ಕೇಂದ್ರ ಬಜೆಟ್‌ | ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿದೆ : ಸಚಿವ ಈಶ್ವರ ಖಂಡ್ರೆ

Date:

ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್‌ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಇದು ಸಂಪೂರ್ಣ ನಿರಾಶಾದಾಯಕವಾಗಿದೆ. ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿರುವ ಈ ಬಜೆಟ್ ದೇಶದ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಟೀಕಿಸಿದ್ದಾರೆ.

- Advertisement -

ʼಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್‌ನಲ್ಲಿ ಯಾವುದೇ ಗಣನೀಯ ಸುಧಾರಣೆ ಕಾಣಿಸಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ನಿಯಂತ್ರಣದ ಲಕ್ಷಣವೂ ಇಲ್ಲ. ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾದ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್‌ನಲ್ಲಿ ಕಾಣುವುದಿಲ್ಲʼ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ʼಹೈದ್ರಾಬಾದ್–ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಸಮಾಧಾನಕರ ಬಹುಮಾನವಷ್ಟೇ. ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆʼ ಎಂದರು.

ಶ್ರೀಗಂಧದ ಬೆಳೆಗೆ ಉತ್ತೇಜನದ ಮಾತು ಮಾತ್ರ:

ʼಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನದ ಮಾತುಗಳನ್ನಾಡಿದೆ. ಆದರೆ, ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಹೆಚ್ಚು ಇರುತ್ತದೆ. ರೈತರು ಜಮೀನಿನಲ್ಲಿ ಗೊಬ್ಬರ ಹಾಕಿ ಬೆಳೆಯುವ ಶ್ರೀಗಂಧಕ್ಕೆ ಹೆಚ್ಚಿನ ಬೆಲೆ ದೊರಕುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಸಂಕಷ್ಟ ಅನುಭವಿಸುವ ಸಾಧ್ಯತೆ ಇದೆʼ ಎಂದು ತಿಳಿಸಿದ್ದಾರೆ.

ʼರಾಜ್ಯ ಸರ್ಕಾರ ಈಗಾಗಲೇ ನೂತನ ಶ್ರೀಗಂಧ ನೀತಿಯನ್ನು ರೂಪಿಸಿದೆ. ಕಡಲ ಆಮೆಗಳ ಸಂರಕ್ಷಣೆಯನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸಿ ಮಾದರಿಯ ಕೆಲಸ ಮಾಡಿದೆ. ಮಂಗಳೂರು ಮತ್ತು ಕಾರವಾರ ಭಾಗಗಳಲ್ಲಿ ಕಡಲ ಆಮೆಗಳ ಮೊಟ್ಟೆಗಳ ಸಂರಕ್ಷಣೆ ಮತ್ತು ಮರಿಗಳ ರಕ್ಷಣೆಗೆ ಪರಿಣಾಮಕಾರಿ ಕ್ರಮ ಕೈಗೊಂಡಿದೆʼ ಎಂದರು.

ಇದನ್ನೂ ಓದಿ : ಬಜೆಟ್‌ನಲ್ಲಿ ಬಂಗಾಳದ ಬಗ್ಗೆ ಪ್ರಸ್ತಾಪವಿಲ್ಲ, ಕೇಂದ್ರ ನಮ್ಮನ್ನು ‘ಬಾಂಗ್ಲಾದೇಶಿಗಳು’ ಎಂಬಂತೆ ನೋಡುತ್ತೆ: ಅಭಿಷೇಕ್ ಬ್ಯಾನರ್ಜಿ

ʼಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದರೂ, ಯುವಜನರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಬಜೆಟ್‌ನಲ್ಲಿಯೂ ರಾಜ್ಯದ ಯುವಕರಿಗೆ ಭರವಸೆ ನೀಡುವಂತಹ ಯಾವುದೇ ಯೋಜನೆ ಕಾಣುತ್ತಿಲ್ಲʼ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ಹುಮನಾಬಾದ್ | ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ : ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಹುಮನಾಬಾದ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳು, ಹೆರಿಗೆಗೆ ಬರುವ ಮಹಿಳೆಯರು...

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...