ಬೀದರ್ ದಕ್ಷಿಣ ಕ್ಷೇತ್ರದ ಜಿಪಂ, ತಾಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

Date:

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಮಾದಿಗ ಸಮುದಾಯದ ಯುವ ಮುಖಂಡ ಆಸ್ಕರ್ ಫರ್ನಾಂಡೀಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮಾದಿಗ, ಹೊಲೆಯ ಸೇರಿದಂತೆ ವಿವಿಧ ಉಪಜಾತಿಗಳನ್ನು ಒಳಗೊಂಡ ದಲಿತ ಸಮುದಾಯದ 85 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ. ಇಷ್ಟೊಂದು ದೊಡ್ಡ ಸಂಖ್ಯೆಯ ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರ ಒಂದೂ ಇಲ್ಲದಂತಾಗಿರುವುದು ದಲಿತ ಸಮುದಾಯದ ರಾಜಕೀಯ ಪ್ರಾತಿನಿಧ್ಯದ ದೃಷ್ಟಿಯಿಂದ ಕಳವಳಕಾರಿ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
WhatsApp Image 2026 10 10 at 6.59.09 PM 1
ಜಾಹೀರಾತು

ಕ್ಷೇತ್ರದಲ್ಲಿ ಈ ಹಿಂದೆ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಔರಾದ್ (ಎಸ್) ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಸಾಮಾನ್ಯ ಮಹಿಳಾ ಕ್ಷೇತ್ರವನ್ನಾಗಿ ಬದಲಿಸಿರುವುದಕ್ಕೆ ತಮ್ಮ ವಿರೋಧವಿಲ್ಲ. ಆದರೆ, ಮೀಸಲಾತಿ ಬದಲಾವಣೆ ಸಂದರ್ಭದಲ್ಲಿ ಬೇರೆ ಯಾವುದಾದರೂ ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ ಮೀಸಲಿಡುವ ಮೂಲಕ ದಲಿತ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬಹುದಿತ್ತು ಎಂದು ವಿಶ್ಲೇಷಿಸಿದ್ದಾರೆ.

ಮನ್ನಾಏಖ್ಖೇಳ್ಳಿ ತಾಲ್ಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಈ ಹಿಂದೆ ಇದ್ದ ಸಾಮಾನ್ಯ ಮಹಿಳಾ ಮೀಸಲಾತಿಯನ್ನೇ ಮುಂದುವರಿಸಿರುವುದಕ್ಕೂ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಮೀಸಲಾತಿ ನಿರ್ಧಾರಗಳು ದಲಿತ ಸಮುದಾಯದ ರಾಜಕೀಯ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸುವಂತಿರಬೇಕು ಎಂದು ಒತ್ತಾಯಿಸಿದ್ದಾರೆ.

WhatsApp Image 2026 10 10 at 7.46.08 PM 1
ಜಾಹೀರಾತು

ಇದನ್ನೂ ಓದಿ : ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಪ್ರಸ್ತುತ ಪ್ರಕಟಿಸಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಮೀಸಲಾತಿಯಿಂದ ಕ್ಷೇತ್ರದ ದಲಿತ ಸಮುದಾಯದ ರಾಜಕೀಯ ಪ್ರಾತಿನಿಧ್ಯಕ್ಕೆ ಧಕ್ಕೆಯಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ದಲಿತಪರ ಚಿಂತಕರು, ಬುದ್ಧಿಜೀವಿಗಳು ಹಾಗೂ ಯುವಕರು ಮೀಸಲಾತಿ ಕುರಿತು ಕಳವಳ ವ್ಯಕ್ತಪಡಿಸಿದ್ದು, ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಸ್ಕರ್ ಫರ್ನಾಂಡೀಸ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...