ಪೆಟ್ರೋಲ್, ಡೀಸೆಲ್ ದರ ಏರಿಕೆ | ಬಡವರ ಮೇಲೆ ಗದಾಪ್ರಹಾರ : ಸಚಿವ ಈಶ್ವರ ಖಂಡ್ರೆ

Date:

ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್‌ಡಿಎ ಸರ್ಕಾರ, ಈಗ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರವನ್ನು ₹3 ಹೆಚ್ಚಿಸಿದ್ದು ಬಡ, ಮಧ್ಯಮವರ್ಗದ ಮೇಲೆ ಗದಾ ಪ್ರಹಾರ ಮಾಡುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಬೀದರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಕಳೆದ 12 ವರ್ಷದಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೆಟ್ಟ ವಿದೇಶಾಂಗ ನೀತಿಯ ಫಲವಾಗಿ ಇಂದು ಡಾಲರ್ ಎದುರು ರೂಪಾಯಿ ಅಪಮೌಲ್ಯ ಆಗುತ್ತಿದೆ. ಪರ್ಯಾಯ ಇಂಧನ ವ್ಯವಸ್ಥೆಯಿಲ್ಲದೆ ದೇಶದ ಅಭಿವೃದ್ಧಿಯ ಗಾಲಿಯೇ ನಿಂತು ಹೋಗುವ ಸ್ಥಿತಿ ತಲುಪುತ್ತಿದೆ. ಇದು ವಿಪರ್ಯಾಸʼ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ʼದೇಶದ ಜನರನ್ನು ಭಾವನಾತ್ಮಕವಾಗಿ ಕೆರಳಿಸುವುದರ ಹೊರತಾಗಿ ಬಿಜೆಪಿ ಏನೂ ಮಾಡುತ್ತಿಲ್ಲ. ಎನ್‌ಡಿಎ ಸರ್ಕಾರ ಬಿಜೆಪಿ ಮತ್ತು ಪ್ರಧಾನಿ ಪ್ರಚಾರಕ್ಕೆ ಎಷ್ಟು ಖರ್ಚು ಮಾಡಿದೆ ಎಂದು ಜನರಿಗೆ ಲೆಕ್ಕ ನೀಡಲಿ ಎಂದ ಅವರು, ಬರೀ ಸುಳ್ಳುಗಳನ್ನೇ ಹೇಳುತ್ತಾ ಮುಗ್ದ ಜನರನ್ನು ಪ್ರಧಾನಿ ವಂಚಿಸುತ್ತಿದ್ದಾರೆʼ ಎಂದರು.

ʼ75ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಅಂದರೆ 2022ರ ಹೊತ್ತಿಗೆ ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು, ಆದಾಯ ದುಪ್ಪಟ್ಟು ಆಗಲಿಲ್ಲ. ಪ್ರತಿ ವರ್ಷ ಯುವಜನರಿಗೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದರು, ನಿರುದ್ಯೋಗ ದರ ಹಿಂದೆಂದಿಗಿಂತ ಅಧಿಕವಾಗಿದೆ. ವಿದೇಶದಲ್ಲಿರುವ ಕಪ್ಪು ಹಣವೂ ಬರಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಇಳಿಸುವುದಾಗಿ ಹೇಳಿದ್ದರು, ಇಳಿಯುವ ಬದಲು ವಿಪರೀತ ಏರಿಕೆ ಆಗುತ್ತಿದೆ. ಒಟ್ಟಾರೆ ಬಡ ಮತ್ತು ಮಧ್ಯಮ ವರ್ಗದ ಜನರು ಕಣ್ಣೀರು ಹಾಕುವ ಸ್ಥಿತಿ ನಿರ್ಮಾಣವಾಗಿದೆʼ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಅದಾನಿ ಆದಾಯ ಹೆಚ್ಚಿದ್ದು ಹೇಗೆ ಖಂಡ್ರೆ ಪ್ರಶ್ನೆ:

ಹತ್ತು ವರ್ಷಗಳ ಹಿಂದೆ ಅದಾನಿ ಆದಾಯ ಏನಿತ್ತು. ಇಂದು ಎಷ್ಟಾಗಿದೆ. ಅದಾನಿಯನ್ನು ಏಕಾ ಏಕಿ ಇಷ್ಟೊಂದು ಶ್ರೀಮಂತ ನನ್ನಾಗಿ ಮಾಡಲು, ದೇಶವನ್ನೇ ಮಾರಾಟ ಮಾಡುತ್ತಿದ್ದಾರೆ. ಕರ್ನಾಟಕದ ಬಗ್ಗೆ ಮಾತನಾಡುವ ಬಿಜೆಪಿಗರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

ʼಮೋತಿಲಾಲ್ ನೆಹರೂ, ಜವಾಹರಲಾಲ್ ನೆಹರೂ, ಇಂದಿರಾಗಾಂಧೀ, ರಾಜೀವ್ ಗಾಂಧೀ ಮತ್ತು ಅವರ ಇಡೀ ಕುಟುಂಬ ಈ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ. ಆದರೆ ಬಿಜೆಪಿಗಳು ಸುಖಾಸುಮ್ಮಲೆ ಅಪಪ್ರಚಾರ ಮಾಡುತ್ತಾ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆʼ ಎಂದರು.

ಉಚಿತ ಸಲಹೆಗಷ್ಟೇ ಸೀಮಿತ ಪ್ರಧಾನಿ:

ʼಬೆಲೆ ಏರಿಕೆ ತಡೆಯಲು, ರೂಪಾಯಿ ಅಪಮೌಲ್ಯ ಆಗದಂತೆ ಮಾಡಲು ಅಶಕ್ತವಾದ ಪ್ರಧಾನಿ ನರೇಂದ್ರ ಮೋದಿ ಈಗ ಉಚಿತ ಸಲಹೆ ನೀಡಲು ಸೀಮಿತರಾಗಿದ್ದಾರೆ. ಪೆಟ್ರೋಲ್ ಡೀಸೆಲ್ ಕಡಿಮೆ ಬಳಸಿ, ಖಾದ್ಯ ತೈಲ ಬಳಕೆ ತಗ್ಗಿಸಿ, ಸಮೂಹ ಸಾರಿಗೆ ಬಳಸಿ, ಚಿನ್ನ ಖರೀದಿಸಬೇಡಿ ಎಂದು ಹೇಳುತ್ತಿದ್ದಾರೆ. ಬಡವರಿಗೆ ನೀಡುತ್ತಿದ್ದ ಅಡುಗೆ ಅನಿಲ ಸಬ್ಸಿಡಿಯನ್ನು ನಿಲ್ಲಿಸಿದರು. ಇದು ಜನರಿಗೆ ಮಾಡಿದ ದ್ರೋಹವಲ್ಲವೆʼ ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಬೀದರ್‌ ನಗರದಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ʼಪ್ರಧಾನಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಅಜಿತ್ ಪವಾರ್ 75 ಕೋಟಿ ರೂ. ಲೂಟಿ ಹೊಡೆದಿದ್ದಾರೆ ಎಂದು ಅವರೇ ಆರೋಪಿಸಿದ್ದರು. ನಂತರ ಅವರನ್ನೇ ಉಪ ಮುಖ್ಯಮಂತ್ರಿ ಮಾಡಿದರು. ಸುವೇಂದು ಅಧಿಕಾರಿ ಲಂಚ ಪಡೆದು ಜೋಬಿಗೆ ಇಟ್ಟುಕೊಳ್ಳುತ್ತಾರೆ ಎಂದು ಆರೋಪಿಸಿದ್ದರು. ಈಗ ಅವರನ್ನೇ ಮುಖ್ಯಮಂತ್ರಿ ಮಾಡಿದ್ದಾರೆ. ಬಿಸ್ವಾಸ್ ಶರ್ಮಾ ಅತಿ ಭ್ರಷ್ಟ ಎಂದು ಆರೋಪಿಸಿದರು. ಈಗ ಅವರನ್ನೂ 2 ಬಾರಿ ಅಸ್ಸಾಂ ಮುಖ್ಯಮಂತ್ರಿ ಮಾಡಿದ್ದಾರೆ. ಪ್ರತಿಪಕ್ಷದಲ್ಲಿದ್ದರೆ ಅವರು ಭ್ರಷ್ಟರಾಗಿರುತ್ತಾರೆ. ಬಿಜೆಪಿ ಬಂದ ಕೂಡಲೇ ಪರಿಶುದ್ಧರಾಗುತ್ತಾರಾʼ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಗೇಂದ್ರ ಮಸೂತಿಗೆ ಅಧಿಕೃತ ಆಹ್ವಾನ

ಕಲಬುರಗಿ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಅ.28 ಮತ್ತು 29ರಂದು ನಡೆಯಲಿರುವ ಕಲಬುರಗಿ...

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...