ಬಿಹಾರ ಸಿಎಂ ನಿತೀಶ್ ಕುಮಾರ್ ಮುಸ್ಲಿಮ್ ಮಹಿಳಾ ವೈದ್ಯೆಯ ನಿಕಾಬ್ ಎಳೆದಿರುವ ಘಟನೆ ಖಂಡನೀಯ: ಫಾರ್ವರ್ಡ್ ಟ್ರಸ್ಟ್

Date:

ಪಟ್ನಾದಲ್ಲಿ ಡಿಸೆಂಬರ್ 15, 2025ರಂದು ನಡೆದ ಆಯುಷ್ ವೈದ್ಯರ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ಮಹಿಳಾ ವೈದ್ಯರೊಬ್ಬರ ನಿಖಾಬ್ ಅನ್ನು ಎಳೆದ ಕೃತ್ಯ ಅತ್ಯಂತ ಅಮಾನವೀಯ ಮತ್ತು ಖಂಡನೀಯವಾಗಿದೆ ಎಂದು ಫಾರ್ವರ್ಡ್ ಟ್ರಸ್ಟ್ ನ ತಸ್ನೀಮ್ ಫರ್ಜಾನಾ ಹೇಳಿದ್ದಾರೆ.

- Advertisement -

ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ಧಾರ್ಮಿಕ ಸ್ವಾತಂತ್ರ್ಯ, ವೈಯಕ್ತಿಕ ಘನತೆ ಮತ್ತು ಗೌರವವನ್ನು ಖಾತರಿಪಡಿಸಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಮಹಿಳೆಯ ಧಾರ್ಮಿಕ ಆಚರಣೆ ಅಥವಾ ವೈಯಕ್ತಿಕ ಆಯ್ಕೆಯನ್ನು ಸಾರ್ವಜನಿಕವಾಗಿ ಉಲ್ಲಂಘಿಸುವುದು ಸಂವಿಧಾನದ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ಮಾತ್ರವಲ್ಲ ಈ ಕೃತ್ಯವು ಮಹಿಳೆಯರ ಘನತೆ, ಸುರಕ್ಷತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ದೇಶದ ಸಂವಿಧಾನವು ಎಲ್ಲ ನಾಗರಿಕರಿಗೂ ಗೌರವಯುತ, ಘನತೆಯುತ ಮತ್ತು ಸಮಾನ ಜೀವನವನ್ನು ಭರವಸೆ ನೀಡುತ್ತದೆ. ಒಂದು ಕಡೆ ದೇಶವನ್ನು ತಾಯಿಯೆಂದು ಪೂಜಿಸುತ್ತೇವೆ. ಮತ್ತೊಂದು ಕಡೆ ಈ ದೇಶದಲ್ಲಿ ಮಹಿಳೆಯರ ಮೇಲೆ ಈ ರೀತಿಯ ದಾಳಿಗಳು ನಿರಂತರವಾಗಿ ನಡೆಯುತ್ತಿರುವುದು ದುರಾದೃಷ್ಟಕರ. ಈ ಕೃತ್ಯವನ್ನು
ಫಾರ್ವರ್ಡ್ ಟ್ರಸ್ಟ್ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತೇವೆ ಹಾಗೂ ಎಲ್ಲ ಮಹಿಳೆಯರ ಧಾರ್ಮಿಕ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಆಯ್ಕೆಯನ್ನು ರಕ್ಷಿಸಲು ಸೂಕ್ತ ಕಾನೂನುಗಳು ಮತ್ತು ನೀತಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಫಾರ್ವರ್ಡ್ ಟ್ರಸ್ಟ್ ಒತ್ತಾಯಿಸುತ್ತದೆ ಎಂದು ಫರ್ಜಾನಾ‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...