ಬೀದರ್ | ಜನತಾ ದರ್ಶನ ಕಾರ್ಯಕ್ರಮದಿಂದ ಸಾರ್ವಜನಿಕರ ಸಮಸ್ಯೆಗಳು ನಿವಾರಿಸಲು ಸಾಧ್ಯ: ಸಚಿವ ಈಶ್ವರ ಖಂಡ್ರೆ

Date:

Advertisements
  • ಜನತಾ ದರ್ಶನದಲ್ಲಿ ಬರುವ ಸಾರ್ವಜನಿಕರ ಸಮಸ್ಯೆಗಳು ಸ್ಥಳದಲ್ಲಿಯೇ ಪರಿಹರಿಸಲಾಗುವುದು.
  • ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ.

ಜನರು ತಮ್ಮ ಸಮಸ್ಯೆಗಳನ್ನು ತೆಗೆದುಕೊಂಡು ಜನಪ್ರತಿನಿಧಿಗಳ ಬಳಿಗೆ ಹಾಗೂ ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ ಎಂದು ಅರಣ್ಯ, ಜೈವಿಕ ಹಾಗೂ ಪರಿಸರ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಸೋಮವಾರ ಬೀದರನ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆಯ ಅಹವಾಲು ಸ್ವೀಕರಿಸುವ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಈ ಜನತಾ ದರ್ಶನ ಕಾರ್ಯಕ್ರಮವು ಏಕಕಾಲಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಜನತಾ ದರ್ಶನದಲ್ಲಿ ಬರುವ ಸಾರ್ವಜನಿಕರ ಸಮಸ್ಯೆಗಳ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ಅರ್ಜಿ ವಿಲೇವಾರಿಗೆ ಕಾನೂನಾತ್ಮಕ ತೊಡಕುಗಳಿದ್ದರೆ ಅವುಗಳಿಗೆ ನಿಗದಿತ ಸಮಯ ನೀಡಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೀದರ ಜಿಲ್ಲೆಯ ಜನರು ಈ ಕಾರ್ಯಕ್ರಮದ ಲಾಭ ಪಡೆಯಬೇಕು” ಎಂದರು.

Advertisements

“ನಮ್ಮ ಸರ್ಕಾರ ಬಂದ ಮೇಲೆ ಬೀದರ ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳ ಬವಣೆಯನ್ನು ನೀಗಿಸುವ ನಿಟ್ಟಿನಲ್ಲಿ ಅಗಸ್ಟ್ 28 ರಂದು ನನ್ನ ಅಧ್ಯಕ್ಷತೆಯಲ್ಲಿ ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಜನ ಸ್ಪಂದನಾ ಕಾರ್ಯಕ್ರಮದಲ್ಲಿ 308 ಅರ್ಜಿಗಳು ಬಂದಿದ್ದವು. ಇವುಗಳಲ್ಲಿ 151 ಅರ್ಜಿಗಳಿಗೆ ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗಿತ್ತು. ಉಳಿದ ಅರ್ಜಿಗಳಲ್ಲಿ 141 ಅರ್ಜಿಗಳನ್ನು ನಂತರ ವಿಲೇವಾರಿ ಮಾಡಲಾಗಿದ್ದು. ಇನ್ನು 16 ಅರ್ಜಿಗಳು ಬಾಕಿ ಇವೆ ಅವುಗಳನ್ನು ಸಹ ಆದಷ್ಟು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದರು.

“ಸಾಮಾಜಿಕ ಬದ್ಧತೆ ಯೋಜನೆಯಡಿ ಸೇರಿದಂತೆ ವಿವಿಧ ಯೋಜನೆಯಡಿ ತಮ್ಮ ಕಛೇರಿಗೆ ಬರುವ ಅರ್ಜಿಗಳನ್ನು ಅಧಿಕಾರಿಗಳು ನಿಗದಿತ ಸಮಯಕ್ಕೆ ಪರಿಹರಿಸಬೇಕು. ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಸ್ಮಶಾನ ಭೂಮಿಯ ಕೊರೆತೆಯಿದೆ ಎಂಬ ದೂರುಗಳಿವೆ, ಯಾವ ಭಾಗದಲ್ಲಿ ಸರ್ಕಾರಿ ಜಮೀನುಗಳಿವೆಯೋ ಅಂತಹ ಸ್ಥಳಗಳಲ್ಲಿ ಆದಷ್ಟು ಬೇಗ ಮಂಜೂರು ಮಾಡಬೇಕು. ಯಾವ ಸ್ಥಳಗಳಲ್ಲಿ ಸರ್ಕಾರಿ ಜಮೀನು ಇರುವುದಿಲ್ಲವೋ ಅಂತಹ ಭಾಗಗಳಲ್ಲಿ ಖಾಸಗಿ ಜಮೀನು ಖರೀದಿಸಿ ಮಂಜೂರು ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಜನತಾ ದರ್ಶನ:

“ಮುಂದಿನ ದಿನಗಳಲ್ಲಿ ಈ ಕಾರ್ಯಕ್ರವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಪ್ರತಿ ತಿಂಗಳು ಆಯೋಜಿಸಲಾಗುವುದು. ಇದರಿಂದ ಜನರ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಿದೆ. ಬೀದರ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ತಾಲ್ಲೂಕುಗಳಲ್ಲಿ ಮತ್ತೊಮ್ಮೆ ಸಮೀಕ್ಷೆ ನಡೆಸಿ ಅವುಗಳಲ್ಲಿಯೂ ಯಾವುದಾದರು ತಾಲ್ಲೂಕಿನಲ್ಲಿ ಹೆಚ್ಚಿನ ಹಾನಿಗಳಾಗಿದ್ದರೆ ಕಾನೂನು ವ್ಯಾಪ್ತಿಯ ಅಡಿಯಲ್ಲಿ ಅವುಗಳನ್ನು ಬರ ಪೀಡಿತ ಎಂದು ಘೋಷಿಸಲು ಕ್ರಮ ವಹಿಸಲಾಗುವುದು. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಾಕಿ ಉಳಿಯ ಯುವನಿಧಿ ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಜಾರಿಗೆ ತರಲಾಗುವುದು” ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

“ಜನತಾ ದರ್ಶನ ಕಾರ್ಯಕ್ರಮದಲ್ಲಿ 250 ಅರ್ಜಿಗಳನ್ನು ಜನರು ನೀಡಿದ್ದಾರೆ. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗಿದ್ದು. ಉಳಿದ ಅರ್ಜಿಗಳಿಗೆ ಕಾಲಾವಕಾಶ ನೀಡಿ ಅವುಗಳನ್ನು ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಹದುಬಸ್ತು, ಮುಟೇಶನ್, ಕುಡಿಯುವ ನೀರು, ಬೆಳಕಿನ ವ್ಯವಸ್ಥೆಗಳ ಕೆಲಸವನ್ನು ತುರ್ತಾಗಿ ಮಾಡಲು ಅಧಿಕಾರಿಗಳಿಗೆ ಸೂಚನೆ” ನೀಡಿದರು.

ಜನರ ಬವಣೆಗಳಿಗೆ ಅಧಿಕಾರಿಗಳು ಗೌರವದಿಂದ ಸ್ಪಂದಿಸಬೇಕು:

ಪೌರಾಡಳಿತ ಹಾಗೂ ಹಜ್ ಖಾತೆ ಸಚಿವರಾದ ರಹೀಂಖಾನ್ ಮಾತನಾಡಿ, “ಸಾರ್ವಜನಿಕರು ತಮ್ಮ ಕಛೇರಿಗಳಿಗೆ ಸಮಸ್ಯೆಗಳನ್ನು ತೆಗೆದುಕೊಂಡು ಬಂದಾಗ ಅವರಿಗೆ ಗೌರವದಿಂದ ಕಾಣಬೇಕು, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ತಮ್ಮ ಕಛೇರಿಗೆ ಜನರು ಅವರ ಬವಣೆಯನ್ನು ತೆಗೆದುಕೊಂಡು ಬಂದಾಗ ಅವರಿಗೆ ಸ್ಪಂದನೆ ನೀಡಿದರೆ ಅವರು ಇಲ್ಲಿಗೆ ಬರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರಿಂದ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

“ಮುಂದಿನ ದಿನಗಳಲ್ಲಿ ನಡೆಯುವ ಜನತಾ ದರ್ಶನದ ಪ್ರಚಾರವು ಹೆಚ್ಚಾಗಿ ನಡೆಯಬೇಕು. ಇಂತಹ ಕಾರ್ಯಕ್ರಮಗಳ ಮಾಹಿತಿ ಜನರಿಗೆ ತಲುಪಿದಾಗಲೇ ಅವರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಜನರ ಹಾಗೂ ಅಧಿಕಾರಿಗಳ ಸಹಕಾರವಿದ್ದರೆ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ” ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸಚಿವರು ಹಕ್ಕುಪತ್ರಗಳನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ನೂರರ ನೆನಪು | ದೇವಾನಂದ್ ಎಂಬ ಸಾಹಸಿಗ, ಚಿರಯೌವನಿಗ

ಈ ಸಂದರ್ಭದಲ್ಲಿ ಬೀದರ ನಗರಸಭೆ ಅಧ್ಯಕ್ಷ ಮೋಹ್ಮದ್ ಗೌಸೋದ್ದಿನ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ., ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ.ಎಂ.ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ.ಎಸ್.ಎಲ್., ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ ಸಾರ್ವಜನಿಕರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X