ಬೀದರ್ ಜಿಲ್ಲೆಯಲ್ಲಿ ಸಗಟು ತರಕಾರಿ ಮಾರುಕಟ್ಟೆ ಮತ್ತು ಖಸಾಯಿ ಖಾನೆ ನಿರ್ಮಾಣಕ್ಕೆ ಜಾಗ ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿಂದು ಬೀದರ್ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿದ ಅವರು, ಪೌರಾಡಳಿತ ಇಲಾಖೆಯಿಂದ ₹500 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ತ್ಯಾಜ್ಯ ಜಲ ಸಂಸ್ಕರಣೆ ಮಾಡಿ ಕಟ್ಟಡ ನಿರ್ಮಾಣ ಇತ್ಯಾದಿಗೆ ಪುನರ್ ಬಳಕೆ ಮಾಡುವ ನಿಟ್ಟಿನಲ್ಲಿಯೂ ಕ್ರಮ ವಹಿಸುವಂತೆ ತಿಳಿಸಿದ ಅವರು, ಅಮೃತ್ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಿದ್ಧಪಡಿಸುವಂತೆ ನಿರ್ದೇಶನ ನೀಡಿದರು.
ಇದನ್ನೂ ಓದಿ : ಬೀದರ್ | ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
This video cannot be played in your browser. Open the video directly
ಅರ್ಬನ್ ಚಾಲೆಂಜ್ ಯೋಜನೆ ಅಡಿಯಲ್ಲಿ 1 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಬಹುದಾದ ಯೋಜನೆಗಳ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ವಾರದೊಳಗೆ ₹500 ಕೋಟಿ ಸಮಗ್ರ ವರದಿ ಸಿದ್ಧಪಡಿಸಿ, ಗಡುವಿನೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆಯೂ ತಿಳಿಸಿದರು





