ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಗೆ ವಿನಯಕುಮಾರ್ ಮಾಳಗೆ ನಾಮನಿರ್ದೇಶನ

Date:

ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳ ಗಡಿ ವೈಜ್ಞಾನಿಕ ಪುನರ್‌ಪರಿಶೀಲನೆ ಮತ್ತು ಪುನರ್‌ನಿರ್ಧಾರ ಪ್ರಕ್ರಿಯೆಯ ಭಾಗವಾಗಿ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ್ ಮಾಳಗೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

- Advertisement -

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಗೆ ವಿನಯಕುಮಾರ ಮಾಳಗೆ ಸೇರಿ ಒಟ್ಟು ನಾಲ್ವರು ಸದಸ್ಯರು, ಚೇರ್‌ಪರ್ಸನ್ ಹಾಗೂ ಸದಸ್ಯ ಕಾರ್ಯದರ್ಶಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಈ ಜವಾಬ್ದಾರಿ ನೀಡಿದ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ಹಿಂದೆ ಅರಣ್ಯ ಸಚಿವರಾಗಿದ್ದ ಜಿಲ್ಲೆಯವರೇ ಆದ ಈಶ್ವರ ಖಂಡ್ರೆ ಅವರು ತಮ್ಮನ್ನು ರಾಜ್ಯ ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಿದ್ದನ್ನು ವಿನಯಕುಮಾರ ಸ್ಮರಿಸಿದ್ದಾರೆ.

ಹುಲಿ ಸಂರಕ್ಷಿತ ಪ್ರದೇಶಗಳ ಗಡಿ ಪುನರ್‌ಪರಿಶೀಲನೆ ವೇಳೆ ವನ್ಯಜೀವಿ ಸಂರಕ್ಷಣೆಯ ಜೊತೆಗೆ ಸ್ಥಳೀಯ ಸಮುದಾಯಗಳ ಜೀವನೋಪಾಯ, ಸಾಮಾಜಿಕ-ಸಾಂಸ್ಕೃತಿಕ ಹಿನ್ನೆಲೆ ಹಾಗೂ ಕಾನೂನುಬದ್ಧ ಹಕ್ಕುಗಳನ್ನು ವೈಜ್ಞಾನಿಕವಾಗಿ ಪರಿಗಣಿಸುವುದು ಅಗತ್ಯವಾಗಿದೆ. ಸಂರಕ್ಷಣೆ ಮತ್ತು ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸಿ, ಸ್ಥಳೀಯ ಜನರ ಸಹಭಾಗಿತ್ವಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ವಿನಯಕುಮಾರ್ ಮಾಳಗೆ ತಿಳಿಸಿದ್ದಾರೆ.

ವನ್ಯಜೀವಿಗಳ ಸಂರಕ್ಷಣೆ ಮತ್ತು ಸ್ಥಳೀಯ ಜನರ ಹಕ್ಕುಗಳ ರಕ್ಷಣೆ ಪರಸ್ಪರ ಪೂರಕವಾಗಿರಬೇಕು. ಈ ಜವಾಬ್ದಾರಿಯನ್ನು ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ವಸ್ತುನಿಷ್ಠತೆಯಿಂದ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

WhatsApp Image 2026 10 10 at 7.46.08 PM 43
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...