SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

Date:

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ ಹಾಗೂ ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಅಕ್ಟೋಬರ್‌ 23ರಂದು ಬೀದರ್‌ನಲ್ಲಿ ಪ್ರತಿಭಟನಾ ಸಭೆ ಹಾಗೂ ತಿರಂಗಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

- Advertisement -

ಎಸ್‌ಐಆರ್‌ ವಿರೋಧಿ ಒಕ್ಕೂಟ, ಸಂಯುಕ್ತ ಕಿಸಾನ್‌ ಮೋರ್ಚಾ, ಜಾತ್ಯತೀತ ಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಅಕ್ಟೋಬರ್‌ 21ರಂದು ನಗರದ ಸ್ಟಾರ್‌ ಲಾಡ್ಜ್‌ನಲ್ಲಿ ಹಿರಿಯ ಹೋರಾಟಗಾರ ಬಾಬುರಾವ ಹೊನ್ನಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ನಿರ್ಣಯ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಅ.23ರಂದು ಮಧ್ಯಾಹ್ನ 3 ಗಂಟೆಗೆ ಅಂಬೇಡ್ಕರ್‌ ವೃತ್ತದ ರಸ್ತೆಯ ಬದಿಯಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಬಳಿಕ ಹರಳಯ್ಯ ಸರ್ಕಲ್‌, ಛತ್ರಪತಿ ಶಿವಾಜಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಭಗತ್‌ ಸಿಂಗ್‌ ವೃತ್ತದ ಮೂಲಕ ತಿರಂಗಾ ಮೆರವಣಿಗೆ ಸಾಗಿ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ.

ರಾಷ್ಟ್ರಮಟ್ಟದ ಕರೆಯ ಮೇರೆಗೆ ಬೀದರ್‌ ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೇಶಾದ್ಯಂತ ಜಂತರ್‌ ಮಂತರ್‌ ಮಾದರಿಯ ಪ್ರತಿಭಟನಾ ಸಭೆಗಳನ್ನು ಆಯೋಜಿಸುವ ಮೂಲಕ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಜನಾಂದೋಲನ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

WhatsApp Image 2026 10 10 at 7.46.08 PM 18
ಜಾಹೀರಾತು

‘ಹರ್‌ ಹಾಥ್‌ ಮೇ ತಿರಂಗಾ, ಹರ್‌ ಗಲಿ ಮೇ ಜಂತರ್‌ ಮಂತರ್‌’ ಘೋಷಣೆಯೊಂದಿಗೆ ಜನರನ್ನು ಸಂಘಟಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಸಾಮೂಹಿಕ ಶಕ್ತಿ ರೂಪಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಎಸ್ಐಆರ್ ಅನ್ನು ರದ್ದುಗೊಳಿಸಬೇಕು ಮತ್ತು ಮತದಾರರ ಪಟ್ಟಿಯಿಂದ ಅಳಿಸಲಾಗಿರುವ ಎಲ್ಲ ಮತದಾರರ ಹೆಸರುಗಳನ್ನು ಮರುಸ್ಥಾಪಿಸಬೇಕು. ಚುನಾವಣಾ ಆಯುಕ್ತರ ಕಾಯ್ದೆ-2023ಕ್ಕೆ ಮಾಡಲಾದ ಪಿತೂರಿಪರ ತಿದ್ದುಪಡಿಯನ್ನು ರದ್ದುಗೊಳಿಸಬೇಕು.

ಪಕ್ಷಪಾತರಹಿತ ಪ್ರಕ್ರಿಯೆಯ ಮೂಲಕ ಹೊಸ ಚುನಾವಣಾ ಆಯೋಗವನ್ನು ನೇಮಿಸಬೇಕು; ಮತದಾರರ ಪಟ್ಟಿಯನ್ನು ನ್ಯಾಯಸಮ್ಮತವಾಗಿ ಪರಿಷ್ಕರಿಸಬೇಕು; ಕಾಗದದ ಮತಪತ್ರ ಪದ್ಧತಿಗೆ ಮರಳಬೇಕು; ಚುನಾವಣಾ ಸುಧಾರಣೆಗಳ ಮೂಲಕ ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಬೇಕು ಎಂಬ ಬೇಡಿಕೆಗಳಿಗೆ ಆಗ್ರಹಿಸಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಿದರು.

WhatsApp Image 2026 10 10 at 6.59.31 PM 6
ಜಾಹೀರಾತು

ಇದನ್ನೂ ಓದಿ : ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ದೇಶದ ಭವಿಷ್ಯ ಯುವಜನರ ಕೈಯಲ್ಲಿದ್ದು, ಪ್ರಜಾಪ್ರಭುತ್ವವನ್ನು ಮರಳಿ ಪಡೆಯುವ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಎಸ್‌ಐಆರ್‌ ರದ್ದತಿಗಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಸಭೆಯಲ್ಲಿ ಭಾಗವಹಿಸಿದ ಪ್ರಮುಖರಾದ ನಿಜಾಮುದ್ದೀನ್‌, ಓಂಪ್ರಕಾಶ ರೊಟ್ಟೆ, ವಿಠಲದಾಸ ಪ್ಯಾಗೆ, ಸರ್ಫರಾಜ್‌ ಹಾಸ್ಮಿ, ಡಾ.ಮಕ್ಸೂದ್‌ ಚಂದಾ, ಡಾ.ದೇವಿದಾಸ ತುಮಕುಂಟೆ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...

ಸಾಮಾನ್ಯ ಶಿಸ್ತುಕ್ರಮವನ್ನು ‘ಆತ್ಮಹತ್ಯೆಗೆ ಪ್ರಚೋದನೆ’ ಎನ್ನಲಾಗದು: ಮದ್ರಾಸ್ ಹೈಕೋರ್ಟ್

ರಜೆ ಅರ್ಜಿಯನ್ನು ತಿರಸ್ಕರಿಸುವುದು, ಕರ್ತವ್ಯಕ್ಕೆ ಗೈರುಹಾಜರಿ ಎಂದು ದಾಖಲಿಸುವುದು ಹಾಗೂ ಶಿಸ್ತುಕ್ರಮ...