ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

Date:

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ ಸೆ.17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಬಸಪ್ಪ ಅಪ್ಪ ಸಭಾಂಗಣದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ ಆಯೋಜಿಸಲಾಗಿದೆ.

- Advertisement -

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯಾವ ಉದ್ದೇಶಕ್ಕಾಗಿ ಸ್ಥಾಪನೆಯಾಗಿತ್ತೋ ಆ ಉದ್ದೇಶ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಸಮಾವೇಶ ಆಯೋಜಿಸಲಾಗಿದ್ದು, ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶ ಯಶಸ್ವಿಗೊಳಿಸಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ಪಂಡಿತರಾವ ಚಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ವಿವಿಧ ವಿಷಯಗಳ ಕುರಿತು ಸಮಾವೇಶದಲ್ಲಿ ಸಮಗ್ರವಾಗಿ ಚರ್ಚಿಸಲಾಗುವುದು. ನಾಡಿನ ಇತರೆ ಪ್ರದೇಶಗಳಂತೆ ಕಲ್ಯಾಣ ಕರ್ನಾಟಕವೂ ಸಮಗ್ರವಾಗಿ ಅಭಿವೃದ್ಧಿ ಹೊಂದಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರದ ಮುಂದೆ ಹಲವು ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ವಿದ್ಯಾರ್ಥಿಗಳು, ಯುವಜನರು, ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರು ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಸಮಾವೇಶದಲ್ಲಿ ಭಾಗವಹಿಸಬೇಕು ಎಂದು ಚಿದ್ರಿ ಮನವಿ ಮಾಡಿದರು.

ಹಕ್ಕೊತ್ತಾಯಗಳು :

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಇತರೆ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳಿಗೂ ನೇಮಕಾತಿ ಕೈಗೊಳ್ಳಬೇಕು. 371(ಜೆ) ಕಲಂ ಸಮರ್ಪಕ ಜಾರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು. ಕೆಕೆಆರ್‌ಡಿಬಿ ಅನುದಾನ ಬಳಕೆಯಲ್ಲಿರುವ ಕಠಿಣ ಅನುಷ್ಠಾನ ನಿಯಮಗಳನ್ನು ಸರಳೀಕರಿಸಿ, ಮಂಡಳಿಯನ್ನು ಜನರಿಗೆ ಜವಾಬ್ದಾರಿಯುತ ಹಾಗೂ ಉತ್ತರದಾಯಕವಾಗಿಸಬೇಕು.

ಇದನ್ನೂ ಓದಿ : ಬೀದರ್‌ | ಬಾರದ ಮಳೆ, ಒಣಗಿದ ಬೆಳೆ : ಟ್ರ್ಯಾಕ್ಟರ್‌ನಿಂದ ಸೋಯಾಬೀನ್‌ ಬೆಳೆ ನಾಶಪಡಿಸಿದ ರೈತ

ಕೃಷ್ಣಾ ನದಿಯಲ್ಲಿ ರಾಜ್ಯದ ಪಾಲಿನ 700 ಟಿಎಂಸಿ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಯೋಜನೆ ರೂಪಿಸಿ, ಕಲ್ಯಾಣ ಕರ್ನಾಟಕದ 15 ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಕಲ್ಯಾಣ ಕರ್ನಾಟಕದಲ್ಲಿ ಹೈನುಗಾರಿಕೆ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ಯೋಜನೆ ಘೋಷಿಸಬೇಕು. ಬಳ್ಳಾರಿಯ ಚೇನ್ಸ್ ಉದ್ಯಮವನ್ನು ಬಲಪಡಿಸಿ, ಇಡೀ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಸ್ತರಿಸಬೇಕು. ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ನಿರುದ್ಯೋಗಿ ಯುವಕರಿಗಾಗಿ ಅಗತ್ಯ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು ಎಂಬ ಹಕ್ಕೊತ್ತಾಯಗಳು ಸೇರಿದಂತೆ ಇನ್ನಿತರ ಬೇಡಿಕೆಗಳು ಸಮಾವೇಶದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಮೊಬೈಲ್ ಒಡೆದು ಹಾಕಿ’: ‘ಡಿಜಿಟಲ್ ಅರೆಸ್ಟ್’ ಬಲೆಗೆ ಬೀಳುತ್ತಿರುವ ಸುಶಿಕ್ಷಿತರ ಬಗ್ಗೆ ಸುಪ್ರೀಂ ಬೇಸರ

ದೇಶಾದ್ಯಂತ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳ ಕುರಿತು ತೀವ್ರ...

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...

ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ...