ಬೀದರ್‌ ನಗರದಲ್ಲಿ ಸಂಚಾರ ದಟ್ಟಣೆ : ಅಗತ್ಯ ಕ್ರಮಕ್ಕೆ ಮನವಿ

Date:

ಬೀದರ್ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.

- Advertisement -

ಈ ಬಗ್ಗೆ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ನಗರದ ಬಹುತೇಕ ಶಾಪಿಂಗ್ ಮಾಲ್, ಹೋಟೆಲ್, ವಸತಿಗೃಹ, ಆಸ್ಪತ್ರೆ, ವಾಣಿಜ್ಯ ಮಳಿಗೆ ಮತ್ತಿತರ ಕಟ್ಟಡಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ವಾಹನಗಳು ರಸ್ತೆ ಮೇಲೆ ನಿಲುಗಡೆ ಆಗುತ್ತಿವೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಕೆಲವೊಮ್ಮೆ ಟ್ರಾಫಿಕ್ ಜಾಮ್ ಕೂಡ ಆಗುತ್ತಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ತಿಳಿಸಿದ್ದಾರೆ.

“ಪಾರ್ಕಿಂಗ್ ವ್ಯವಸ್ಥೆ ಇಲ್ಲದ ವಾಣಿಜ್ಯ ಕಟ್ಟಡಗಳ ವಿರುದ್ಧ ಕ್ರಮ ಜರುಗಿಸಬೇಕು. ಶಿವನಗರ ಬಳಿ ರಸ್ತೆ ಬದಿಯಲ್ಲಿ ವಾಹನ ಹಾಗೂ ಬಂಡಿಗಳ ನಿಲುಗಡೆಯಿಂದ ಆಗುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಬೇಕು. ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳ ನಿಗದಿಪಡಿಸಬೇಕು. ನೌಬಾದ್ ಬಸವೇಶ್ವರ ವೃತ್ತ ಸೇರಿ ನಗರದ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಿ, ಸಂಚಾರ ದಟ್ಟಣೆ ನಿಯಂತ್ರಿಸಬೇಕು. ಕೇಂದ್ರ ಬಸ್ ನಿಲ್ದಾಣ ಸಮೀಪ ಆಟೋ ಹಾಗೂ ಇತರ ವಾಹನ ನಿಲ್ಲಿಸುವುದನ್ನು ನಿರ್ಬಂಧಿಸಬೇಕು. ಭಾರಿ ವಾಹನಗಳ ನಗರ ಪ್ರವೇಶಕ್ಕೆ ಸಮಯ ನಿಗದಿಪಡಿಸಬೇಕು. ನಗರದಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ತೆರವುಗೊಳಿಸಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.‌

ಇದನ್ನೂ ಓದಿ : ಔರಾದ್‌ | 3 ವರ್ಷ ಕಳೆದರೂ ಆರಂಭವಾಗದ ಕೆರೆ ತುಂಬಿಸುವ ಯೋಜನೆ ಕಾಮಗಾರಿ

ಈ ಸಂದರ್ಭದಲ್ಲಿ ಸೇನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಸಹ ಕಾರ್ಯದರ್ಶಿ ಮಹಾರುದ್ರ ಅಮದಲಪಾಡೆ, ಪ್ರಧಾನ ಸಂಚಾಲಕ ಸುಧಾಕರ ರಾಠೋಡ್, ನಗರ ಘಟಕದ ಅಧ್ಯಕ್ಷ ಸಂತೋಷ ಪಾಟೀಲ, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಅನಿಲ್ ರೆಡ್ಡಿ, ಆದಿತ್ಯ ರೆಡ್ಡಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸೇವೆಗೆ ಮನ್ನಣೆ: ಯೆನೆಪೋಯ ಪದವಿ ಕಾಲೇಜಿನ ಮೂವರಿಗೆ ರಾಜ್ಯ ಪ್ರಶಸ್ತಿ

ಯೆನೆಪೋಯ (ಪರಿಗಣಿತ) ವಿಶ್ವವಿದ್ಯಾಲಯದ ಘಟಕ ಸಂಸ್ಥೆಯಾದ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್,...

ಸ್ಟಾಲಿನ್ ಮಣಿಸಿದ್ದ ಶಾಸಕ ನಿಧನ: ಉಪಚುನಾವಣೆಯಲ್ಲಿ ಮತ್ತೆ ಅದೃಷ್ಟ ಪರೀಕ್ಷೆಗಿಳಿಯುವರೇ ಡಿಎಂಕೆ ಅಧ್ಯಕ್ಷ?

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮುಖ್ಯಸ್ಥ ಹಾಗೂ ಅಂದಿನ ಮುಖ್ಯಮಂತ್ರಿ ಎಂ.ಕೆ....

15,000 ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ: ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಪ್ರಕಟ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ...

ನಾಗಾವಿ ಪಿ.ಎಮ್.ಶ್ರೀ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಅರಿವು ಕಾಯಕ್ರಮ

ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅರಿವು ಕಾಯಕ್ರಮವನ್ನು ಜಿಲ್ಲಾ ಪಂಚಾಯತ್, ಮಕ್ಕಳ...