ಬೀದರ್‌ನಲ್ಲಿ ʼವಿವಾಹ ಪೂರ್ವ ಸಂವಾದʼ ಕೇಂದ್ರ ಆರಂಭ

Date:

ಬೀದರ್ ನಗರದ ಬ್ರಿಮ್ಸ್ ಬೋಧಕ ಆಸ್ಪತ್ರೆ ಆವರಣದಲ್ಲಿ ರಾಜ್ಯದ ಮೊದಲ ‘ತೆರೆ ಮೇರೆ ಸಪ್ನೆ’ ವಿವಾಹ ಪೂರ್ವ ಸಂವಾದ ಆರಂಭವಾಗಿದೆ.

- Advertisement -

ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ʼಕೇಂದ್ರವು ವಿವಾಹದ ಬಗೆಗಿನ ಯುವಕ, ಯುವತಿಯರ ಅನೇಕ ಸಂದೇಹಗಳನ್ನು ನಿವಾರಣೆ ಮಾಡಲಿದೆ. ಪ್ರೀತಿ, ವಿಶ್ವಾಸದ ದಾಂಪತ್ಯ ಜೀವನ ನಡೆಸಲು ಸಹಕಾರಿಯಾಗಲಿದೆ. ಕೇಂದ್ರ ಸ್ಥಾಪಿಸಿದ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಶ್ಲಾಘನೀಯ. ಕೇಂದ್ರಕ್ಕೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕುʼ ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ರಾಷ್ಟ್ರೀಯ ಮಹಿಳಾ ಆಯೋಗದ ಮಾರ್ಗದರ್ಶನದಲ್ಲಿ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಹಕಾರ ನೀಡಲಿವೆ.

ದಿಶಾ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ʼಕೇಂದ್ರವು ವಿವಾಹ ಪೂರ್ವದಲ್ಲೇ ಯುವಜನರಿಗೆ ದಾಂಪತ್ಯದ ಮಹತ್ವ ಮನವರಿಕೆ ಮಾಡಲಿದೆ. ಹೊಂದಾಣಿಕೆಯ ಗೌರವಯುತ ದಾಂಪತ್ಯದ ಸೂತ್ರಗಳನ್ನು ಹೇಳಿಕೊಡಲಿದೆ. ಮದುವೆ ನಂತರದ ಗೊಂದಲ, ಮಹಿಳಾ ದೌರ್ಜನ್ಯ ನಿವಾರಣೆ, ವಿವಾಹ ವಿಚ್ಛೇದನಗಳ ನಿಯಂತ್ರಣಕ್ಕೆ ನೆರವಾಗಲಿದೆʼ ಎಂದು ಹೇಳಿದರು.

ʼಕೇಂದ್ರದಲ್ಲಿ ಇಬ್ಬರು ಆಪ್ತ ಸಮಾಲೋಚಕರು ಇರಲಿದ್ದಾರೆ. ಯುವಕ, ಯುವತಿಯರಿಗೆ ಪ್ರತ್ಯೇಕ, ನಂತರ ಪಾಲಕರೊಂದಿಗೆ ಜಂಟಿಯಾಗಿ ಆಪ್ತ ಸಮಾಲೋಚನೆ ನಡೆಸಲಿದ್ದಾರೆ. ಮದುವೆಗೆ ಸಂಬಂಧಿಸಿದ ಸಂದೇಹ ನಿವಾರಿಸಲಿದ್ದಾರೆ. ಉತ್ತಮ ದಾಂಪತ್ಯಕ್ಕೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆʼ ಎಂದು ತಿಳಿಸಿದರು.

ʼಯುವಕ, ಯುವತಿಯರಿಗೆ ವಿವಾಹ ಪೂರ್ವ ಆಪ್ತ ಸಮಾಲೋಚನೆ ಅವಶ್ಯಕವಾಗಿದೆಯೇ ಹೊರತು ಪ್ರಿ ವೆಡ್ಡಿಂಗ್ ಶೂಟ್ ಅಲ್ಲ. ಪ್ರಿ ವೆಡ್ಡಿಂಗ್ ಶೂಟ್‍ನಿಂದ ದುಂದು ವೆಚ್ಚವಾಗುತ್ತಿದೆ. ಅದರ ನಂತರವೂ ಅನೇಕ ಮದುವೆಗಳು ಮುರಿದು ಬಿದ್ದಿವೆ. ಕಾರಣ, ಅಪ್ತ ಸಮಾಲೋಚನೆಯ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

WhatsApp Image 2026 01 01 at 10.40.02 PM
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕೇಂದ್ರ ಉದ್ಘಾಟಿಸಿದರು.

ʼರಾಜ್ಯದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು 2.21 ಲಕ್ಷ ವಿವಾಹ ವಿಚ್ಛೇದನ ಪ್ರಕರಣಗಳು ನ್ಯಾಯಾಲಯಗಳ ಮುಂದಿವೆ. ಇದು, ಆರೋಗ್ಯಕರ ಬೆಳವಣಿಗೆ ಅಲ್ಲ. ದೇಶದ ಸಾಮಾಜಿಕ, ಆರ್ಥಿಕ ಹಿನ್ನೆಡೆಗೆ ಕಾರಣವಾಗಲಿದೆ. ಆದರ್ಶ ದಾಂಪತ್ಯದ ಸೂತ್ರ ತಿಳಿಸುವ ಹಾಗೂ ವಿವಾಹ ವಿಚ್ಛೇದನಗಳನ್ನು ನಿಯಂತ್ರಿಸುವ ಕೆಲಸ ಆಗಬೇಕಿದೆ. ಈ ದಿಸೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆʼ ಎದು ತಿಳಿಸಿದರು.

ಕೇಂದ್ರದ ವಿವಾಹಪೂರ್ವ ಸಂವಾದ ಪುಸ್ತಕವನ್ನು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾಗಭೂಷಣ ಕಮಠಾಣೆ ಬಿಡುಗಡೆ ಮಾಡಿದರು.ಬೇಮಳಖೇಡ ಹಿರೇಮಠ ಸಂಸ್ಥಾನದ ಡಾ. ರಾಜಶೇಖರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸನ್ಮುಕಯ್ಯ ಬಿ. ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ ಎಂ.ಎಸ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಂ.ಡಿ. ಅಹೆಮದೊದ್ದೀನ್, ಭಾರತೀಯ ವೈದ್ಯಕೀಯ ಸಂಘದ ಬೀದರ್ ಘಟಕದ ಅಧ್ಯಕ್ಷ ಡಾ. ವಿಜಯ ಬಲ್ಲೂರಕರ್, ಮಹಾನಗರ ಪಾಲಿಕೆಯ ಸದಸ್ಯೆ ಉಲ್ಲಾಸಿನಿ ವಿಕ್ರಮ ಮುದಾಳೆ, ಮೇರಾ ಯುವ ಭಾರತ್‍ನ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಬಿ.ವಿ. ಶಿವಪ್ರಕಾಶ್ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನ : ಮಹೇಶ ಗೊರನಾಳಕರ್

ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಅಬ್ದುಲ್ ಸತ್ತಾರ್, ಮಹಾನಗರ ಪಾಲಿಕೆ ಸದಸ್ಯೆ ಜ್ಯೋತಿ ಶಿವರಾಜ ಗುಮ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಶ್ರೀಕಾಂತ ವೈರಾಗೆ, ಉಪ ನೋಂದಣಾಧಿಕಾರಿ ಹಾಗೂ ವಿವಾಹ ನೋಂದಣಾಧಿಕಾರಿ ಪ್ರಿಯಂಕಾ ಕೆ.ಪಾಟೀಲ, ಸಂವಾದ ಕೇಂದ್ರದ ಆಡಳಿತಾಧಿಕಾರಿ ಸಂಗೀತಾ ಪಾಟೀಲ, ಸಮಾಲೋಚಕಿ ಚೆನ್ನಾಂಬಿಕಾ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಿರ್ದೇಶಕ ಪ್ರವೀಣ್ ಸ್ವಾಮಿ, ನಾಗರಾಜ ಮಠ, ಪ್ರಮುಖರಾದ ಓಂಪ್ರಕಾಶ ರೊಟ್ಟೆ, ವರದಯ್ಯ ಸ್ವಾಮಿ, ಮಹೇಶ ಪಾಟೀಲ, ಶಿವಶಂಕರ ಬೆಳಮಗಿ, ಚಂದ್ರಕಾಂತ ಚೆನ್ನಳ್ಳಿ, ಅಂಬರೀಷ್ ಕಮಠಾಣೆ, ನಾಗಯ್ಯ ಸ್ವಾಮಿ, ಶ್ರೀಕಾಂತ ಹೊನ್ನಿಕೇರಿ ಮತ್ತಿತರರು ಇದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಅಧಿಕಾರಿ ರೂಪಾ ಸ್ವಾಗತಿಸಿದರು. ಬಿ.ವಿ.ಬಿ. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರೇಣುಕಾದೇವಿ ಮಳ್ಳಿ ನಿರೂಪಿಸಿದರು. ಸಂವಾದ ಕೇಂದ್ರದ ಸಂಯೋಜಕಿ ಕಾವೇರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್...

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...