ಎಸ್‌ಐಆರ್ | ಬೀದರ್ ಜಿಲ್ಲೆಯಲ್ಲಿ 2.45 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಬೀಳುವ ಭೀತಿ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಲಕ್ಷಾಂತರ ಬಡವರು, ವಲಸೆ ಕಾರ್ಮಿಕರು, ಅಲೆಮಾರಿ ಸಮುದಾಯದವರು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವವರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಹುನ್ನಾರ ನಡೆಯುತ್ತಿದೆ ಎಂದು ಎಸ್‌ಐಆರ್ ಜನ ವಿರೋಧಿ ಸಮಿತಿ ಹಾಗೂ ನಾಗರಿಕ‌ ಮತಕಾವಲು ಸಮಿತಿ  ಸಂಚಾಲಕ ಓಂಪ್ರಕಾಶ ರೊಟ್ಟೆ ಆರೋಪಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಚುನಾವಣಾ ಆಯೋಗದ ASDDO ವರ್ಗೀಕರಣವು ಅವೈಜ್ಞಾನಿಕವಾಗಿದೆ. ಬಿಎಲ್‌ಒ ಭೇಟಿ ನೀಡಿದ ವೇಳೆ ಮನೆಯಲ್ಲಿ ಸಿಗದವರು ಹಾಗೂ ಬೇರೆಡೆ ಸ್ಥಳಾಂತರಗೊಂಡವರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಆತಂಕ ಎದುರಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಆಗಸ್ಟ್ 4,ರವರೆಗಿನ ಮಾಹಿತಿಯ ಪ್ರಕಾರ ಬೀದರ್ ಜಿಲ್ಲೆಯಲ್ಲಿ ಒಟ್ಟು 14.16 ಲಕ್ಷ ಮತದಾರರಿದ್ದು, 12.14 ಲಕ್ಷ ಮತದಾರರ ಮಾಹಿತಿ ಡಿಜಿಟಲೀಕರಣಗೊಂಡಿದೆ. ಪ್ರಸ್ತುತ ಪ್ರಕ್ರಿಯೆಯಿಂದ ಜಿಲ್ಲೆಯ ಶೇ.16.88ರಷ್ಟು, ಅಂದರೆ ಸುಮಾರು 2.45 ಲಕ್ಷ ಮತದಾರರು ಪಟ್ಟಿಯಿಂದ ಹೊರಬೀಳುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಬಿಎಲ್‌ಒಗಳಿಗೆ ಸರಿಯಾಗಿ ತರಬೇತಿ ನೀಡಿಲ್ಲ. ಅಲೆಮಾರಿ ಸಮುದಾಯದವರು, ಕೊಳಗೇರಿ ನಿವಾಸಿಗಳು ಹಾಗೂ ವಲಸೆ ಕಾರ್ಮಿಕರಿಗೆ ಅಗತ್ಯ ಮಾಹಿತಿ ತಲುಪಿಸಿಲ್ಲ. ಉದ್ಯೋಗಕ್ಕಾಗಿ ವಲಸೆ ಹೋಗುವುದು ಅಥವಾ ಬಾಡಿಗೆ ಮನೆ ಬದಲಾಯಿಸುವುದು ಅಪರಾಧವಲ್ಲ. ಕೇವಲ ಬಿಎಲ್‌ಒ ಭೇಟಿ ವೇಳೆ ಮನೆಯಲ್ಲಿ ಸಿಗಲಿಲ್ಲ ಎಂಬ ಕಾರಣಕ್ಕೆ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವುದು ಸರಿಯಲ್ಲ” ಎಂದು ಹೇಳಿದರು.

ಹಲವು ಜಿಲ್ಲೆಗಳಲ್ಲಿ ಶೇ.100ರಷ್ಟು ಡಿಜಿಟಲೀಕರಣ ಪರ‍್ಣಗೊಂಡಿದೆ ಎಂದು ಹೇಳಲಾಗುತ್ತಿದ್ದರೂ, ಇನ್ನೂ ಅನೇಕ ಮತದಾರರಿಗೆ ಎನ್ಯುಮರೇಷನ್ ಫಾರಂ ದೊರೆತಿಲ್ಲ ಎಂದು ದೂರಲಾಗುತ್ತಿದೆ. ಹೀಗಿರುವಾಗ ಶೇ 100ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿದೆ ಎನ್ನುವ ಘೋಷಣೆಯ ವಾಸ್ತವಾಂಶವನ್ನು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು. ಬಿಎಲ್‌ಒ ಆ್ಯಪ್‌ನಲ್ಲಿರುವ ‘ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್‌ವೇರ್’ ಕುರಿತು ಬಿಎಲ್‌ಎಗಳಿಗೆ ಏಕೆ ತರಬೇತಿ ನೀಡಿಲ್ಲ ಎಂಬುದಕ್ಕೂ ಉತ್ತರಿಸಬೇಕು” ಎಂದು ಒತ್ತಾಯಿಸಿದರು.

ಸಮಿತಿಯ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಮಾತನಾಡಿ, “ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎಷ್ಟು ಅಕ್ರಮ ವಲಸಿಗರನ್ನು ಗುರುತಿಸಲಾಗಿದೆ ಎಂಬ ಅಂಕಿ-ಅಂಶವನ್ನು ಚುನಾವಣಾ ಆಯೋಗ ಸರ‍್ವಜನಿಕವಾಗಿ ಬಹಿರಂಗಪಡಿಸಬೇಕು, ಮತದಾರರನ್ನು ಪಟ್ಟಿಯಿಂದ ಕೈಬಿಡುವ ಮುನ್ನ ಸಮಗ್ರ ಪರಿಶೀಲನೆ ನಡೆಸಬೇಕು, ಸಾಮಾಜಿಕ ಸಂಘಟನೆಗಳಿಗೆ ಆಕ್ಷೇಪಣೆ ಮತ್ತು ಅಭಿಪ್ರಾಯ ಮಂಡಿಸಲು ಅವಕಾಶ ಕಲ್ಪಿಸಬೇಕು, ಸ್ಥಳಾಂತರಗೊಂಡ ಮತದಾರರನ್ನು ನೇರವಾಗಿ ಪಟ್ಟಿಯಿಂದ ಕೈಬಿಡದೆ, ಅವರಿಗೆ ಫಾರಂ ನಂ.8 ಅನ್ನು ನೀಡಿ ಹೊಸ ವಿಳಾಸಕ್ಕೆ ಮತದಾರರ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಎನ್ಯುಮರೇಷನ್ ಪ್ರಕ್ರಿಯೆಯ ಅವಧಿಯನ್ನು ಕನಿಷ್ಠ ಒಂದು ತಿಂಗಳು ವಿಸ್ತರಿಸಬೇಕು. ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಪ್ರತಿಯೊಂದು ಮತಗಟ್ಟೆ ವ್ಯಾಪ್ತಿ, ಗ್ರಾಮ ಹಾಗೂ ವಾರ್ಡ್‌ನಲ್ಲಿ ಸಾರ್ವಜನಿಕ ಪರಿಶೀಲನೆ ನಡೆಸಬೇಕು. ಗ್ರಾಮ ಸಭೆಗಳಲ್ಲಿ ಹಾಗೂ ಮೊಹಲ್ಲಾಗಳಲ್ಲಿ ಪರಿಶೀಲನೆ ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಿದ ನಂತರವೇ ಪಟ್ಟಿ ಅಂತಿಮಗೊಳಿಸಬೇಕು ಎಂದು ಆಗ್ರಹಿಸಿದರು.

ಸಮಿತಿಯ ಸದಸ್ಯರಾದ ವಿಠಲದಾಸ ಪ್ಯಾಗೆ ಮಾತನಾಡಿ, “ಎಸ್‌ಐಆರ್ ಹೆಸರಿನಲ್ಲಿರುವ ನಾಗರಿಕರ ಮತದಾನದ ಹಕ್ಕಿಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ. ಈ ಹಿನ್ನೆಲೆಯಲ್ಲಿ ಆಗಸ್ಟ್ 10ರಿಂದ ‘ನಾಗರಿಕ ಮತ ಕಾವಲು ಸಮಿತಿ’ಗಳನ್ನು ರಚಿಸಿ ‘ನಮ್ಮ ಗ್ರಾಮ, ನಮ್ಮ ಪಂಚಾಯಿತಿ, ನಮ್ಮ ಹಕ್ಕು’ ಘೋಷವಾಕ್ಯದಡಿ ಜಿಲ್ಲಾದ್ಯಂತ ಜನಾಂದೋಲನ ಆರಂಭಿಸಲಾಗುವುದು” ಎಂದು ತಿಳಿಸಿದರು.

“ಗ್ರಾಮ ಮತ್ತು ಪಂಚಾಯಿತಿ ಮಟ್ಟದಲ್ಲಿ ಮತದಾರರ ಪಟ್ಟಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ನಿಗಾ ವಹಿಸಲಾಗುವುದು” ಎಂದು ಸಮಿತಿಯ ಸಮಿತಿಯ ಅಬ್ದುಲ್ ಮನ್ನಾನ್ ಸೇಠ್ ಹೇಳಿದರು.

ಇದನ್ನೂ ಓದಿ : ಬೀದರ್‌ | ಕಾರ್ಖಾನೆಗಳ ವಿಷಕಾರಿ ತ್ಯಾಜ್ಯ ಹಳ್ಳದ ಒಡಲಿಗೆ: ಜನ-ಜಾನುವಾರು ಜೀವಕ್ಕೆ ಆಪತ್ತು!

ಸಮಿತಿಯ ಸದಸ್ಯರುಗಳಾದ ಮಹಮ್ಮದ್ ನಿಝಾಮುದ್ದಿನ್, ಮಹೇಶ ಗೋರನಾಳಕರ್, ಜಗದೀಶ್ವರ ಬಿರಾದಾರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...