ಭಾರತ ಚುನಾವಣಾ ಆಯೋಗವು ಬೆಂಗಳೂರು ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದು, ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ.
ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂನ್ 6 ರಂದು ಮತ ಎಣಿಕೆ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಕುಣಿಗಲ್ ಎಕ್ಸ್‌ಪ್ರೆಸ್ ಕೆನಾಲ್‌ಗೆ ವಿರೋಧ; ಹೋರಾಟದ ಎಚ್ಚರಿಕೆ
“ಮೇ 02 ರಿಂದಲೇ ಚುನಾವಣೆ ಮಾದರಿ ನೀತಿ ಸಂಹಿತೆಯು ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ” ಎಂದು ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
