ಬೀದರ್‌ | ಡಿ. 24ಕ್ಕೆ ಶಾಹೀನ್ ಪ್ರತಿಭಾ ಅನ್ವೇಷಣೆ ಪರೀಕ್ಷೆ; ವಿಜೇತರಿಗೆ 1.40 ಲಕ್ಷ ರೂ. ವಿದ್ಯಾರ್ಥಿ ವೇತನ

Date:

ಬೀದರ್‌ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಡಿಸೆಂಬರ್ 24 ರಂದು ‘ಶಾಹೀನ್ ಪ್ರತಿಭಾ ಅನ್ವೇಷಣೆ ಪರೀಕ್ಷೆ’ (ಎಸ್‍ಟಿಎಸ್‍ಇ) ಹಮ್ಮಿಕೊಂಡಿದೆ.

ಸದ್ಯ 8ನೇ ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಿದೆ.
6, 7 ಮತ್ತು 8ನೇ ತರಗತಿಯ ಇಂಗ್ಲಿಷ್, ಗಣಿತ ಹಾಗೂ ವಿಜ್ಞಾನ (ಎನ್‍ಸಿಇಆರ್ ಟಿ) ವಿಷಯದ ಪುಸ್ತಕಗಳು 8ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯ ಪಠ್ಯಕ್ರಮ ಆಗಿರಲಿವೆ. 10ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಪಠ್ಯಕ್ರಮವು 8, 9 ಮತ್ತು 10ನೇ ತರಗತಿಯ ಇಂಗ್ಲಿಷ್, ಗಣಿತ ಹಾಗೂ ವಿಜ್ಞಾನ (ಎನ್‍ಸಿಇಆರ್ ಟಿ) ಪುಸ್ತಕ ಮತ್ತು ಮಾನಸಿಕ ಸಾಮರ್ಥ್ಯದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

“ಪರೀಕ್ಷೆಯಲ್ಲಿ ರ‍್ಯಾಂಕ್‌ ಗಳಿಸುವ 8ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 1.40 ಲಕ್ಷ ವಿದ್ಯಾರ್ಥಿ ವೇತನದ ರೂಪದಲ್ಲಿ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಉಚಿತ ವಸತಿ, ಊಟ ಸಹಿತ ಶಿಕ್ಷಣ, ನೀಟ್/ಜೆಇಇ ತರಬೇತಿ ಕೊಡಲಾಗುವುದು. ಟಾಪರ್ ಗಳಿಗೆ ರೂ. 70 ಸಾವಿರದ ಟ್ಯೂಷನ್ ಶುಲ್ಕ, ವಿಜೇತರಿಗೆ ರೂ. 35 ಸಾವಿರದ ಟ್ಯೂಷನ್ ಶುಲ್ಕ ಹಾಗೂ ಕನಿಷ್ಠ ಅಂಕ ಪಡೆದು ತೇರ್ಗಡೆಯಾಗುವ ಪ್ರತಿ ಸಾಧಕರಿಗೂ ರೂ. 7 ಸಾವಿರದ ಟ್ಯೂಷನ್ ಶುಲ್ಕ ಕೊಡಲಾಗುವುದು” ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆಯುವ 10ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 1.40 ಲಕ್ಷ ವಿದ್ಯಾರ್ಥಿ ವೇತನದ ರೂಪದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಉಚಿತ ವಸತಿ, ಊಟ ಸಹಿತ ಶಿಕ್ಷಣ, ನೀಟ್/ಜೆಇಇ ತರಬೇತಿ ನೀಡಲಾಗುವುದು. ಟಾಪರ್ ಗಳಿಗೆ ರೂ. 70 ಸಾವಿರದ ಟ್ಯೂಷನ್ ಶುಲ್ಕ, ವಿಜೇತರಿಗೆ ರೂ.35 ಸಾವಿರದ ಟ್ಯೂಷನ್ ಶುಲ್ಕ ಹಾಗೂ ಕನಿಷ್ಠ ಅಂಕ ಪಡೆದು ತೇರ್ಗಡೆಯಾಗುವ ಪ್ರತಿ ಸಾಧಕರಿಗೂ ರೂ. 7 ಸಾವಿರದ ಟ್ಯೂಷನ್ ಶುಲ್ಕ ಕೊಡಲಾಗುವುದು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಮಾಸ್ ನೆಪ ಮಾತ್ರವಷ್ಟೇ, ಪ್ಯಾಲೆಸ್ತೀನ್‌ ಇಲ್ಲವಾಗಿಸುವುದು ಇಸ್ರೇಲ್ ಗುರಿ: ಚಿಂತಕ ಶಿವ ಸುಂದರ್

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಪ್ರತಿ ವರ್ಷ ವಿದ್ಯಾರ್ಥಿ ವೇತನ ಕೊಡುತ್ತಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು. ವಿದ್ಯಾರ್ಥಿಗಳು ಹೆಸರು ನೋಂದಣಿಗೆ https://shaheengroup.org/stse-shaheen-talent-search-exam-2023, ಹೆಚ್ಚಿನ ಮಾಹಿತಿಗೆ ಸಮೂಹದ ವೆಬ್‍ಸೈಟ್ www.shaheengroup.org ಗೆ ಭೇಟಿ ನೀಡಬಹುದು ಅಥವಾ 18001216235 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...