ಬೀದರ ರೈಲ್ವೆ ನಿಲ್ದಾಣದಲ್ಲಿ ಗ್ರಂಥಾಲಯ ತೆರೆಯಿಸಿ, ದೆಹಲಿಗೆ ರೈಲು ಓಡಿಸಿ

Date:

ಬೀದರ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಗ್ರಂಥಾಲಯ ಸ್ಥಾಪಿಸಬೇಕೆಂದು ಆಮ್‌ ಆದ್ಮಿ ಪಕ್ಷ ಜಿಲ್ಲಾ ಘಟಕ ಒತ್ತಾಯಿಸಿದೆ.

- Advertisement -

ಈ ಸಂಬಂಧ ಪಕ್ಷದ ಪದಾಧಿಕಾರಿಗಳು ಕೇಂದ್ರ ರೈಲ್ವೆ ಸಚಿವರ ಹೆಸರಿಗೆ ಬರೆದ ಮನವಿಯನ್ನು ಬುಧವಾರ ಬೀದರ್‌ ರೈಲ್ವೆ ನಿಲ್ದಾಣದ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಸರಾದ ಬೀದರ ಜಿಲ್ಲೆಯು ಬಹುಭಾಷಿಕರ ನೆಲವು ಹೌದು. ಬೀದರ್‌ ನಗರದಿಂದ ಪ್ರತಿದಿನ ಸಾವಿರಾರು ಪ್ರಯಾಣಿಕರು ರಾಜ್ಯ ಅಲ್ಲದೆ ನೆರೆಯ ರಾಜ್ಯಗಳಿಗೆ ಪ್ರಯಾಣಿಸುತ್ತಾರೆ. ರೈಲುಗಳ ಆಗಮನ ಮತ್ತು ನಿರ್ಗಮನದ ನಡುವೆ ಪ್ರಯಾಣಿಕರು ಸಾಕಷ್ಟು ಸಮಯವನ್ನು ನಿಲ್ದಾಣದಲ್ಲೇ ಕಳೆಯುತ್ತಿದ್ದು, ಈ ಸಮಯವನ್ನು ಜ್ಞಾನಾರ್ಜನೆ ಹಾಗೂ ಸದುಪಯೋಗಪಡಿಸಿಕೊಳ್ಳಲು ಬೀದರ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕ ಗ್ರಂಥಾಲಯ ಮತ್ತು ವಾಚನಾಲಯ ಆರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬೀದರ ನಗರದಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ದೆಹಲಿ ಸೇರಿದಂತೆ ವಿವಿಧ ನಗರಗಳಿಗೆ ರೈಲಿನಲ್ಲಿ ಸಂಚರಿಸುತ್ತಿದ್ದಾರೆ. ಬೀದರದಿಂದ ದೆಹಲಿಗೆ ನೇರ ರೈಲು ಸೇವೆ ಆರಂಭಿಸಬೇಕು. ರೈಲು ನಿಲ್ದಾಣದಲ್ಲಿ ಗ್ರಂಥಾಲಯ ತೆರೆದರೆ ರೈಲಿಗಾಗಿ ಕಾಯುವ ಪ್ರಯಾಣಿಕರು ಪುಸ್ತಕ, ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಓದುವ ಮೂಲಕ ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಸಹಕಾರಿಯಾಗಲಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ ಈ ಸೌಲಭ್ಯ ಹೆಚ್ಚಿನ ಅನುಕೂಲ ಕಲ್ಪಿಸುತ್ತದೆ ಎಂದು ಗಮನ ಸೆಳೆದರು.

ಇದನ್ನೂ ಓದಿ : ಬೀದರ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಬ್ದುಲ್‌ ಮನ್ನಾನ್‌ ಸೇಠ್‌ ನೇಮಕ

ಈ ಸಂದರ್ಭದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ ಸೇರಿದಂತೆ ಪಕ್ಷದ ಪ್ರಮುಖರಾದ ಬಸವರಾಜ ಸ್ವಾಮಿ, ಓಂಕಾರ ಎನ್.‌ ಮೋಹನ್‌ ಕುಮಾರ, ಎಂ.ಡಿ.ಶರೀಫ್‌, ಶಿವರಾಜ ಶಿವಗೊಂಡ, ನಂದಿಬಸವ ಪಾಟೀಲ್‌, ಎಂ.ಜಾವೀದ್‌, ಸೂರ್ಯಕಾಂತ ರಾಂಪೂರೆ, ಪ್ರಕಾಶ ಮಾಣಿಕ, ತುಳಸಿದಾಸ ವಾಘಮಾರೆ, ರಮೇಶ ಶೆಟಕಾರ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ ಭರವಸೆಯ ಆಟಗಾರ

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ...

ನಟ ಧನ್ವೀರ್ ಗೌಡ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ ದೂರು ದಾಖಲು!

ಕನ್ನಡ ಚಿತ್ರರಂಗದ ನಟ ಧನ್ವೀರ್ ಗೌಡ ಮತ್ತು ನಟ ದರ್ಶನ್ ಅವರ...

ಸಿದ್ಧರಾಮಯ್ಯ ‘ಸ್ಟಿಂಗ್’ ಪ್ರಕರಣ: ಎಚ್‌ಡಿಕೆ‌ ದೆಹಲಿ ಕಚೇರಿಯ ಸಿಬ್ಬಂದಿ ರಿತೇಶ್ ಬಂಧನ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಬಂಧಿಸಿದ 'ಸ್ಟಿಂಗ್ ಆಪರೇಷನ್' ಪ್ರಕರಣದಲ್ಲಿ ದೆಹಲಿ...

ಕಲಬುರಗಿ | ರೈತರ ಸಾಲಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ

ಅನಾವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಶೇ.100ರಷ್ಟು ಬೆಳೆ ವಿಮೆ ಪರಿಹಾರ...