ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಬೀದರ್‌ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

Date:

ವಿದ್ಯಾರ್ಥಿ-ಯುವ ಜನರ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಹಿನ್ನೆಲೆ ಶನಿವಾರ ಬೀದರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಜಾತ್ಯತೀತ ಪಕ್ಷಗಳ ಪ್ರಮುಖರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

- Advertisement -

ಹಿರಿಯ ಮುಖಂಡ ವಿಠಲದಾಸ್ ಪ್ಯಾಗೆ ಮಾತನಾಡಿ, “ಸ”ಮಾನತೆ, ಬಂಧುತ್ವ ಹಾಗೂ ಭಾವೈಕ್ಯತೆ ಹಾಳು ಮಾಡುವ ಪ್ರಯತ್ನಗಳು ನಡೆದಿದ್ದರೂ, ವಿದ್ಯಾರ್ಥಿಗಳ ಸಂವಿಧಾನಬದ್ಧ ಹೋರಾಟದ ಪರಿಣಾಮವಾಗಿ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಿರುವುದು ಇತಿಹಾಸದಲ್ಲಿ ದಾಖಲಾಗುವ ಬೆಳವಣಿಗೆಯಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಮಾತನಾಡಿ, “ಇಂದು ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ವಿದ್ಯಾರ್ಥಿ-ಯುವ ಸಮುದಾಯದ ಹೋರಾಟಕ್ಕೆ ದೊರೆತ ಜಯವಾಗಿದೆ. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದಲ್ಲಿ ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ತಪ್ಪು ಮಾಡಿದರೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂಬುದಕ್ಕೆ ಈ ಹೋರಾಟವೇ ಸಾಕ್ಷಿಯಾಗಿದೆ. ಶಾಂತಿಯುತ ಹೋರಾಟದ ಮೂಲಕ ಸ್ವಾತಂತ್ರ್ಯ ಚಳವಳಿಯನ್ನು ಯಶಸ್ವಿಗೊಳಿಸಿದ ನಮ್ಮ ಪೂರ್ವಜರ ಆದರ್ಶ ಇಂದಿಗೂ ಪ್ರಸ್ತುತವಾಗಿದೆ. ಜನವಿರೋಧಿ ಹಾಗೂ ಸಂವಿಧಾನ ವಿರೋಧಿ ಧೋರಣೆಗಳ ವಿರುದ್ಧ ಜನರು ನಿರಂತರವಾಗಿ ಹೋರಾಡುತ್ತಾರೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅರುಣ ಪಟೇಲ್ ಮಾತನಾಡಿ, “ಈ ದೇಶವು ಬುದ್ಧ, ಬಸವಣ್ಣ, ಶಾಹು ಮಹಾರಾಜ, ಮಹಾತ್ಮ ಫುಲೆ, ಅಂಬೇಡ್ಕರ್, ಭಗತ್ ಸಿಂಗ್, ಸುಖದೇವ್, ರಾಜಗುರು ಹಾಗೂ ಸ್ವಾಮಿ ವಿವೇಕಾನಂದ ಸೇರಿದಂತೆ ಅನೇಕ ಮಹಾತ್ಮರ ಆದರ್ಶಗಳ ಮೇಲೆ ನಿಂತಿದೆ. ಯಾವುದೇ ಶಕ್ತಿ ಸಂವಿಧಾನಕ್ಕಿಂತ ದೊಡ್ಡದಲ್ಲ. ಅಂತಿಮವಾಗಿ ಎಲ್ಲರೂ ಸಂವಿಧಾನಕ್ಕೆ ತಲೆಬಾಗಲೇಬೇಕು” ಎಂದು ಹೇಳಿದರು.

WhatsApp Image 2026 07 25 at 8.16.12 PM

ಲಿಂಗಾಯತ ಸಮಾಜ ಯುವ ಮುಖಂಡ ಸಿದ್ರಾಮ ಶೆಟಕಾರ ಮಾತನಾಡಿ, “ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವಾಗಿದೆ. ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ‌ ಇಂತಹ ಹೋರಾಟಗಳು ನಿರಂತರವಾಗಿ ನಡೆಯುವುದು ಅಗತ್ಯವಾಗಿದೆ. ದೆಹಲಿಯಲ್ಲಿ ಸಿಜೆಪಿ ನೇತ್ರತ್ವದಲ್ಲಿ ನಡೆದ ಯುವಜನರು, ವಿದ್ಯಾರ್ಥಿಗಳು ನಡೆಸಿದ ಹೋರಾಟ ಯುವಜನರಲ್ಲಿ ಹೊಸ ಉತ್ಸಾಹ ತುಂಬಿದೆ” ಎಂದರು.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿಗಳು ಸಂಸ್ಕಾರ ಶಿಕ್ಷಣ ನೀಡುವ ಕಾಲೇಜಿನಲ್ಲಿ ಪ್ರವೇಶ ಪಡೆಯಿರಿ : ಎಚ್.ಪ್ರಸನ್ನಕುಮಾರ್

ಕಾರ್ಯಕ್ರಮದಲ್ಲಿ ಸಿಪಿಐ ಮುಖಂಡ ಬಾಬುರಾವ ಹೊನ್ನಾ, ಸಾಮಾಜಿಕ ಚಿಂತಕರಾದ ಜಗದೀಶ್ವರ ಬಿರಾದರ, ಮೊಹಮ್ಮದ್ ಶಫಿ, ಶ್ರೀಧರ್ ಸೊಮನೋರ್, ರಮೇಶ್ ಮಂದಕನಳ್ಳಿ, ಕಂಟೆಪ್ಪ ಪೂಜಾರಿ, ಸಂಜು ಬ್ಯಾಗಿ, ಗೌತಮ ಮುತಂಗಿಕರ್, ಬಸವ ಅಷ್ಟೂರ, ಬಸವರಾಜ ಭಾವಿದೊಡ್ಡಿ, ದೀಪಕ್ ಮಾಳಗೆ, ತುಕಾರಾಮ ಯರನಳ್ಳಿ, ಅರ್ಜುನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ ಶಿಕ್ಷಕ!

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನದ ಅನುಭವವನ್ನು ಬಹುಮಾನವಾಗಿ...

ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು...

ಅ.12ರ ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಗೆ ತಳ್ಳಾಟ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನೋಟಿಸ್

ಅಕ್ಟೋಬರ್ 12ರಂದು ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ನಡೆಸಿದ್ದ ಪ್ರತಿಭಟನಾ ಮೆರವಣಿಗೆಯ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...