ಔರಾದ್ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿದಿನ ಬೀದರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ತೆರಳುವ ನೂರಾರು ವಿದ್ಯಾರ್ಥಿಗಳು ಸಮರ್ಪಕ ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದ್ದು, ಹೆಚ್ಚಿನ ಬಸ್ ಓಡಿಸುವಂತೆ ಕರ್ನಾಟಕ ಪಬ್ಲಿಕ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಂದಾದೀಪ ಬೋರಳೆ ಆಗ್ರಹಿಸಿದ್ದಾರೆ.
ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಬಸ್‌ಗಳ ಸಂಖ್ಯೆ ಕಡಿಮೆಯಿರುವುದರಿಂದ ವಿದ್ಯಾರ್ಥಿಗಳು ಜನದಟ್ಟಣೆಯ ನಡುವೆ ಅಪಾಯಕಾರಿ ಹಾಗೂ ಅನಾನುಕೂಲಕರ ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಔರಾದ್ ತಾಲ್ಲೂಕಿನ ವಿವಿಧ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ನಿತ್ಯ ಗಂಟೆಗಟ್ಟಲೆ ಕಾಯಬೇಕಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಕಾಲೇಜು ತಲುಪಲು ಸಾಧ್ಯವಾಗದೆ ತರಗತಿಗಳನ್ನು ತಪ್ಪಿಸಿಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುವ ವೇಳೆಯೂ ಇದೇ ಸಮಸ್ಯೆ ಮುಂದುವರಿದಿದ್ದು, ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ ಎಂದು ದೂರಿದರು.
ಸಾರಿಗೆ ಇಲಾಖೆಗೆ ಮೇಲಾಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಔರಾದ್-ಬೀದರ ಮಾರ್ಗದಲ್ಲಿ ಬೆಳಿಗ್ಗೆ 6 ರಿಂದ 9 ಗಂಟೆಯವರೆಗೆ ಹೆಚ್ಚುವರಿ ಬಸ್‌ಗಳನ್ನು ಓಡಿಸಬೇಕು. ಸಂಜೆ ಕಾಲೇಜು ಮುಗಿಸಿ ಗ್ರಾಮಗಳಿಗೆ ಹಿಂದಿರುಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸಮಯದಲ್ಲಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಹಾಗೂ ಸುರಕ್ಷಿತ ಪ್ರಯಾಣವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆ ನಿಗಮದ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ಬಸ್‌ಗಳ ಕೊರತೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಬೀದರ್ | ಪ್ರತಿ ಟನ್ ಕಬ್ಬಿಗೆ ₹4,000 ಬೆಂಬಲ ಬೆಲೆ ನಿಗದಿಪಡಿಸಿ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್





