ತವರಲ್ಲೇ ಸಿಎಂ ಬೊಮ್ಮಾಯಿಗೆ ಶಾಕ್!

Date:

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಈ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರೂರದ ಹಾವೇರಿಯಲ್ಲಿ ಬಿಜಿಪಿ ಹೀನಾಯ ಸೋಲು ಕಂಡಿದೆ.

2018ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಗೆದ್ದು, ಮೇಲುಗೈ ಸಾಧಿಸಿತ್ತು. ಆದರೆ, ಈ ಬಾರಿ ಬಸವರಾಜ ಬೊಮ್ಮಾಯಿ ಅವರನ್ನು ಹೊರತು ಪಡಿಸಿದರೆ, ಜಿಲ್ಲೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಕಾಣಲಾಗಿಲ್ಲ. ಬೊಮ್ಮಾಯಿ ಅವರ ಶಿಗ್ಗಾವಿ ಬಿಟ್ಟು, ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಹೀನಾಯವಾಗಿ ಸೋಲುಂಡಿದೆ. ಆ ಎಲ್ಲ ಕ್ಷೇತ್ರಗಳನ್ನು ಕಾಂಗ್ರೆಸ್‌ ತನ್ನ ತೆಕ್ಕೆಗೆ ತೆದುಕೊಂಡಿದೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯ ಅವರು ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಆದರೆ, ತನ್ನ ಪಕ್ಷದ ಇತರ ನಾಯಕರನ್ನು ತವರೂರಲ್ಲಿ ಗೆಲ್ಲಿಸಿಕೊಳ್ಳುವಲ್ಲಿ ಅವರು ವಿಫಲರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್ ಮಾನೆ ಅವರು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಹೀನಾಯವಾಗಿ ಸೋಲಿಸಿದ್ದಾರೆ. ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರುದ್ರಪ್ಪ ಲಮಾಣಿ ಮುನ್ನೆಡೆ ಸಾಧಿಸಿದ್ದು, ಬಿಜೆಪಿ, ಜೆಡಿಎಸ್ ಹಿನ್ನಡೆ ಅನುಭವಿಸಿವೆ.

ಬ್ಯಾಡಗಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಶಿವಣ್ಣನವರ ಮುನ್ನೆಡೆ ಸಾಧಿಸಿದ್ದು, ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಯು.ಬಿ ಬಣಕಾರ ಗೆಲುವು ಕಂಡಿದ್ದಾರೆ. ರಾಣೆ ಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಕಾಶ್ ಕೋಳವಾಡ ವಿಜಯಸಾಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಿಜೆಪಿಯ ದ್ವೇಷ ರಾಜಕೀಯಕ್ಕೆ ರಾಜ್ಯದ ಜನರಿಂದ ತಕ್ಕ ಉತ್ತರ: ಬಿ ಕೆ ಹರಿಪ್ರಸಾದ್

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...