ಬೀದರ್‌ | ಬರ ಪರಿಹಾರ ಶೀಘ್ರ ಬಿಡುಗಡೆಗೆ ಕೂಲಿ ಕಾರ್ಮಿಕರ ಆಗ್ರಹ

Date:

ಬರ ಪರಿಹಾರ ಹಾಗೂ ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಕಾರ್ಯಕರ್ತರು ಔರಾದ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿರೇಂದ್ರಸಿಂಗ್‌ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಸೈಯದ್‌ ಇಸಾಮೋದ್ದಿನ್‌ ಮಾತನಾಡಿ, “ರಾಜ್ಯದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ರಾಜ್ಯದ 236 ತಾಲ್ಲೂಕುಗಳಲ್ಲಿ 223 ತಾಲೂಕುಗಳು ಬರಪೀಡಿತವೆಂದು ಸರ್ಕಾರ ಘೋಷಣೆ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ 18 ಸಾವಿರ ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. 196 ತಾಲೂಕುಗಳಲ್ಲಿ ಬರದ ತೀವ್ರತೆ ಇದೆ. ಕುಡಿಯಲು ಶುದ್ಧ ನೀರು, ಜಾನುವಾರಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಮಳೆಯ ಅಭಾವದಿಂದ ಅನ್ನದಾತರು ಸಂಕಷ ಸಿಲುಕಿದ್ದಾರೆ. ಕಳೆದ 10 ವರ್ಷಗಳಲ್ಲಿ ಕಂಡು ಕೇಳರಿಯದ ಬರ ಪರಿಸ್ಥಿತಿ ಉಂಟಾಗಿದೆ. ಕೂಲಿಕಾರದ ಹೊಟ್ಟೆಪಾಡಿಗಾಗಿ ವಲಸೆ ಹೋಗುವುದು ಸಿಕ್ಕಾಪಟ್ಟೆ ಹೆಚ್ಚಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಔರಾದ ತಾಲೂಕಿನ ಬಡ ಕಾರ್ಮಿಕರ ಹಿತದೃಷ್ಟಿಯಿಂದ ಮನರೇಗಾ ಕಾರ್ಮಿಕರಿಗೆ ಆಧಾರ್ ಅಡಿಯಲ್ಲಿ ವೇತನ ನೀಡುವ ಪದ್ಧತಿಯನ್ನು ಕೈಬಿಡಬೇಕು. ಬರಗಾಲ ನಿಮಿತ್ತ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ವರ್ಷದಲ್ಲಿ 100 ದಿನಗಳ ಬದಲಾಗಿ 200 ದಿನಗಳ ಕೆಲಸ ಒದಗಿಸಬೇಕು. ಕೂಲಿಕಾರರ ಕನಿಷ್ಠ ದಿನಗೂಲಿ ರೂ.600ಕ್ಕೆ ಹೆಚ್ಚಿಸಬೇಕು. ಕೂಲಿಕಾರರು ಬ್ಯಾಂಕುಗಳಿಂದ ಪಡೆದ ಸಾಲ ಹಾಗೂ ಮೈಕ್ರೋಫೈನಾನ್ಸ್ ಮೂಲಕ ಪಡೆದ ಸಾಲವನ್ನು ಮನ್ನಾ ಮಾಡಬೇಕು. ವಲಸೆ ಕಾರ್ಮಿಕರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಬರಗಾಲದ ಸಮಯದಲ್ಲಿ ಯಂತ್ರಗಳ ಬಳಕೆ ನಿಲ್ಲಿಸಿ ಕೂಲಿಕಾರರಿಗೆ ಕೆಲಸದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕಿನ ಬರಗಾಲ ಘೋಷಣೆಯಾಗಿರುವ ಬರ ಪರಿಹಾರ ಆದಷ್ಟು ಬೇಗ ಕೂಡಲೇ ಸರಕಾರ ಬಿಡುಗಡೆ ಮಾಡಬೇಕು ಸೇರಿದಂತೆ ಕಾರ್ಮಿಕರ 15 ಬೇಡಿಕೆಗಳು ಈಡೇರಿಸಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಜಗಳ; ರೈತನ ಕೊಲೆ

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆ ತಾಲೂಕಾಧ್ಯಕ್ಷ ರಾಮಚಂದ್ರ, ಕಾರ್ಯದರ್ಶಿ ಸಂಗ್ರಾಮ, ಸಹ ಕಾರ್ಯದರ್ಶಿ ಸುರೇಶ ಜಿಲ್ಲಾ ಉಪಾಧ್ಯಕ್ಷ ಮಹೇಶ ಕಾಟೆ, ಸಹ ಕಾರ್ಯದರ್ಶಿ ದೇವಾನಂದ ಗಾಯಕವಾಡ ಹಾಗೂ ಸಚಿನ ಗುಂಡೆ, ಶಿವರಾಜ, ಬಂಡೆಪ್ಪಾ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...