SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

Date:

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು, ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಸಂಬಂಧಿಸಿದಂತೆ ಅ.8ರವರೆಗೆ ಬೀದರ್‌ ಜಿಲ್ಲೆಯಲ್ಲಿ ಒಟ್ಟು 6,101 ಫಾರಂ-7 ಅರ್ಜಿಗಳು ಸಲ್ಲಿಕೆಯಾಗಿವೆ.

- Advertisement -

ರಾಜ್ಯದಲ್ಲಿ ಒಟ್ಟು 1,10,654 ಫಾರ್ಮ್‌ -7 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು (6,787) ಅರ್ಜಿ ಸಲ್ಲಿಕೆಯಾಗಿದ್ದು ಮೊದಲ ಸ್ಥಾನದಲ್ಲಿದೆ, ನಂತರದಲ್ಲಿ (6,762) ದಕ್ಷಿಣ ಕನ್ನಡ ಜಿಲ್ಲೆಯಿದ್ದರೆ, ಮೂರನೇ ಸ್ಥಾನದಲ್ಲಿ ಬೀದರ್‌ ಇದೆ. ಇನ್ನು ಯಾದಗಿರಿ ಜಿಲ್ಲೆಯಲ್ಲಿ ಅತಿ ಕಡಿಮೆ (795) ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಫಾರ್ಮ್-6, ಫಾರ್ಮ್-6ಎ, ಮತದಾರರ ಹೆಸರು ಕೈಬಿಡಲು ಅಥವಾ ಅದಕ್ಕೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸಲು ಬಳಸುವ ಫಾರ್ಮ್-7 ಹಾಗೂ ತಿದ್ದುಪಡಿಗಾಗಿ ಫಾರ್ಮ್-8ರ ಮೂಲಕ ಒಟ್ಟು ಬೀದರ್‌ ಜಿಲ್ಲೆಯಲ್ಲಿ ಒಟ್ಟು 67,415 ಅರ್ಜಿಗಳು ಸಲ್ಲಿಕೆಯಾಗಿವೆ.

WhatsApp Image 2026 10 10 at 7.46.08 PM 1
advertisement

ಬೀದರ್‌ ಜಿಲ್ಲೆಯಲ್ಲಿ ಒಟ್ಟು 12,35,035 ಮತದಾರರಿದ್ದಾರೆ. ಇವರಲ್ಲಿ 6,39,004 ಪುರುಷರು, 5,96,001 ಮಹಿಳೆಯರು ಹಾಗೂ 30 ತೃತೀಯ ಲಿಂಗದ ಮತದಾರರಿದ್ದಾರೆ. ಒಟ್ಟು 1,579 ಬೂತ್‌ಗಳಿವೆ. ಮ್ಯಾಪಿಂಗ್‌ ವಿವರ ವ್ಯತ್ಯಾಸ ಎಂದು ಮತದಾರರಿಗೆ ಎಸ್‌ಐಆರ್ ಪ್ರಕ್ರಿಯೆಯಡಿ ಜಿಲ್ಲೆಯಲ್ಲಿ ಸೃಜಿಸಲಾದ 32,673 ನೋಟಿಸ್‌ಗಳ ಪೈಕಿ ಶೇ 100 ರಷ್ಟು ನೋಟಿಸ್‌ಗಳನ್ನು ವಿತರಿಸಲಾಗಿದೆ. ಅ.9ರವರೆಗೆ ಒಟ್ಟು 27,811 ಮತದಾರರ ವಿಚಾರಣೆ ಪೂರ್ಣಗೊಂಡಿದೆ. ಅಂದ್ರೆ ಶೇ 85.12ರಷ್ಟು ಪೂರ್ಣಗೊಂಡಿದ್ದು, ಇನ್ನೂ 4,862 ವಿಚಾರಣೆ ಬಾಕಿ ಇದೆ.

ಆಕ್ಷೇಪಣೆ ಹಾಗೂ ನೋಟಿಸ್‌ಗಳ ವಿಲೇವಾರಿಗೆ ಅಕ್ಟೋಬರ್ 22 ಕೊನೆಯ ದಿನವಾಗಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿಗದಿಪಡಿಸಲಾಗಿದೆ. ಹೀಗಾಗಿ, ಬಾಕಿ ಉಳಿದಿರುವ ವಿಚಾರಣೆಗಳನ್ನು ಪೂರ್ಣಗೊಳಿಸಿ ನಿಗದಿತ ಗಡುವಿನೊಳಗೆ ಪರಿಷ್ಕರಣೆ ಪ್ರಕ್ರಿಯೆ ಮುಗಿಸುವುದು ಚುನಾವಣಾ ಅಧಿಕಾರಿಗಳಿಗೆ ಪ್ರಮುಖ ಕಾರ್ಯವಾಗಿದೆ.

ಫಾರಂ-7 ಸಲ್ಲಿಕೆಗೆ ಮಿತಿ

ವೈಯಕ್ತಿಕ ಮತದಾರರು ಸಲ್ಲಿಸುವ ನಮೂನೆ-7 ಅರ್ಜಿಗಳಿಗೆ ಭಾರತದ ಚುನಾವಣಾ ಆಯೋಗ ಮಿತಿ ನಿಗದಿಪಡಿಸಿದೆ. ಹಕ್ಕು ಕೋರಿಕೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಸಂಪೂರ್ಣ ಅವಧಿಯಲ್ಲಿ ಒಬ್ಬ ಮತದಾರ ಗರಿಷ್ಠ 10 ಅರ್ಜಿಗಳನ್ನು ನೀಡಬಹುದು. ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯ ಸಂದರ್ಭದಲ್ಲಿ ಪ್ರತಿ ತಿಂಗಳು ಗರಿಷ್ಠ 5 ಅರ್ಜಿಗಳಿಗೆ ಮಾತ್ರ ಅವಕಾಶವಿದೆ. ಈ ಮಿತಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವಿಧಾನಗಳಿಗೆ ಅನ್ವಯಿಸುತ್ತವೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

WhatsApp Image 2026 10 10 at 6.59.09 PM 1
advertisement

ಅ.22ರವರೆಗೆ ಇನ್ನಷ್ಟು ನಮೂನೆ-7 ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಅಗತ್ಯ ದಾಖಲೆ ಸಲ್ಲಿಸಿದರಷ್ಟೇ, ಸಂಬಂಧಿತರಿಗೆ ನೋಟಿಸ್‌ ನೀಡಿ, ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಮತಪಟ್ಟಿಯಿಂದ ಹೆಸರು ತೆಗೆಯಬಹುದು, ಇಲ್ಲದಿದ್ದರೆ ಫಾರ್ಮ್‌ -7 ಅರ್ಜಿಗಳನ್ನು ತಿರಸ್ಕೃತವಾಗುತ್ತವೆ. ಹೆಸರುಗಳನ್ನು ಕೈಬಿಡುವ ಉದ್ದೇಶದಿಂದ ಕೆಲವು ಕಡೆ ದುರುದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯೊಂದಿಗೆ ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ...

ಗ್ಯಾನು ರಾಜೀನಾಮೆ ಕೊಡುವವರೆಗೂ ಕದಲುವುದಿಲ್ಲ; ಭಾನುವಾರವೂ ಮುಂದುವರೆದ ಸಿಜೆಪಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್‌ಐಆರ್...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...