ಆಮ್ ಆದ್ಮಿ ಪಕ್ಷದ ಬೀದರ ನಗರ ಘಟಕದ ಅಧ್ಯಕ್ಷರಾಗಿ ರಾಜಶೇಖರ ಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಬೀದರ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ, ಉಪಾಧ್ಯಕ್ಷ ರಾಜಕುಮಾರ ಎನ್. ಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಡಿ. ಜಾವೀದ್ ಅವರ ನೇತೃತ್ವದಲ್ಲಿ ನಡೆದ ಪಕ್ಷದ ಸಭೆಯಲ್ಲಿ ರಾಜಶೇಖರ ಜಿ ಅವರನ್ನು ನಗರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ನಿರ್ಣಯ ಕೈಗೊಳ್ಳಲಾಯಿತು.
ಪಕ್ಷದ ತತ್ವ, ಸಿದ್ಧಾಂತ ಹಾಗೂ ನಿಯಮಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ಮೂಲಕ ಬೀದರ ನಗರದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ನೂತನ ಅಧ್ಯಕ್ಷರಿಗೆ ಪಕ್ಷದ ಮುಖಂಡರು ಸೂಚಿಸಿದರು. ಪಕ್ಷದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ವಿಸ್ತರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ನಿಟ್ಟಿನಲ್ಲಿ ತಕ್ಷಣವೇ ಜವಾಬ್ದಾರಿ ವಹಿಸಿಕೊಂಡು ಕಾರ್ಯಪ್ರವೃತ್ತರಾಗುವಂತೆ ತಿಳಿಸಲಾಗಿದೆ.
ಇದನ್ನೂ ಓದಿ : ಬೀದರ್ | ಜಮೀನಿನಲ್ಲಿ ₹30.21 ಲಕ್ಷ ಮೌಲ್ಯದ ಅಕ್ರಮ ಗಾಂಜಾ ಬೆಳೆ : ಆರೋಪಿ ಬಂಧನ
ರಾಜಶೇಖರ ಜಿ ಅವರ ನೇಮಕಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿ, ಅವರ ನೇತೃತ್ವದಲ್ಲಿ ಬೀದರ ನಗರದಲ್ಲಿ ಆಮ್ ಆದ್ಮಿ ಪಕ್ಷವು ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




