ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಪ್ರಾರಂಭಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೀದರ್ ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜುಲೈ 14 ರಂದು ಬೆಳಿಗ್ಗೆ 6:30 ಗಂಟೆಗೆ ಈ ಜಾಥಾವು ನಗರದ ಬರೀದ್ ಶಾಹಿ ಉದ್ಯಾನವನದಿಂದ ಚಾಲನೆ ದೊರೆಯಲಿದೆ. ಜಾಥಾದಲ್ಲಿ ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಬಳಿಕ ನಗರದ ಪ್ರಮುಖ ವೃತ್ತಗಳಾದ ಮಡಿವಾಳ ಮಾಚಿದೇವರು ವೃತ್ತ ರೋಟರಿ ಕನ್ನಡಾಂಬೆ ವೃತ್ತ, ಹಳೆ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಮಹಮೂದ್ ಗವಾನ್ ಚೌಕ್ ಮಾರ್ಗವಾಗಿ ಬೀದರ್ ಕೋಟೆವರೆಗೆ ನಡೆಯಲಿದೆ ಎಂದು ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಔರಾದ್ | ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ




