SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

Date:

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅ.27ರಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೀದರ್‌ ಜಿಲ್ಲೆಯಲ್ಲಿ 2.15 ಲಕ್ಷ ಮತದಾರರನ್ನು ಅಂತಿಮ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ.

- Advertisement -

ಜಿಲ್ಲೆಯಲ್ಲಿ ಒಟ್ಟು ಆರು ವಿಧಾನಸಭಾ ಕ್ಷೇತ್ರಗಳಿದ್ದು, ಎಸ್‌ಐಆರ್ ಆರಂಭಕ್ಕೂ ಮುನ್ನ ಒಟ್ಟು 14,61,959 ಮತದಾರರಿದ್ದರು. ಎಎಸ್‌ಡಿಡಿಒ (ಗೈರು, ಶಾಶ್ವತ ಸ್ಥಳಾಂತರ, ಮೃತ, ಡುಪ್ಲಿಕೇಟ್‌ ಹಾಗೂ ಇತರೆ) ಎಂದು ವರ್ಗೀಕರಣದಿಂದ ಒಟ್ಟು 2,41,044 ಅಂದರೆ ಶೇ 16.49ರಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಹಾಕಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಬಳಿಕ ನಡೆದ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಒಟ್ಟು 12,46,746 ಮತದಾರರಿದ್ದು ಇದರಲ್ಲಿ ಪುರುಷರ ಸಂಖ್ಯೆ 6,44,394 ಹಾಗೂ ಮಹಿಳೆಯರ ಸಂಖ್ಯೆ 6,02,321 ಲಿಂಗತ್ವ ಅಲ್ಪಸಂಖ್ಯಾತರ ಸಂಖ್ಯೆ 31 ಇದೆ. ಎಸ್‌ಐಆರ್ ನಡೆಯುವ ಮುನ್ನ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,529 ಮತಗಟ್ಟೆಗಳಿದ್ದವು, ಈಗ ನಗರ-ಗ್ರಾಮೀಣ ಸೇರಿ ಒಟ್ಟು 1,579ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾಹಿತಿ ನೀಡಿದ್ದಾರೆ.

Advertisements

ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳು, ತಹಸೀಲ್ದಾರ್ ಕಚೇರಿಗಳು, ಸಹಾಯಕ ಆಯುಕ್ತರ ಕಚೇರಿಗಳು ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕಗಳಲ್ಲಿ ಈ ಪಟ್ಟಿಯನ್ನು ಅಂಟಿಸಲಾಗಿದ್ದು, ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯ ಅಧಿಕೃತ https://bidar.nic.in/ ವೆಬ್‌ಸೈಟ್‌ನಲ್ಲಿಯೂ ಪ್ರಚುರಪಡಿಸಲಾಗಿದೆ. ಇದರೊಂದಿಗೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯ ಒಂದು ಪ್ರತಿಯನ್ನು ಅನುಮೋದಿತ ರಾಜಕೀಯ ಪಕ್ಷಗಳಿಗೂ ನೀಡಲಾಗಿದೆ.

ಬೀದರ್‌ ಉತ್ತರದಲ್ಲಿ ಹೆಚ್ಚು ಡಿಲೀಟ್‌!

ಎಸ್‌ಐಆರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ ಬೀದರ್‌ ಜಿಲ್ಲೆಯಲ್ಲಿ ಒಟ್ಟು 14.61 ಲಕ್ಷ ಮತದಾರರಿದ್ದರು. ಆ.24ರಂದು ಬಿಡುಗಡೆಯಾದ ಮೊದಲ ಹಂತದಲ್ಲಿ ಕರಡು ಪಟ್ಟಿಯಲ್ಲಿ 12.20 ಲಕ್ಷ ಮತದಾರರು ಸ್ಥಾನ ಪಡೆದಿದ್ದರು. ಬಳಿಕ ನಡೆದ ಪ್ರಕ್ರಿಯೆಯಲ್ಲಿ 25, 830 ಹೊಸ ಮತದಾರರು ಸೇರ್ಪಡೆಯಾಗಿದ್ದಕ್ಕೆ ಜಿಲ್ಲೆಯ ಒಟ್ಟು ಅಧಿಕೃತ ಮತದಾರರ ಸಂಖ್ಯೆ 12.46 ಲಕ್ಷ ಆಗಿದೆ.

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬೀದರ್‌ ಉತ್ತರದಲ್ಲಿಯೇ ಹೆಚ್ಚು ಮತದಾರರು ಅನರ್ಹಗೊಂಡಿದ್ದು, ಈ ಹಿಂದೆ ಈ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 2,48,809 ಇತ್ತು, ಎಸ್‌ಐಆರ್ ಬಳಿಕ ಅಂತಿಮವಾಗಿ 18,8647 ಕ್ಕೆ ಇಳಿಕೆಯಾಗಿದ್ದು, ಈ ಕ್ಷೇತ್ರದಲ್ಲಿ ಬರೋಬ್ಬರಿ 60,162 ಮತದಾರರನ್ನು ಮತಪಟ್ಟಿಯಿಂದ ಹೊರ ಹಾಕಲಾಗಿದೆ .

WhatsApp Image 2026 10 28 at 5.51.17 AM
ಬೀದರ್‌ ಜಿಲ್ಲೆಯ ಒಟ್ಟು ಮತದಾರರು

ಬೀದರ್‌ ದಕ್ಷಿಣ ಕ್ಷೇತ್ರದಲ್ಲಿ 33,366 ಮತದಾರರು ಅನರ್ಹಗೊಂಡಿದ್ದಾರೆ. ಈಗ 18,6514 ಮತದಾರರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಕಡಿಮೆ ಮತದಾರರು ಎಂಬಂತಾಗಿದೆ. ಇನ್ನು ಬಸವಕಲ್ಯಾಣದಲ್ಲಿ 28,239, ಹುಮನಾಬಾದ್‌ನಲ್ಲಿ 36,771, ಭಾಲ್ಕಿಯಲ್ಲಿ 28,389, ಔರಾದ್‌ ಕ್ಷೇತ್ರದಲ್ಲಿ 28,286 ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ.

ಇದನ್ನೂ ಓದಿ : ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

WhatsApp Image 2026 10 10 at 7.46.08 PM 26
ಜಾಹೀರಾತು
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 18,94,144 ಮತದಾರರು:

ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಚುನಾವಣಾ ಆಯೋಗದ...

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...

ಪ್ರಶಾಂತ್ ಕಿಶೋರ್ ಆಪ್ತ, ‘ಜನ್ ಸುರಾಜ್’ ಡಿಜಿಟಲ್ ಮ್ಯಾನೇಜರ್ ರೈಲಿನಿಂದ ನಾಪತ್ತೆ, ನಿಗೂಢ ಸಾವು

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ್ ಸುರಾಜ್ ಪಾರ್ಟಿ'ಯ (ಜೆಎಸ್‌ಪಿ)...

ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ...