದರು.

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಬೀದರ ನಗರದ ರಸ್ತೆ, ಬೀದಿ ಹಾಗೂ ವೃತ್ತಗಳ ನಾಮಕರಣಕ್ಕಾಗಿ ಶರಣರು ಮತ್ತು ಸೂಫಿ ಸಂತರ ಹೆಸರುಗಳ ಪಟ್ಟಿಯನ್ನು ಸಿದ್ಧಪಡಿಸಬೇಕು. ಬಳಿಕ ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಅಭಿಪ್ರಾಯ ಪಡೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೂಚನೆ

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಸಂಘದ ಕಾರ್ಯಾಧ್ಯಕ್ಷರಾದ ಸಿದ್ದು ಫುಲಾರಿ, ಶ್ರೀನಿವಾಸ ಹೂಗಾರ, ಪ್ರಭುಶಟ್ಟಿ ಹೂಗಾರ, ಓಂಕಾರ್ ಹೂಗಾರ ಸೇರಿದಂತೆ ಜಿಲ್ಲೆಯ ಹೂಗಾರ ಸಮಾಜದ ಅನೇಕ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...