ಬೀದರ್ ವಿಶ್ವವಿದ್ಯಾಲಯಕ್ಕೆ ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಿ

Date:

ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ (ಕೆ) ಸಮೀಪದಲ್ಲಿರುವ ಬೀದರ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಲಾಗಿದೆ.

- Advertisement -

ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದ ಪ್ರಮುಖರು ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಂದ್ರ ಜಾಧವ ಅವರಿಗೆ‌ ಶುಕ್ರವಾರ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಕಲಬುರಗಿ-ಬೀದರ ಮುಖ್ಯರಸ್ತೆಯಲ್ಲಿ ಸಂಚರಿಸುವ ಹಲವು ಸರ್ಕಾರಿ ಬಸ್ಸುಗಳು ಬೀದರ್ ವಿಶ್ವವಿದ್ಯಾಲಯದ ಬಳಿ ನಿಲ್ಲದೇ
ಸಾಗುತ್ತಿರುವುದರಿಂದ ವಿದ್ಯಾರ್ಥಿಗಳು ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಸ್ಸಿಗಾಗಿ ದೀರ್ಘ ಸಮಯ ಕಾಯಬೇಕಾಗುತ್ತಿರುವುದರ ಜೊತೆಗೆ ಗ್ರಾಮೀಣ ಭಾಗಗಳಿಂದ ಆಗಮಿಸುವ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಾಲೇಜು ತಲುಪಲು ಹಾಗೂ ಮರಳಿ ಮನೆಗೆ ತೆರಳಲು ಸಂಕಷ್ಟ ಎದುರಿಸುತ್ತಿದ್ದಾರೆʼ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ʼವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಲಬುರಗಿ ಬೀದರ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಸರಕಾರಿ ಬಸ್ಸುಗಳಿಗೆ ಬೀದರ ವಿಶ್ವವಿದ್ಯಾಲಯ ಬಳಿ ಕಡ್ಡಾಯ ನಿಲುಗಡೆ ಹಾಗೂ ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಪೆಟ್ರೋಲ್, ಡೀಸೆಲ್ ದರ ಏರಿಕೆ | ಬಡವರ ಮೇಲೆ ಗದಾಪ್ರಹಾರ : ಸಚಿವ ಈಶ್ವರ ಖಂಡ್ರೆ

ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದ ಗೌರವಾಧ್ಯಕ್ಷ ವಿಜಯಕುಮಾರ್ ಸೋನಾರೆ, ಜಿಲ್ಲಾಧ್ಯಕ್ಷ ಸುನೀಲ ಭಾವಿಕಟ್ಟಿ, ಪ್ರಮುಖರಾದ ಎಂ.ಪಿ. ಮುದಾಳೆ, ಚಂದ್ರಕಾಂತ ಹಳ್ಳಿಖೇಡಕರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...