ಬೀದರ್‌ | ಕೇಂದ್ರ ಸರ್ಕಾರ ಕೊಲೆಗಡುಕರಿಗೆ ವಿಧಿಸುವ ಕಾನೂನು ವಾಹನ ಚಾಲಕರ ಮೇಲೆ ಹೇರುತ್ತಿದೆ

Date:

ರಸ್ತೆ ಅಪಘಾತ ಸಂಭವಿಸಿದ ಬಳಿಕ ಪರಾರಿಯಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಹನ ಚಾಲಕನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಹೊಸ ಕಾನೂನು ವಿರೋಧಿಸಿ ಬೀದರ್‌ ನಲ್ಲಿ ವಾಹನ ಚಾಲಕರ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

- Advertisement -

ಕರ್ನಾಟಕ ಚಾಲಕರ ಒಕ್ಕೂಟ ಹಾಗೂ ಜಿಲ್ಲಾ ಲಾರಿ ಚಾಲಕರು ಮತ್ತು ಮಜ್ದೂರ್‌ ಅಸೋಸಿಯೇಷನ್ ಪದಾಧಿಕಾರಿಗಳು ನಗರದ ಗಾಂಧಿ ಗಂಜ್‌ ದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಕೇಂದ್ರ ಸರ್ಕಾರ ಅವೈಜ್ಞಾನಿಕವಾದ ಕಾನೂನು ಜಾರಿಗೆ ತರಲು ಹೊರಟಿದೆ,ಕಳೆದ 25ರಂದು ಸಂಸತ್ತಿನಲ್ಲಿ ಒಪ್ಪಿಗೆ ಪಡೆದು ರಾಷ್ಟ್ರಪತಿಗಳ ಅಂಕಿತಕ್ಕೆ ಕಳಿಸಲಾಗಿದೆ. ಚಾಲಕ ರಸ್ತೆಯಲ್ಲಿ ಅಪಘಾತ ಮಾಡಿದಂತಹ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಸ್ತೆಯಲ್ಲಿ ಬಿಟ್ಟು ಹೋಗುವ ಹಾಗಿಲ್ಲ, ಸ್ಥಳದಲ್ಲೇ ಇದ್ದು ಆಸ್ಪತ್ರೆಗೆ ಸಾಗಿಸಬೇಕು. ಮಹಜರು ಮಾಡುವ ಸಂದರ್ಭದಲ್ಲಿ ಸ್ಥಳದಲ್ಲಿ ಇರಬೇಕು. ಚಾಲಕನು ಅಲ್ಲಿಂದ ಪರಾರಿಯಾದರೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ನೂತನ ಕಾನೂನು ಜಾರಿಗೆ ತರುವುದು ಖಂಡನೀಯ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ಅಪಘಾತ ನಡೆದ ವೇಳೆ ಸ್ಥಳಿಯರು ಮತ್ತು ಸಂಬಂಧಿಕರು ಎಷ್ಟೋ ಚಾಲಕರನ್ನು ಕೊಂದಿರುವ ಉದಾಹರಣೆಗಳಿವೆ. ಹೀಗಾದರೆ ಚಾಲಕರ ಜೀವಕ್ಕೆ ಹೊಣೆಗಾರರು ಯಾರಾಗುತ್ತಾರೆ. ಕೆಂದ್ರ ಸರ್ಕಾರ ಈ ಹೊಣೆಯನ್ನು ಹೊರಲು ಸಾಧ್ಯವೇ. ಕೇಂದ್ರ ಸರ್ಕಾರ ಕೊಲೆಗಡುಕರಿಗೆ ವಿಧಿಸುವಂತಹ ಕಾನೂನನ್ನು ಚಾಲಕರ ಮೇಲೆ ಹೇರಲು ಹೊರಟಿದೆ, ಚಾಲಕರನ್ನು ರಸ್ತೆಯಲ್ಲಿ ಕೊಲ್ಲಿಸುವ ಪ್ರಯತ್ನ ನಡೆಸಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಇರಾನ್‌ನಲ್ಲಿ ಬಾಂಬ್ ಸ್ಪೋಟ: 103 ಕ್ಕೂ ಅಧಿಕ ಮಂದಿ ಸಾವು

ಚಾಲಕರ ವಿರುದ್ದ ಜಾರಿಗೆ ತರಲು ಹೊರಟಿದ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಬಾರದು. ಈಗಾಗಲೇ ಸಾವಿರಾರು ಚಾಲಕರು ಚಾಲಕರು ಕೆಲಸ ಬಿಟ್ಟು ಮನೆಯಲ್ಲೇ ಕೂತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದ ಸಾರಿಗೆ ಸಚಿವರು ಚಾಲಕರಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದರು.

ವರದಿ ಮಾಹಿತಿ : ರೇವಣಸಿದ್ದ ಹಡಪದ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...